ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್‌ಗೆ ಸಾಹಿತ್ಯ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ

|
Google Oneindia Kannada News

ಅಂತಾರಾಷ್ಟ್ರೀಯ, ಅಕ್ಟೋಬರ್ 7: ತಾಂಜಾನಿಯಾ ದೇಶದ ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್‌ರಿಗೆ 2021ನೇ ಸಾಲಿನ ಸಾಹಿತ್ಯ ನೊಬೆಲ್ ಪ್ರಶಸ್ತಿ ದೊರೆತಿದೆ.

ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ ಮಹತ್ವದ ಈ ಪ್ರಶಸ್ತಿಗೆ ಅಬ್ದುಲ್​ರಜಾಕ್ ಗುರ್ನಾಹ್ ಹೆಸರನ್ನು ಘೋಷಿಸಿದ್ದು, 'ಗಲ್ಫ್ ದೇಶಗಳಲ್ಲಿನ ನಿರಾಶ್ರಿತರ ಮೇಲೆ ವಸಾಹತು ಶಾಹಿಯ ಪರಿಣಾಮ ಮತ್ತು ಅವರ ಸಂಸ್ಕೃತಿಯಲ್ಲಿ ಒಳನುಸುಳುವಿಕೆಯ ಕುರಿತು ರಾಜಿಯಿಲ್ಲದ ಮತ್ತು ಉದಾತ್ತವಾದ ಸಾಹಿತ್ಯ ಸೃಷ್ಟಿ'ಯನ್ನು ಪರಿಗಣಿಸಿ ನೊಬೆಲ್ ಪ್ರಶಸ್ತಿ ಪ್ರಕಟಿಸಲಾಗಿದೆ.

ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಗೆ ಭಾಜನರಾದ ಅಮೆರಿಕದ ಇಬ್ಬರು ವಿಜ್ಞಾನಿಗಳುಪ್ರತಿಷ್ಠಿತ ನೊಬೆಲ್ ಪ್ರಶಸ್ತಿಗೆ ಭಾಜನರಾದ ಅಮೆರಿಕದ ಇಬ್ಬರು ವಿಜ್ಞಾನಿಗಳು

ಅಬ್ದುಲ್​ರಜಾಕ್ ಗುರ್ನಾಹ್ 1948ರಲ್ಲಿ ಜನಿಸಿದ್ದು, ಜಾಂಜಿಬಾರ್​ನ ದ್ವೀಪವೊಂದರಲ್ಲಿ ತಮ್ಮ ಬಾಲ್ಯವನ್ನು ಕಳೆದಿದ್ದರು. ಆದರೆ 1960ರ ದಶಕದ ಉತ್ತರಾರ್ಧದಲ್ಲಿ ನಿರಾಶ್ರಿತರಾಗಿ ಇಂಗ್ಲೆಂಡ್​ಗೆ ವಲಸೆ ಬಂದರು. ಕಳೆದ ಕೆಲ ವರ್ಷಗಳವರೆಗೂ ಅವರು ಕೆಂಟ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಮತ್ತು ವಸಾಹತು ನಂತರದ ಸಾಹಿತ್ಯದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

Abdulrazak Gurnah Win 2021 Nobel Prize In Literature

ಅಬ್ದುಲ್​ರಜಾಕ್ ಗುರ್ನಾಹ್ ಸಾಹಿತ್ಯದಲ್ಲಿ ನಿರಾಶ್ರಿತ ಜೀವನದ ಸಮಸ್ಯೆಗಳು ಹೇರಳವಾಗಿ ಕಂಡುಬರುತ್ತವೆ. ತಮ್ಮ 21ನೇ ವರ್ಷದಲ್ಲಿ ಇಂಗ್ಲಿಷ್‌ಲ್ಲಿ ಬರವಣಿಗೆಯನ್ನು ಆರಂಭಿಸಿದ ಅಬ್ದುಲ್​ರಜಾಕ್ ಗುರ್ನಾಹ್​ ಅದಕ್ಕೂ ಮುನ್ನ ಸ್ವಾಹಿಲಿ ಎಂಬ ಭಾಷೆಯಲ್ಲಿ ಬರೆಯುತ್ತಿದ್ದರು.

ಮೂವರು ವಿಜ್ಞಾನಿಗಳಿಗೆ 2021ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಕಟಮೂವರು ವಿಜ್ಞಾನಿಗಳಿಗೆ 2021ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಕಟ

ಪ್ರತಿಷ್ಠಿತ ಬಹುಮಾನವು 10 ದಶಲಕ್ಷ ಸ್ವೀಡಿಷ್ ಕ್ರೌನ್‌ಗಳ (1.15 ಮಿಲಿಯನ್ ಡಾಲರ್) ಮೌಲ್ಯದ್ದಾಗಿದೆ ಮತ್ತು ಇದನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ನೀಡುತ್ತದೆ.

ನಿನ್ನೆ ಬುಧವಾರ ಅಕ್ಟೋಬರ್ 6ರಂದು ರಸಾಯನಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಲಾಗಿದ್ದು, ಜರ್ಮನಿಯ ಬೆಂಜಮಿನ್ ಲಿಸ್ಟ್ ಹಾಗೂ ಇಂಗ್ಲೆಂಡ್‌ನ ಡೇವಿಡ್ ಡಬ್ಲು.ಸಿ. ಮ್ಯಾಕ್‌ಮಿಲನ್ ಕೆಮಿಸ್ಟ್ರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಅಸಿಮ್ಮೆಟ್ರಿಕ್ ಆರ್ಗನೊಕಟಲಿಸಿಸ್ ಅಭಿವೃದ್ಧಿ ಪಡಿಸಿದ್ದಕ್ಕಾಗಿ ಈ ಇಬ್ಬರಿಗೆ ಈ ಬಾರಿಯ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.

ಮಂಗಳವಾರವಷ್ಟೇ 2021ನೇ ಸಾಲಿನ ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಸೈಕುರೊ ಮನಾಬೆ, ಕ್ಲಾಸ್ ಹ್ಯಾಸೆಲ್ಮನ್, ಪ್ಯಾರಿಸಿಗೆ ಘೋಷಿಸಲಾಗಿತ್ತು. ಜಪಾನ್, ಜರ್ಮನಿ ಮತ್ತು ಇಟಲಿಯ ಈ ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗಿತ್ತು. ಇದೀಗ ರಸಾಯನ ಶಾಸ್ತ್ರ ವಿಭಾಗದಲ್ಲೂ ಜರ್ಮನಿಯ ವಿಜ್ಞಾನಿಗೆ ನೊಬೆಲ್ ಪ್ರಶಸ್ತಿ ಬಂದಿದೆ.

ಸೋಮವಾರದಂದು ನೊಬೆಲ್ ಸಮಿತಿಯು ಶರೀರಶಾಸ್ತ್ರ ಅಥವಾ ಔಷಧದಲ್ಲಿ ಅಮೆರಿಕನ್ ವಿಜ್ಞಾನಿಗಳಾದ ಡೇವಿಡ್ ಜೂಲಿಯಸ್ ಮತ್ತು ಆರ್ಡೆಮ್ ಪಟಪೌಟಿಯನ್‌ರಿಗೆ ಮಾನವ ದೇಹವು ತಾಪಮಾನ ಮತ್ತು ಸ್ಪರ್ಶವನ್ನು ಹೇಗೆ ಗ್ರಹಿಸುತ್ತದೆ ಎಂಬುದನ್ನು ಕಂಡುಹಿಡಿದಿದ್ದಕ್ಕಾಗಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿತ್ತು.

"ಮುಂಬರುವ ದಿನಗಳಲ್ಲಿ ಶಾಂತಿ ಮತ್ತು ಅರ್ಥಶಾಸ್ತ್ರ ಕ್ಷೇತ್ರಗಳಲ್ಲಿನ ಅತ್ಯುತ್ತಮ ಕೆಲಸಗಳಿಗಾಗಿ ಬಹುಮಾನಗಳನ್ನು ಸಹ ನೀಡಲಾಗುವುದು,'' ಎಂದು ನೊಬೆಲ್ ಸಮಿತಿ ಹೇಳಿದೆ.

English summary
Abdulrazak Gurnah Win 2021 Nobel Prize In Literature, for his uncompromising and compassionate penetration of the effects of colonialism and the fate of the refugee in the gulf between cultures and continents.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X