ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ
ಕೊಲಂಬೋ, ಏ.22: ಶ್ರೀಲಂಕಾದ ಕೊಲಂಬೋದಲ್ಲಿ ಭಾನುವಾರ ನಡೆದ ಸರಣಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೇರಿದೆ.
ಈಸ್ಟರ್ ಪ್ರಾರ್ಥನೆಯಲ್ಲಿ ತೊಡಗಿದ್ದವರು ಮತ್ತೆ ಮರಳಲಿಲ್ಲ, ಇಲ್ಲಿನ ಚರ್ಚ್ , ಹೋಟೆಲ್‌ಗಳಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಇದೀಗ ಬಂದ ಮಾಹಿತಿ ಪ್ರಕಾಋ ಈವರೆಗೆ ಒಟ್ಟು 290 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕೊಲಂಬೋ ಹಾಗೂ ನೆಗೊಂಬೋ ನಗರದಲ್ಲಿರುವ ಚರ್ಚ್‌ಗಳಲ್ಲಿ ಸ್ಫೋಟ ಸಂಭವಿಸಿದೆ. ಒಟ್ಟು 8 ಕಡೆಗಳಲ್ಲಿ ಸ್ಫೋಟ ಸಂಭವಿಸಿರುವ ಮಾಹಿತಿ ಲಭ್ಯವಾಗಿದೆ.

ಶಾಂಗ್ರಿಲಾ ಹೋಟೆಲ್ ಹಾಗೂ ಕಿಂಗ್ಸ್ ಬರಿ ಹೋಟೆಲ್ ನಲ್ಲಿ ಸ್ಫೋಟವಾಗಿವೆ.ಕೊಲಂಬೋ ಕೊಚಿಕಡೆಯ ಸೈಂಟ್ ಅಂಥೋನಿ ಚರ್ಚ್ ನಲ್ಲಿ ಸ್ಫೋಟ ಸಂಭವಿಸಿದ ದೃಶ್ಯಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿವೆ.












Click it and Unblock the Notifications