ಮೂವರು ಭಾರತೀಯ ಪತ್ರಕರ್ತರಿಗೆ ಪ್ರತಿಷ್ಟಿತ ಪುಲಿಟ್ಜರ್ ಪ್ರಶಸ್ತಿ
ನ್ಯೂಯಾರ್ಕ್, ಮೇ 5: ಮೂವರು ಭಾರತೀಯ ಪತ್ರಕರ್ತರಿಗೆ ಪ್ರತಿಷ್ಟಿತ ಪುಲಿಟ್ಜರ್ ಪ್ರಶಸ್ತಿ ಒಲಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಎಪಿ ಸುದ್ದಿಸಂಸ್ಥೆಗೆ ಕಾರ್ಯನಿರ್ವಹಿಸುತ್ತಿರುವ ಮೂವರು ಫೋಟೊ ಪತ್ರಕರ್ತರು ಪತ್ರಿಕೋದ್ಯಮದ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದಾರ್ ಯಾಸೀನ್, ಮುಕ್ತಾರ್ ಖಾನ್ ಮತ್ತು ಚನ್ನಿ ಆನಂದ ಅವರಿಗೆ 2020 ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಸಂದಿದೆ. ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು (370) ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಒಂದು ವರ್ಷದ ವರೆಗೆ ಕಣಿವೆ ರಾಜ್ಯವನ್ನು ಸಂಪೂರ್ಣ ಲಾಕ್ಡೌನ್ ಮಾಡಿತ್ತು. ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಿತ್ತು.
ಈ ಸಂದರ್ಭದಲ್ಲಿ ದಾರ್ ಯಾಸೀನ್, ಮುಕ್ತಾರ್ ಖಾನ್ ಮತ್ತು ಚನ್ನಿ ಆನಂದ ಅವರು ತೆಗೆಯಲಾಗಿದ್ದ ಛಾಯಾಚಿತ್ರಗಳು (Feature Photos) ಅವರಿಗೆ ಪುಲಿಟ್ಜರ್ ಪ್ರಶಸ್ತಿ ತಂದು ಕೊಟ್ಟಿವೆ.

ಜೊಸೆಪ್ ಪುಲಿಟ್ಜರ್ ಅಕಾಡೆಮಿಯು ಈ ವರ್ಷ ಒಟ್ಟು 21 ವಿಭಾಗಗಳಲ್ಲಿ 11 ಪತ್ರಕರ್ತರಿಗೆ ಪ್ರಶಸ್ತಿ ನೀಡಿದೆ. 1917 ರಿಂದ ಪತ್ರಿಕೋದ್ಯಮದಲ್ಲಿನ ಶ್ರೇಷ್ಠ ಸಾಧನೆಗಳಿಗೆ ಈ ಪ್ರಶಸ್ತಿ ಮುಡಿಪಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications