ಒಂದೇ ವಾರದಲ್ಲಿ ಅಫ್ಘಾನಿಸ್ತಾನದಿಂದ 7 ಸಾವಿರ ಮಂದಿ ಸ್ಥಳಾಂತರ
ಕಾಬೂಲ್, ಆಗಸ್ಟ್ 20: ಅಫ್ಘಾನಿಸ್ತಾನದಿಂದ ಒಂದು ವಾರದಲ್ಲಿ 7 ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಫ್ಘಾನಿಸ್ತಾನದಿಂದ ಆ.14 ರಿಂದ ಈ ವರೆಗೂ ನಡೆದ ಕಾರ್ಯಾಚರಣೆಯಲ್ಲಿ 7,000 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಪೆಂಟಗನ್ ಹೇಳಿದೆ.
ಅಮೆರಿಕದ 5,200 ತುಕಡಿಗಳು ಕಾಬೂಲ್ ನಲ್ಲಿದೆ ಎಂದು ಪೆಂಟಗನ್ ಮಾಹಿತಿ ನೀಡಿದೆ. ಒಟ್ಟಾರೆ ಅಫ್ಘಾನಿಸ್ತಾನದಿಂದ ಹೊರ ನಡೆದಿರುವ ಮಂದಿಯ ಸಂಖ್ಯೆ 12,000 ಕ್ಕೆ ತಲುಪಿದೆ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಮೆರಿಕದ ವಕ್ತಾರ ನೆಡ್ ಮಾಹಿತಿ ನೀಡಿದ್ದು, ಇನ್ನೂ 6,000 ಮಂದಿ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದು ಶೀಘ್ರವೇ ಸ್ಥಳಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಮೆರಿಕ ಸೇನೆ ಹಾಗೂ ಕಾಬೂಲ್ ನಲ್ಲಿ ಈಗ 5,200 ಒಟ್ಟು ತುಕಡಿಗಳಿವೆ. ಇನ್ನು ಕಾಬೂಲ್ ವಿಮಾನ ನಿಲ್ದಾಣ ನಾಗರಿಕ ವೈಮಾನಿಕ ಕಾರ್ಯಾಚರಣೆಗಳಿಗೆ ಮುಕ್ತವಾಗಿದೆ.
ಅಮೆರಿಕನ್ ನಾಗರಿಕರನ್ನು ಏರ್ ಲಿಫ್ಟ್ ಮಾಡುವ ಜವಾಬ್ದಾರಿ ವಹಿಸಿಕೊಂಡಿರುವ ಆರ್ಮಿ ಆಪರೇಷನಲ್ ಟೆಸ್ಟ್ ಕಮಾಂಡ್ ನ ಕಮಾಂಡಿಂಗ್ ಜನರಲ್ ಮೇಜರ್ ಜನರಲ್ ಟೇಲರ್ ಮಾತನಾಡಿದ್ದು, ವಾಯು ಪ್ರದೇಶಕ್ಕೆ ಪ್ರವೇಶಿಸುವುದಕ್ಕೆ ಈಗ ಬಹು ದ್ವಾರಗಳಿವೆ. ಇದು ಸುರಕ್ಷಿತ ಮತ್ತು ಕ್ರಮಬದ್ಧವಾದ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ಅಮೆರಿಕ ತನ್ನ ಸೇನೆ ಹಿಂದಕ್ಕೆ ಪಡೆದರೆ ಆಷ್ಘಾನಿಸ್ತಾನದಲ್ಲಿ ಏನಾಗಬಹುದೆಂಬ ಆತಂಕ ಇತ್ತೋ ಅದು ನಿರೀಕ್ಷೆಗೂ ಮೊದಲೇ ನಿಜವಾಗಿದೆ. ಸತತ 2 ದಶಕಗಳ ಕಾಲ ಅಮೆರಿಕ ಮತ್ತು ನ್ಯಾಟೋ ಪಡೆಗಳನ್ನೇ ಕಂಗೆಡಿಸಿದ್ದ ತಾಲಿಬಾನ್ ಉಗ್ರರು ಭಾನುವಾರ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಳ್ಳುವ ಮೂಲಕ ಅಕ್ಷರಶಃ ಇಡೀ ದೇಶವನ್ನೇ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಇದರೊಂದಿಗೆ 2 ದಶಕಗಳ ಬಳಿಕ ದೇಶ ಮತ್ತೆ ಕ್ರೂರಿಗಳ ಕೈವಶವಾಗಿದೆ.
ಕಳೆದೊಂದು ತಿಂಗಳಿನಿಂದ ದೇಶದ ಒಂದೊಂದೇ ಪ್ರದೇಶಗಳನ್ನು ತೆಕ್ಕೆಗೆ ತೆಗೆದುಕೊಳ್ಳುತ್ತಾ ಬಂದಿದ್ದ ತಾಲಿಬಾನ್ ಉಗ್ರರು, ಭಾನುವಾರ ಕಾಬೂಲ್ ವ್ಯಾಪ್ತಿಯ ಮೂರು ಜಿಲ್ಲೆಗಳನ್ನು ವಶಪಡಿಸಿಕೊಂಡರು.
ಅದರ ಬೆನ್ನಲ್ಲೇ ಶಾಂತಿಯುತವಾಗಿ, ಬೇಷರತ್ ಅಧಿಕಾರ ಹಸ್ತಾಂತರಕ್ಕೆ ಸರ್ಕಾರಕ್ಕೆ ಸೂಚಿಸಿದ ಉಗ್ರರು, ಅರಮನೆ ಪ್ರವೇಶಿಸಿ ಸಂಧಾನ ಮಾತುಕತೆ ನಡೆಸಿದರು. ಅದಾದ ಕೆಲ ಹೊತ್ತಿನಲ್ಲೇ ಅಧ್ಯಕ್ಷ ಅಶ್ರಫ್ ಘನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ರಹಸ್ಯವಾಗಿ ನೆರೆಯ ತಜಿಕಿಸ್ತಾನಕ್ಕೆ ಪಲಾಯನ ಮಾಡಿದರು. ಅಧ್ಯಕ್ಷರ ಪಲಾಯನದ ಬೆನ್ನಲ್ಲೇ ಉಗ್ರರು ನಗರದ ಮತ್ತಷ್ಟುಒಳಪ್ರದೇಶಗಳನ್ನು ಹೊಕ್ಕಿದ್ದಾರೆ.
ಅಷ್ಘಾನಿಸ್ತಾನದ ಈ ಬೆಳವಣಿಗೆ ಜಾಗತಿಕ ಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಅಮೆರಿಕ, ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳು ಕಾಬೂಲ್‌ನಲ್ಲಿರುವ ತಮ್ಮ ನಾಗರಿಕರು ಮತ್ತು ದೂತಾವಾಸ ಸಿಬ್ಬಂದಿಯನ್ನು ತವರಿಗೆ ಕರೆಸಿಕೊಳ್ಳಲು ಹರಸಾಹಸ ಆರಂಭಿಸಿವೆ. ಆದರೆ ಕಾಬೂಲ್‌ನ ಒಂದು ಏರ್‌ಪೋರ್ಟ್ ಮಾತ್ರವೇ ಬಳಕೆಗೆ ಲಭ್ಯವಿರುವ ಕಾರಣ ಅಲ್ಲಿಂದಲೇ ನೂರಾರು ವಿಮಾನ, ಕಾಪ್ಟರ್‌ಗಳು ಸಂಚಾರ ನಡೆಸಿದ್ದು, ನಿಲ್ದಾಣಕ್ಕೆ ಬಂದಿಳಿಯಲು ಹಲವು ಗಂಟೆ ಕಾಯಬೇಕಾದ ಪರಿಸ್ಥಿತಿ ಎದುರಾಗಿತ್ತು.
ಅಷ್ಘಾನಿಸ್ತಾನದ ಮಾಜಿ ಸಚಿವ ಅಲಿ ಅಹಮದ್ ಜಲಾಲಿ ನೇತೃತ್ವದಲ್ಲಿ ದೇಶದಲ್ಲಿ ಹೊಸ ಮಧ್ಯಂತರ ಸರ್ಕಾರ ರಚನೆಯಾಗಬಹುದು ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ತಾಲಿಬಾನ್‌ನ ಕಮಾಂಡರ್ ಮುಲ್ಲಾ ಅಬ್ದುಲ್ ಘನಿ ಬರದರ್‌ಗೆ ಅಧ್ಯಕ್ಷ ಪಟ್ಟಕಟ್ಟಲಾಗುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಉಗ್ರರ ಕರಾಳ ಆಡಳಿತದ ಇತಿಹಾಸ ನೆನಪಿರುವ ಹಿನ್ನೆಲೆಯಲ್ಲಿ ಸಾವಿರಾರು ಜನರು ಭಾನುವಾರ ಬೆಳಗ್ಗೆಯಿಂದಲೇ ಕಾಬೂಲ್ ನಗರ ತೊರೆಯಲು, ನಗರದ ಗಡಿ ಪ್ರದೇಶಗಳತ್ತ ದೌಡಾಯಿಸಿದರು. ಸಾವಿರಾರು ಜನರು ಉಳಿಸಿದ್ದಷ್ಟುಹಣವನ್ನು ಎಟಿಎಂಗಳಿಂದ ತೆಗೆದುಕೊಳ್ಳಲು ಸರದಿಯಲ್ಲಿ ನಿಂತಿದ್ದ ದೃಶ್ಯ ಹಲವೆಡೆ ಕಂಡುಬಂತು.
2001ರಲ್ಲಿ ಅಮೆರಿಕದ ವಿಶ್ವ ವಾಣಿಜ್ಯ ಕಟ್ಟಡದ ದಾಳಿಯ ಹಿನ್ನೆಲೆಯಲ್ಲಿ, ಉಗ್ರರನ್ನು ಮಟ್ಟಹಾಕಲು ಅಮೆರಿಕ ಆಷ್ಘಾನಿಸ್ತಾನದ ಮೇಲೆ ದಾಳಿ ನಡೆಸಿ ಸಾವಿರಾರು ಉಗ್ರರನ್ನು ಹತ್ಯೆ ಮಾಡಿತ್ತು. ತದನಂತರ ಸುಮಾರು 2 ದಶಕಗಳ ಕಾಲ ಅದು ತನ್ನ ಸಾವಿರಾರು ಸೈನಿಕರನ್ನು ಆಷ್ಘಾನಿಸ್ತಾನದಲ್ಲೇ ಇಟ್ಟು ದೇಶದಲ್ಲಿ ಶಾಂತಿ ಮರುಸ್ಥಾಪನೆಯ ಯತ್ನ ಮಾಡಿತ್ತು.
Recommended Video
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications