ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನಿಸ್ತಾನದಲ್ಲಿ ವೀಸಾಗಾಗಿ ಮುಗಿಬಿದ್ದ ಜನ, ಕಾಲ್ತುಳಿತದಲ್ಲಿ 11 ಮಂದಿ ಸಾವು

|
Google Oneindia Kannada News

ಕಾಬೂಲ್,ಅಕ್ಟೋಬರ್ 21: ಅಫ್ಘಾನಿಸ್ತಾನದಲ್ಲಿ ಸಾವಿರಾರು ಮಂದಿ ದೇಶ ತೊರೆಯಲು ತುದಿಗಾಲಿನಲ್ಲಿ ನಿಂತಿದ್ದು, ವೀಸಾ ಪಡೆಯಲು ಬಂದಿದ್ದಾಗ ಕಾಲ್ತುಳಿತದಲ್ಲಿ ಸಿಲುಕಿ 11 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಅಪ್ಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

H1B ವೀಸಾ ವಿವಾದ, ಟ್ರಂಪ್ ವಿರುದ್ಧ ಕೋರ್ಟ್ ಮೊರೆH1B ವೀಸಾ ವಿವಾದ, ಟ್ರಂಪ್ ವಿರುದ್ಧ ಕೋರ್ಟ್ ಮೊರೆ

ಪ್ರತ್ಯೇಕ ಘಟನೆಯಲ್ಲಿ, ಉತ್ತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಠ 34 ಅಫ್ಘಾನ್ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Afghanistan: 11 killed And Many wounded In Visa Stampede

ದೇಶ ತೊರೆಯಲು ವೀಸಾಗಾಗಿ ಪಾಕಿಸ್ತಾನ ರಾಯಭಾರ ಕಚೇರಿ ಬಳಿ ಸಾವಿರಾರು ಜನ ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಹನ್ನೊಂದು ಜನರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಸರ್ಕಾರದ ವಕ್ತಾರ ಅಟೌಲಾ ಖೋಗಿಯಾನಿ ತಿಳಿಸಿದ್ದಾರೆ.

ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವೃದ್ಧರಾಗಿದ್ದಾರೆ. ಇವರು ಪಾಕಿಸ್ತಾನಕ್ಕೆ ತೆರಳಲು ವೀಸಾ ಪಡೆಯಲು ಬಂದಿದ್ದರು ಎಂದು ಅವರು ಹೇಳಿದ್ದಾರೆ.

English summary
At least 11 women were trampled to death when a stampede broke out Wednesday among thousands of Afghans waiting in a soccer stadium to get visas to leave the country, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X