• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಾಕಿಸ್ತಾನದ ಐಷಾರಾಮಿ ಹೋಟೆಲ್‌ನಲ್ಲಿ ಬಾಂಬ್ ಸ್ಫೋಟ, ನಾಲ್ವರು ಸಾವು

|

ಇಸ್ಲಾಮಾಬಾದ್, ಏಪ್ರಿಲ್ 23: ಪಾಕಿಸ್ತಾನದ ಐಷಾರಾಮಿ ಹೋಟೆಲ್‌ ಒಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದ ಐಷಾರಾಮಿ ಹೋಟೆಲ್‌ ನ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ಬಾಂಬ್‌ ಸ್ಪೋಟದ ಕೃತ್ಯದ ಹೊಣೆ ತನ್ನದು ಎಂದು ಪಾಕಿಸ್ತಾನ ತಾಲಿಬಾನಿ ಹೇಳಿಕೊಂಡಿದೆ. ಚೀನಾ ರಾಯಭಾರಿ ತಂಗಿದ್ದ ಕ್ವೆಟ್ಟಾ ನಗರದ ಐಷಾರಾಮಿ ಸೆರೆನಾ ಹೋಟೆಲ್‌ನ ಪಾರ್ಕಿಂಗ್ ಸ್ಥಳದಲ್ಲಿ ಈ ಸ್ಫೋಟ ಸಂಭವಿಸಿದ್ದು, ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಸ್ಫೋಟಕ ತುಂಬಿದ್ದ ವಾಹನಕ್ಕೆ ಸ್ವತಃ ಬೆಂಗಾವಲಾಗಿ ತೆರಳಿದ್ದ ಪೊಲೀಸ್ ಅಧಿಕಾರಿಸ್ಫೋಟಕ ತುಂಬಿದ್ದ ವಾಹನಕ್ಕೆ ಸ್ವತಃ ಬೆಂಗಾವಲಾಗಿ ತೆರಳಿದ್ದ ಪೊಲೀಸ್ ಅಧಿಕಾರಿ

ಪಾಕಿಸ್ತಾನದಲ್ಲಿರುವ ಚೀನಾ ರಾಯಬಾರಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎನ್ನಲಾಗಿದ್ದು, ರಾಯಭಾರಿ ನೇತೃತ್ವದ ನಾಲ್ಕು ಜನರ ಚೀನಾದ ನಿಯೋಗವು ಹೋಟೆಲ್‌ನಲ್ಲಿ ತಂಗಿತ್ತು. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ರಾಯಭಾರಿ ಅವರು ಸಭೆಗೆ ತೆರಳಿದ್ದರು ಎಂದು ಹಿರಿಯ ಪೊಲೀಸ್‌ ಅಧಿಕಾರಿ ಅಜರ್ ಇಕ್ರಂ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಲೂಚಿಸ್ತಾನ್ ಪ್ರಾಂತೀಯ ಸರ್ಕಾರದ ವಕ್ತಾರ ಲಿಯಾಕತ್ ಶಹವಾನಿ, ಈ ದಾಳಿಯ ಹಿಂದೆ ಪಾಕಿಸ್ತಾನದ ಶತ್ರುಗಳು ಇದ್ದಾರೆ ಎಂದು ಹೇಳಿದ್ದಾರೆ.

ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ತಾಲಿಬಾನ್​ ಕೂಡ ಅಸ್ತಿತ್ವದಲ್ಲಿದ್ದು, ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ ಮತ್ತು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಮುಂತಾದ ಪ್ರತ್ಯೇಕತಾವಾದಿ ಗುಂಪುಗಳಿಂದ ಆಗಾಗ್ಗೆ ದಾಳಿಗಳು ನಡೆಯುತ್ತಿರುತ್ತವೆ.

English summary
At Least 4 people, including police official, were killed and 12 others wounded in an explosion in the parking area of a four star hotel in Baluchistan's capital Quetta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X