ಕರಾಚಿ : ಬಸ್ಸಿನ ಮೇಲೆ ಉಗ್ರರ ದಾಳಿ, 47 ಸಾವು
ಇಸ್ಲಾಮಾಬಾದ್, ಮೇ 13 : ಪಾಕಿಸ್ತಾನದಲ್ಲಿ ಭಯೋತ್ಪಾದಕರು ಮತ್ತೊಮ್ಮೆ ಅಟ್ಟಹಾಸಗೈದಿದ್ದಾರೆ. ಬೈಕ್‌ನಲ್ಲಿ ಬಂದ ಉಗ್ರರು ಬಸ್ಸಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 47 ಜನರು ಮೃತಪಟ್ಟಿದ್ದಾರೆ. 20 ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬುಧವಾರ ಬೆಳಗ್ಗೆ ಬೈಕ್‌ನಲ್ಲಿ ಬಂದ 8 ಉಗ್ರರು ಬಸ್ಸಿನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ 25 ಪುರುಷರು, 16 ಮಹಿಳೆಯರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. [ಉಗ್ರರ ದಾಳಿಗೆ ಹೆಲಿಕಾಪ್ಟರ್ ಪತನ]

ಪ್ರತ್ಯಕ್ಷದರ್ಶಿಗಳೊಬ್ಬರು ಘಟನೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಮೂರು ಬೈಕ್‌ಗಳಲ್ಲಿ ಆಗಮಿಸಿದ 8 ಮಂದಿ ಮುಸುಕುಧಾರಿಗಳು ಬಸ್ಸಿನ ಮೇಲೆ ಗುಂಡಿನ ದಾಳಿ ನಡೆಸಿದರು ಎಂದು ತಿಳಿಸಿದ್ದಾರೆ. ಬಸ್ಸಿನಲ್ಲಿ 50 ರಿಂದ 60 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
ಬಸ್ಸಿನ ಮೇಲೆ ಉಗ್ರರದಾಳಿ ವಿಡಿಯೋ ನೋಡಿ












Click it and Unblock the Notifications