ಮೌಂಟ್ ಎವೆರೆಸ್ಟ್ ಪರಿಷ್ಕೃತ ಎತ್ತರ ಬಿಡುಗಡೆ ಮಾಡಿದ ಚೀನಾ ಮತ್ತು ನೇಪಾಳ
ಕಠ್ಮಂಡು, ಡಿಸೆಂಬರ್ 08: ಚೀನಾ ಹಾಗೂ ನೇಪಾಳವು ಮೌಂಟ್ ಎವೆರೆಸ್ಟ್‌ನ ಎತ್ತರದ ಪರಿಷ್ಕೃತ ಪಟ್ಟಿಯನ್ನು ಜಂಟಿಯಾಗಿ ಬಿಡುಗಡೆ ಮಾಡಿವೆ.
ಮೌಂಟ್ ಎವೆರೆಸ್ಟ್ನ ಎತ್ತರ 8,848.86 ಮೀ ಎತ್ತರವಿದೆ ಎಂದು ತಿಳಿದುಬಂದಿದೆ. ನೇಪಾಳದ ವಿದೇಶಾಂಗ ಸಚಿವ ಪ್ರದೀಪ್ ಕುಮಾರ್ , ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಈ ಕುರಿತು ಮಾಹಿತಿ ನೀಡಿದ್ದಾರೆ.
ನೇಪಾಳವು 2019ರ ಏಪ್ರಿಲ್‌ನಲ್ಲಿ ಸಮೀಕ್ಷೆಯನ್ನು ಆರಂಭಿಸಿತ್ತು. ಚೀನಾದ ಕಡೆ ಅಳತೆಯ ಕಾರ್ಯ ಬಾಕಿ ಇದ್ದ ಕಾರಣ ಇಷ್ಟು ದಿನ ತಡವಾಯಿತು.

2015ರ ಭೂಕಂಪದ ಬಳಿಕ ಮೌಂಟ್ ಎವೆರೆಸ್ಟ್ ಎತ್ತರವನ್ನು ಮರು ಅಳತೆ ಮಾಡಬೇಕು ಎನ್ನುವ ಆಲೋಚನೆ ಬಂದಿತ್ತು.
ಇದೇ ಕಾರಣಕ್ಕೆ ನೇಪಾಳ ಸರ್ಕಾರ ವಿಶ್ವದ ಅತಿ ಎತ್ತರದ ಶಿಖರದ ಎತ್ತರವನ್ನು ಅಳೆಯುವ ಯೋಜನೆ ಕೈಗೆತ್ತಿಕೊಂಡಿತ್ತು, ಪರ್ವತದ ಎತ್ತರವನ್ನು ಪುನಃ ಅಳೆಯಲು ನೇಪಾಳಿ ಅಧಿಕಾರಿಗಳು ಮತ್ತು ತಜ್ಞರನ್ನು ನಿಯೋಜಿಸುವಾಗ, ನೇಪಾಳ ಸರ್ಕಾರವು ತನ್ನ ದೇಶೀಯ ಪ್ರಯತ್ನಗಳಲ್ಲಿ ಚೀನಾದೊಂದಿಗೆ ಸಮನ್ವಯ ಸಾಧಿಸಿತು.
ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ನೇಪಾಳ ಭೇಟಿಯ ಸಂದರ್ಭದಲ್ಲಿ, ಉಭಯ ರಾಷ್ಟ್ರಗಳು ಜಂಟಿಯಾಗಿ ವಿಶ್ವದ ಅತಿ ಎತ್ತರದ ಶಿಖರದ ಎತ್ತರವನ್ನು ಅಳೆದು ಘೋಷಿಸುವ ಒಪ್ಪಂದಕ್ಕೆ ಸಹಿ ಹಾಕಿದವು.
ವಿಶ್ವದ ಅತೀ ಎತ್ತರದ ಶಿಖರದ ನಿಜವಾದ ಎತ್ತರವನ್ನು ನೇಪಾಳ ಸರ್ಕಾರ ಘೋಷಣೆ ಮಾಡಲಿದೆ. ಇದಕ್ಕಾಗಿಯೇ ಮಂಗಳವಾರ ನೇಪಾಳ ಸರ್ಕಾರ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈಗಾಗಲೇ ಎಲ್ಲ ಮಾಧ್ಯಮ ಸಂಸ್ಥೆಗಳಿಗೆ ಕಾರ್ಯಕ್ರಮದ ಕುರಿತು ವಿಶೇಷ ಆಹ್ವಾನ ನೀಡಿತ್ತು.
ಇನ್ನು 1954ರಲ್ಲಿ ಸರ್ವೆ ಆಫ್ ಇಂಡಿಯಾ ಈ ಶಿಖರವನ್ನು ಅಳೆದಿತ್ತು. ಅಂದು ಸರ್ವೇ ಆಫ್ ಇಂಡಿಯಾ ಘೋಷಣೆ ಮಾಡಿದ್ದ 8,848 ಮೀಟರ್ ಎತ್ತರವೇ ಮೌಂಟ್ ಎವರೆಸ್ಟ್ ನ ಅಂಗೀಕರಿಸಲ್ಪಟ್ಟ ಮತ್ತು ಗುರುತಿಸಲ್ಪಟ್ಟ ಎತ್ತರವಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications