• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಫ್ಘಾನಿಸ್ತಾನದ ಬಾಮಿಯಾನ್‌ನಲ್ಲಿ ಭೀಕರ ಬಾಂಬ್ ಸ್ಫೋಟ

|

ಕಾಬೂಲ್, ನ. 24: ಆಫ್ಘಾನಿಸ್ತಾನ ಕೇಂದ್ರ ಭಾಗದಲ್ಲಿರುವ ಬಾಮಿಯಾನ್ ಪ್ರಾಂತ್ಯದಲ್ಲಿಂದು ಎರಡು ಭೀಕರ ಬಾಂಬ್ ಸ್ಫೋಟ ಸಂಭವಿಸಿದೆ. ಕನಿಷ್ಠ 14 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಮಿಯಾನ್ ನಗರದ ಜನನಿಬಿಡ ಮಾರುಕಟ್ಟೆಯ ರಸ್ತೆ ಬದಿಯಲ್ಲಿ ಸ್ಫೋಟಕವನ್ನು ಇರಿಸಲಾಗಿತ್ತು. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಯಾ ಹಜಾರಾ ಸಮುದಾಯದವರು ವಾಸಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ಜಬಾರ್ದಸ್ಟ್ ಸಫಾಯಿ ಹೇಳಿದ್ದಾರೆ.

ಮೃತಪಟ್ಟವರಲ್ಲಿ 12 ಮಂದಿ ನಾಗರಿಕರು ಹಾಗೂ ಇಬ್ಬರು ಸಂಚಾರಿ ಪೊಲೀಸ್ ಅಧಿಕಾರಿಗಳಿದ್ದಾರೆ. ಸುಮಾರು 45ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಸಂದರ್ಭದಲ್ಲಿ ಹೆಚ್ಚಿನ ಮಂದಿ ರೆಸ್ಟೋರೆಂಟ್ ಹಾಗೂ ಅಂಗಡಿಗಳ ಬಳಿ ಜನ ಸೇರಿದ್ದರು ಎಂದು ತಿಳಿದು ಬಂದಿದೆ.

ಮೃತಪಟ್ಟವರಲ್ಲಿ ಮಹಿಳೆ ಹಾಗೂ ಒಂದು ಮಗು ಕೂಡಾ ಇದೆ. ಗಾಯಗೊಂಡವರಲ್ಲಿ ಅಧಿಕ ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿ ಫರೊಗುದ್ದೀನ್ ಅಮಿರಿ ಹೇಳಿದ್ದಾರೆ.

ಶಿಯಾ ಸಮುದಾಯದ ಮೇಲೆ ಐಎಸ್ಐಎಲ್ ಸಂಘಟನೆಗಳು ಪದೇ ಪದೇ ದಾಳಿ ನಡೆಸುತ್ತಾ ಬಂದಿದೆ. ಕಳೆದ 9 ತಿಂಗಳಲ್ಲಿ ಸುಮಾರು 6,000 ನಾಗರಿಕರನ್ನು ತಾಲಿಬಾನಿ ಉಗ್ರರು ಬಲಿ ಪಡೆದುಕೊಂಡಿದ್ದಾರೆ.

English summary
At least 14 people have been killed when two explosions ripped through the city of Bamiyan in central Afghanistan, according to officials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X