ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ಆತ್ಮಾಹುತಿ ದಾಳಿಗೆ 31 ಬಲಿ

By Sachhidananda Acharya
|
Google Oneindia Kannada News

ಕಾಬೂಲ್, ಏಪ್ರಿಲ್ 22: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಮತದಾರರ ನೋಂದಣಿ ಕೇಂದ್ರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಕಾಬೂಲ್ ಹಂಗಾಮಿ ಪೊಲೀಸ್ ಮುಖ್ಯಸ್ಥ ಮೊಹಮ್ಮದ್ ದಾವೂದ್ ಅಮೀನ್, ಮತದಾರರ ಚೀಟಿಗಳನ್ನು ವಿತರಣೆ ಮಾಡುತ್ತಿದ್ದ ಕೇಂದ್ರದ ಬಾಗಿಲಿನಲ್ಲೇ ಉಗ್ರರು ಆತ್ಮಾಹುತಿ ಬಾಂಬ್ ಸ್ಪೋಟಿಸಿದ್ದಾರೆ ಎಂದು ಹೇಳಿದ್ದಾರೆ.

ಐಸಿಸ್ ಈ ದಾಳಿಯ ಹೊಣೆ ಹೊತ್ತಿದೆ. ಈ ಕುರಿತು ತನ್ನ ಆನ್ಲೈನ್ ಪೋರ್ಟಲ್ ಅಮಾಕ್ ನಲ್ಲಿ ಹೇಳಿಕೆ ನೀಡಿದೆ.

Afghanistan: Deaths in attack on ID registration centre in Kabul

ಆರೋಗ್ಯ ಇಲಾಖೆ ಗಾಯಗೊಂಡ ಹಲವರನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಪಶ್ಚಿಮ ಕಾಬೂಲ್ ನ ದಶ್ತ್-ಇ-ಬರ್ಚಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಾವಿಗೀಡಾದವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಅಕ್ಟೋಬರ್ ನಲ್ಲಿ ಅಫ್ಘಾನಿಸ್ತಾನದಲ್ಲಿ ಚುನಾವಣೆ ನಡೆಯಲಿದ್ದು ಈ ಹಿನ್ನಲೆಯಲ್ಲಿ ಮತದಾರರ ನೋಂದಣಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಇದೇ ಸಂದರ್ಭದಲ್ಲಿ ನೋಂದಣಿ ಕೇಂದ್ರದ ಮೇಲೆಯೇ ಉಗ್ರರು ಬಾಂಬ್ ದಾಳಿ ನಡೆಸಿದ್ದಾರೆ.

English summary
A suicide bombing at a voter registration centre in the Afghanistan capital Kabul has killed at least 31 people, health officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X