ಭಾರತೀಯರ ಅಪಹರಣವಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ: ಮಾಧ್ಯಮ ವರದಿ

ಕಾಬೂಲ್, ಆಗಸ್ಟ್ 21: ಭಾರತೀಯರ ಅಪಹರಣವಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಫ್ಘಾನಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಅಪ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರ ಭಾಗದಲ್ಲಿ ಸುಮಾರು 150 ಮಂದಿಯನ್ನು ತಾಲಿಬಾನ್ ಸೆರೆ ಹಿಡಿದಿದೆ ಅದರಲ್ಲಿ ಭಾರತೀಯರು ಕೂಡ ಇದ್ದರು ಎನ್ನುವ ಸುದ್ದಿ ಹರಿದಾಡಿತ್ತು.

ಇದೀಗ ಅಫ್ಘಾನಿಸ್ತಾನ ಮಾಧ್ಯಮಗಳು ಈ ಕುರಿತು ವರದಿ ಮಾಡಿದ್ದು, ಯಾವುದೇ ಭಾರತೀಯರ ಅಪರಹಣವಾಗಿಲ್ಲ, ಎಲ್ಲರೂ ಸುರಕ್ಷಿತರಾಗಿದ್ದಾರೆ. ಸ್ಥಳಾಂತರಗೊಳ್ಳುತ್ತಿರುವ ಜನರ ದಾಖಲೆಗಳ ಪರಿಶೀಲನಾ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿವೆ.

Afghan Media Says All Indians Are Safe

ಕಾಬೂಲ್​​ನಿಂದ ಈವರೆಗೆ ಸುಮಾರು 12 ಸಾವಿರ ವಿದೇಶಿಯರ ರಕ್ಷಣೆ ಮಾಡಲಾಗಿದ್ದು, ಅವರನ್ನೆಲ್ಲಾ ಏರ್​​​ಲಿಫ್ಟ್ ಮೂಲಕ ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವಿದೇಶಿಯರನ್ನು ರಕ್ಷಣೆ ಮಾಡುತ್ತಿರುವ ಹೊತ್ತಿನಲ್ಲೇ ಭಾರತೀಯರು ಅಪಹರಣವಾಗಿರುವ ವಿಚಾರ ಸಾಕಷ್ಟು ಆತಂಕ ಮೂಡಿಸಿತ್ತು.

ಈ ಹಿಂದೆ ಕಾಬುಲ್ ನಿಂದ ಸ್ಥಳಾಂತರಗೊಳ್ಳಲು ನಿಂತಿದ್ದ ಜನರನ್ನು ತಾಲಿಬಾನಿಗಳು ಅಪಹರಣ ಮಾಡಿದ್ದು, ಅಪಹರಣಕ್ಕೊಳಗಾದವರಲ್ಲಿ ಭಾರತೀಯರೂ ಇದ್ದಾರೆಂದು ಹೇಳಲಾಗಿತ್ತು. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ತಿಳಿದುಬಂದಿರಲಿಲ್ಲ.

ಇದೀಗ ಪ್ರತಿಕ್ರಿಯೆ ನೀಡಿರುವ ತಾಲಿಬಾನ್ ವಕ್ತಾರ ಅಹ್ಮದುಲ್ಲಾ ವಾಸಿಖ್ ಅವರು, ವರದಿಗಳನ್ನು ನಿರಾಕರಿಸಿದ್ದಾರೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಅಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದ್ದು, 85 ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-130 ಜೆ ವಿಮಾನ ಶನಿವಾರ ಬೆಳಗ್ಗೆ ಕಾಬೂಲ್ ನಿಂದ ಪ್ರಯಾಣ ಆರಂಭಿಸಿದೆ.

ಕಾಬೂಲ್ ನಿಂದ ಟೇಕಾಪ್ ಆದ ವಿಮಾನ ಇಂದನ ತುಂಬಿಸಿಕೊಳ್ಳುವ ಸಲುವಾಗಿ ತಜಕಿಸ್ತಾನ್ ನಲ್ಲಿ ಇಳಿದಿದೆ. ಕಾಬೂಲ್ ನಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಭಾರತೀಯ ಅಧಿಕಾರಿಗಳು ನೆರವಾಗುತ್ತಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸರ್ಕಾರ ಸಂಘಟಿತ ಪ್ರಯತ್ನದೊಂದಿಗೆ ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸ್ ಕರೆತರುತ್ತಿದೆ. ಕಳೆದ ಸೋಮವಾರ ಕಾಬೂಲ್ ತಾಲಿಬಾನ್ ಉಗ್ರರ ವಶವಾದ ನಂತರ ಭಾರತೀಯ ವಾಯುಪಡೆಯ ಎರಡು ವಿಮಾನಗಳು ಅಮೆರಿಕ ಭದ್ರತಾ ಪಡೆಗಳಿಂದ ಕ್ಲಿಯರೆನ್ಸ್ ಪಡೆದು ಕೆಲ ಪತ್ರಕರ್ತರು, ಐಟಿಬಿಪಿ ಸಿಬ್ಬಂದಿ ಸೇರಿದಂತೆ 180 ಅಧಿಕಾರಿಗಳನ್ನು ಭಾರತಕ್ಕೆ ಕರೆತಂದಿದ್ದವು.

ಇದಕ್ಕೂ ಮುನ್ನ, ತಾಲಿಬಾನಿಗಳ ಅಧಿಕೃತ ಜಾಲತಾಣಗಳು ಶುಕ್ರವಾರ ಏಕಾಏಕಿ ಸ್ಥಗಿತಗೊಂಡಿದೆ. ಅದಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ತಾಲಿಬಾನಿಗಳು ತಮ್ಮ ವಿಜಯ ಸಂದೇಶವನ್ನು, ಘೋಷಣೆಗಳನ್ನು ಅಧಿಕೃತ ಹೇಳಿಕೆಗಳನ್ನು ಈ ಜಾಲತಾಣಗಳಲ್ಲಿ ಪ್ರಕಟ ಮಾಡುತ್ತಿದ್ದರು.

ಸ್ಥಗಿತಗೊಂಡ ಜಾಲತಾಣಗಳು ಆಂಗ್ಲ ಭಾಷೆ ಮಾತ್ರವಲ್ಲದೆ ಪಾಷ್ತೊ, ಉರ್ದು, ಅರೇಬಿಕ್ ಮತ್ತು ದರಿ ಭಾಷೆಗಳಲ್ಲಿ ಕಾರ್ಯಾಚರಿಸುತ್ತಿದ್ದವು. ಈ ಜಾಲತಾಣಗಳಿಗೆ ಸ್ಯಾನ್ ಫ್ರಾನ್ಸಿಸ್ಕೊ ಮೂಲದ ಕ್ಲೌಡ್ ಫ್ಲೇರ್ ಎನ್ನುವ ಸಂಸ್ಥೆ ರಕ್ಷಣೆ ನೀಡುವ ಜವಾಬ್ದಾರಿ ಹೊತ್ತುಕೊಂಡಿತ್ತು.

ತಾಲಿಬಾನಿ ಜಾಲತಾಣಗಳು ಸ್ಥಗಿತಗೊಂಡಿರುವುದಕ್ಕೆ ಇದುವರೆಗೂ ಕ್ಲೌಡ್ ಫ್ಲೇರ್ ಸಂಸ್ಥೆ ಪ್ರತಿಕ್ರಿಯೆ ನೀಡಿಲ್ಲ. ಯಾವುದೇ ಜಾಲತಾಣಗಳನ್ನು ಯಾರು, ಯಾವ ಪ್ರದೇಶದಿಂದ ನಿರ್ವಹಿಸುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಕ್ಲೌಡ್ ಫ್ಲೇರ್ ಸಂಸ್ಥೆ ಗೌಪ್ಯವಾಗಿರುಸುತ್ತದೆ. ಯಾರು ಬೇಕಾದರೂ ಕ್ಲೌಡ್ ಫ್ಲೇರ್ ಸಂಸ್ಥೆಯ ಸೇವೆಯನ್ನು ಪಡೆದುಕೊಳ್ಳಬಹುದು. ತಾಲಿಬಾನಿಗಳು ಕೂಡಾ ಕ್ಲೌಡ್ ಫ್ಲೇರ್ ಗ್ರಾಹಕರಲ್ಲೊಬ್ಬರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+