ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: 7 ಸಾವು, ನೂರಾರು ಮಂದಿಗೆ ಗಾಯ
ಜಕಾರ್ತಾ, ಜನವರಿ 15: ಇಂಡೋನೇಷ್ಯಾದಲ್ಲಿ 6.2 ಮ್ಯಾಗ್ನಿಟ್ಯೂಟ್ ಪ್ರಬಲ ಭೂಕಂಪ ಸಂಭವಿಸಿದ್ದು, ಏಳು ಮಂದಿ ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದ ಸುಲವೇಸಿಯಲ್ಲಿ ಸಂಭವಿಸಿದೆ. ಮಜಾನೆ ನಗರದಿಂದ 3.73 ಕಿ.ಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದುವಿದೆ. 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯಲ್ಲಿ 4 ಮಂದಿ ಮೃತಪಟ್ಟಿದ್ದು, 637 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಏಳು ಮಂದಿ ಮೃತಪಟ್ಟಿದ್ದಾರೆ.

ಶುಕ್ರವಾರ ಬೆಳಗಿನ ಜಾವ 1 ಗಂಟೆ ವೇಳೆಗೆ ಭೂಕಂಪ ಸಂಭವಿಸಿದೆ. 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಏಳು ಸೆಕೆಂಡ್‌ಗಳ ಕಾಲ ಭೂಕಂಪ ಸಂಭವಿಸಿದೆ. ಆದರೆ ಸುನಾಮಿ ಎಚ್ಚರಿಕೆ ನೀಡಿಲ್ಲ.
ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಎರಡು ಹೋಟೆಲ್‌ಗಳು, ಗವರ್ನರ್ ಕಚೇರಿ ಸೇರಿದಂತೆ ಹಲವು ಕಟ್ಟಡಗಳಿಗೆ ಹಾನಿಯಾಗಿದೆ.












Click it and Unblock the Notifications