ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 15 ಜನ ಸಾವು
ಕಾಬೂಲ್, ಜನವರಿ 05: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 15 ಜನರು ಮೃತರಾಗಿದ್ದಾರೆ.
ಕಾಬೂಲ್ ನ ಬಾನಾಯಿ ಎಂಬಲ್ಲಿ ಜ.4 ರ ಸಂಜೆ ನಡೆದ ಈ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತರಾಗಿದ್ದು, ಸುಮಾರು 20 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರಲ್ಲಿ ಹೆಚ್ಚಿನವರು ಪೊಲೀಸ್ ಸಿಬ್ಬಂದಿಗಳು ಎಮದು ಗುರುತಿಸಲಾಗಿದೆ. ಘಟನೆಯ ಹೊಣೆಯನ್ನು ಇದುವರೆಗೂ ಯಾವುದೇ ಭಯೋತ್ಪಾದಕ ಸಂಘಟನೆ ಹೊತ್ತಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications