ನ್ಯೂಜಿಲ್ಯಾಂಡ್‌ನ ಮಸೀದಿಯಲ್ಲಿ ಶೂಟೌಟ್,ಮೃತರ ಸಂಖ್ಯೆ 49ಕ್ಕೆ ಏರಿಕೆ

ವೆಲ್ಲಿಂಗ್ಟನ್, ಮಾರ್ಚ್ 15: ನ್ಯೂಜಿಲೆಂಡ್​ನ ದಕ್ಷಿಣ ಐಸ್​ಲೆಂಡ್​ ನ ಮಸೀದಿಯೊಂದರಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಶೂಟೌಟ್​ ನಡೆದಿದ್ದು, ಈ ವೇಳೆ ಸ್ಥಳದಲ್ಲಿದ್ದ ಬಾಂಗ್ಲಾ ಕ್ರಿಕೆಟ್​ ತಂಡದ ಆಟಗಾರರು ಬಚಾವ್ ಆಗಿದ್ದಾರೆ.

ಮಸೀದಿಯೊಂದಕ್ಕೆ ಬಾಂಗ್ಲಾ ಕ್ರಿಕೆಟ್ ತಂಡ ಹೋಗಿತ್ತು, ಅದೇ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದ್ದು, ಆಟಗಾರರು ಓಡಿಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಬಹುದೊಡ್ಡ ಅನಾಹುತ ತಪ್ಪಿದೆ. ಬಾಂಗ್ಲಾ ದೇಶದ ಪತ್ರಕರ್ತ ಮೊಹ್ಮದ್​ ಇಸ್ಲಾಮ್​ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಬಾಂಗ್ಲಾ ಕ್ರಿಕೆಟ್​ ತಂಡ ಕೂದಲೆಳೆಯಲ್ಲಿ ಬಚಾವ್​ ಆಗಿ ಪ್ರಾಣ ಉಳಿಸಿಕೊಂಡಿದೆ.

49 ಮಂದಿ ಮೃತಪಟ್ಟಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಆದರೆ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ ಎನ್ನುವ ಅನುಮಾನಗಳು ವ್ಯಕ್ತವಾಗಿದೆ. ಪ್ರತ್ಯಕ್ಷದರ್ಶಿಗಳು ದಾಳಿವೇಳೆ ಸಾಕಷ್ಟು ಜನರು ಮೃತಪಟ್ಟಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

6 Dead In New Zealand Mosque Shooting, Say Reports

ಕಪ್ಪು ಬಟ್ಟೆ ಧರಿಸಿದ ವ್ಯಕ್ತಿಯೋರ್ವ ಗನ್​ ಹಿಡಿದುಕೊಂಡು ನಿಂತಿದ್ದ. ಸಾಕಷ್ಟು ಬಾರಿ ಗುಂಡಿನ ಮೊರೆತ ಕೇಳಿದೆ. ಸಾಕಷ್ಟು ಜನರು ಮೃತಪಟ್ಟ ಅನುಮಾನವಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪೊಲೀಸ್​ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಕ್ರಿಕೆಟ್​ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ.

ಬಾಂಗ್ಲಾ ಕ್ರಿಕೆಟ್ ಆಟಗಾರರು ತಾವು ಇದ್ದ ಹೋಟೆಲ್‌ಗೆ ಸುರಕ್ಷಿತವಾಗಿ ಮರಳಿದ್ದಾರೆ.

ಈ ದಿನ ನ್ಯೂಜಿಲ್ಯಾಂಡ್‌ಗೆ ಒಂದು ಕರಾಳ ದಿನ, ಹಿಂದೆಂದೂ ಕಂಡಿರದ ಹಿಂಸಾಚಾರ ಇದಾಗಿದೆ. ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಬರಬೇಕಿದೆ ಎಂದು ನ್ಯೂಜಿಲ್ಯಾಂಡ್‌ನ ಪ್ರಧಾನಿ ಜಸಿಂಡಾ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+