ಬಾಗ್ದಾದ್ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟ; 82 ಮಂದಿ ಸಾವು
ಬಾಗ್ದಾದ್, ಏಪ್ರಿಲ್ 26: ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ಬಾಗ್ದಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು 82 ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬಾಗ್ದಾದ್‌ನ ಅಲ್ ಖತೀಬಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಶನಿವಾರ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ. ನಂತರ ಆಸ್ಪತ್ರೆಯ ಇತರೆ ಅಂತಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದೆ.
ಈ ಘಟನೆಯಲ್ಲಿ ಒಟ್ಟು 82 ರೋಗಿಗಳು ಮೃತಪಟ್ಟಿದ್ದು, 110 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ರಕ್ಷಣೆ ಮಾಡಲಾಗಿದೆ.

ಆಸ್ಪತ್ರೆಗೆ ರಾತ್ರಿ ಪಾಳಿಗೆ ಬಂದ ನರ್ಸ್, ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ್ದಾರೆ. ತಕ್ಷಣವೇ ರೋಗಿಗಳನ್ನು ಸ್ಥಳಾಂತರಿಸಲು ಮುಂದಾಗಿದ್ದಾರೆ. ನೋಡನೋಡುತ್ತಿದ್ದಂತೆ ಎಲ್ಲೆಡೆ ಬೆಂಕಿ ವ್ಯಾಪಿಸಿ ಅವಘಡ ಸಂಭವಿಸಿದೆ.
ಘಟನೆ ಬೆನ್ನಲ್ಲೇ ಇರಾಕ್ ಪ್ರಧಾನಿ ಮುಸ್ತಾಫಾ ಅಲ್ ಖದಿಮಿ ಸಚಿವ ಸಂಪುತ ಸಭೆ ನಡೆಸಿದ್ದಾರೆ. ಈ ದುರಂತದಲ್ಲಿ ನಿರ್ಲಕ್ಷ್ಯತನ ಅಪರಾಧ ಎಂದು ಖಂಡಿಸಿದ್ದಾರೆ. ಆರೋಗ್ಯ ಸಚಿವ ಹಸನ್ ಅಲ್ ತಮಿಮಿ ಹಾಗೂ ಬಾಗ್ದಾದ್ ರಾಜ್ಯಪಾಲರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
ಸತ್ತವರಲ್ಲಿ 28 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಾಗರಿಕ ರಕ್ಷಣಾ ತಂಡಗಳು ಭಾನುವಾರ ಬೆಳಗ್ಗಿನವರೆಗೂ ಬೆಂಕಿ ನಂದಿಸಿದ್ದಾರೆ.
ಆಸ್ಪತ್ರೆಯಲ್ಲಿ ಬೆಂಕಿಯಿಂದ ರಕ್ಷಿಸುವ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೆಂಕಿ ತೀವ್ರ ವ್ಯಾಪಿಸಿದೆ. ವೆಂಟಿಲೇಟರ್‌ಗಳನ್ನು ತೆಗೆದು ಸಾಗಿಸುವ ವೇಳೆ ಹಲವು ರೋಗಿಗಳು ಮೃತಪಟ್ಟಿದ್ದಾರೆ ಎಂದು ಇರಾಕ್ ನಾಗರಿಕ ರಕ್ಷಣಾ ಘಟಕ ತಿಳಿಸಿದೆ.
ಘಟನೆಯಲ್ಲಿ ಸಾವನ್ನಪ್ಪಿದವರಿಗೆ ನಜಾಫ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications