ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಗಾನಿಸ್ತಾನ ಅಧ್ಯಕ್ಷರ ಚುನಾವಣಾ ಸಮಾವೇಶದಲ್ಲಿ ಸ್ಪೋಟ, 24 ಸಾವು

|
Google Oneindia Kannada News

ಕಾಬೂಲ್, ಸೆಪ್ಟೆಂಬರ್ 17: ಅಫ್ಗಾನಿಸ್ತಾನದ ಪ್ರವಾನ್ ಪ್ರಾಂತ್ಯದಲ್ಲಿ ಅಧ್ಯಕ್ಷ ಅಶ್ರಫ್ ಘನಿ ಅವರ ಚುನಾವಣಾ ಪ್ರಚಾರ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆದಿದೆ.

ಭಾರಿ ಭೀಕರ ಬಾಂಬ್ ದಾಳಿಯಲ್ಲಿ 24 ಮಂದಿ ಹತರಾಗಿದ್ದು, 31 ಮಂದಿ ಗಾಯಾಳುಗಳಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಇದೆ. ಈ ದಾಳಿಯಲ್ಲಿ ಅಧ್ಯಕ್ಷ ಅಶ್ರಫ್ ಘನಿ ಅವರಿಗೆ ಯಾವುದೇ ಅಪಾಯವಾಗಿಲ್ಲ.

ಕಾಬೂಲ್‌ನಲ್ಲಿ ಅಮೆರಿಕದ ರಾಯಭಾರ ಕಚೇರಿ ಮೇಲೆ ರಾಕೆಟ್ ದಾಳಿಕಾಬೂಲ್‌ನಲ್ಲಿ ಅಮೆರಿಕದ ರಾಯಭಾರ ಕಚೇರಿ ಮೇಲೆ ರಾಕೆಟ್ ದಾಳಿ

ಮೃತರಲ್ಲಿ ಮಹಿಳೆ ಮತ್ತು ಮಕ್ಕಳೂ ಸಹ ಇದ್ದು, ಮೃತರಲ್ಲಿ ಬಹುತೇಕರು ಸಾರ್ವಜನಿಕರೇ ಆಗಿದ್ದಾರೆ. ಹಲವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ಪ್ರಾಂತ್ಯದ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

Afghanistan: Bomb Attack On President Election Campaign

ಬಾಂಬ್ ಸ್ಪೋಟವಾದಾಗ ಸ್ಥಳದಿಂದ ಸ್ವಲ್ಪವೇ ದೂರದಲ್ಲಿ ಅಫ್ಗಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಇದ್ದರು. ಆದರೆ ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ಘನಿ ಪಕ್ಷದ ವಕ್ತಾರ ಹೇಳಿದ್ದಾರೆ.

ಚುನಾವಣಾ ಸಮಾವೇಶಕ್ಕೆ ಸಾವಿವರಾರು ಜನ ಆಗಮಿಸಿದ್ದು, ಸಮಾವೇಶಕ್ಕೆ ಆಗಮಿಸುವ ಬಾಗಿಲಿನಲ್ಲೇ ಸ್ಪೋಟವಾದ ಕಾರಣ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆತ್ಮಾಹುತಿ ಬಾಂಬ್ ಇದು ಎಂದು ಹೇಳಲಾಗುತ್ತಿದೆ.

ಅಫ್ಗಾನಿಸ್ತಾನದಲ್ಲಿ ಇದೇ ತಿಂಗಳ ಅಂತ್ಯಕ್ಕೆ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೆ ದೇಶದಲ್ಲಿ ಹಿಂಸಾಚಾರ ಹೆಚ್ಚಾಗಿದೆ. ಇಂದು ನಡೆದಿರುವ ಬಾಂಬ್ ಸ್ಪೋಟದ ಹೊಣೆಯನ್ನು ಈ ವರೆಗೂ ಯಾವ ಭಯೋತ್ಪಾದಕಾ ಸಂಘಟನೆಯೂ ಒಪ್ಪಿಕೊಂಡಿಲ್ಲ.

English summary
Massive Bomb Blast in Afghanistan President Ashraf Ghani's election rally, 24 people killed 31 people injured in the blast.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X