ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನ್ ವಶಪಡಿಸಿಕೊಂಡ ಬಳಿಕ ತಾಲಿಬಾನ್ ಮೊದಲ ಸುದ್ದಿಗೋಷ್ಠಿ

|
Google Oneindia Kannada News

ಕಾಬೂಲ್, ಆಗಸ್ಟ್ 17: ಅಮೆರಿಕಾದ ಮುಷ್ಠಿಯಿಂದ ಬಿಡುಗಡೆ ಹೊಂದಿದ ಪ್ರತಿಯೊಬ್ಬ ಅಫ್ಘಾನಿಸ್ತಾನದ ಪ್ರಜೆಗಳಿಗೂ ತಾಲಿಬಾನ್ ಸಂಘಟನೆ ಶುಭಾಷಯ ಕೋರಿದೆ. ಅಫ್ಘಾನಿಸ್ತಾನ ವಿಮೋಚನೆ ಆಗಿರುವ ಈ ಸಂದರ್ಭದಲ್ಲಿ ತಾಲಿಬಾನ್ ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವುದಕ್ಕೆ ಬಯಸುವುದಿಲ್ಲ ಎಂದು ಹೇಳಿದೆ.

Recommended Video

ತಾಲಿಬಾನ್ ಆಡಳಿತದ ನಿಯಮಗಳನ್ನು ಕೇಳಿದ್ರೆ ಎಂಥವರೂ ನಡುಗಿ ಹೋಗ್ತಾರೆ | Oneindia Kannada

ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡ ನಂತರ ಮೊದಲ ಬಾರಿಗೆ ಕಾಬೂಲ್‌ನ ಸರ್ಕಾರಿ ಮಾಧ್ಯಮ ಮತ್ತು ಮಾಹಿತಿ ಕೇಂದ್ರದಲ್ಲಿ ತಾಲಿಬಾನ್ ಸುದ್ದಿಗೋಷ್ಠಿ ನಡೆಸಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್, "ನೆರೆಹೊರೆಯ ರಾಷ್ಟ್ರಗಳ ವಿರುದ್ಧ ದುಷ್ಕೃತ್ಯ ಎಸಗಲು ನಮ್ಮ ನೆಲವನ್ನು ದುರುಪಯೋಗ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದೇವೆ. ಅಂತರಾಷ್ಟ್ರೀಯ ಸಮುದಾಯವು ನಮ್ಮ ಸರ್ಕಾರವನ್ನು ಗುರುತಿಸಬೇಕು" ಎಂದು ಮುಜಾಹಿದ್ ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಬಂದೂಕು ಹಿಡಿದು ನಿಂತ ತಾಲಿಬಾನಿಗಳ ಕುಣಿತಕ್ಕೆ ಚೀನಾ ತಾಳ!ಅಫ್ಘಾನಿಸ್ತಾನದಲ್ಲಿ ಬಂದೂಕು ಹಿಡಿದು ನಿಂತ ತಾಲಿಬಾನಿಗಳ ಕುಣಿತಕ್ಕೆ ಚೀನಾ ತಾಳ!

"ಕಾಬೂಲ್‌ನಲ್ಲಿ ಇರುವ ವಿದೇಶಿ ದೂತವಾಸ ಕಚೇರಿಗಳು, ರಾಯಭಾರಿ ಸಿಬ್ಬಂದಿ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳ ಭದ್ರತೆ ಮತ್ತು ಸುರಕ್ಷತೆಗೆ ಯಾವುದೇ ಧಕ್ಕೆ ಆಗುವುದಿಲ್ಲ ಎಂದು ನಾವು ಭರವಸೆ ನೀಡುತ್ತೇವೆ. ದೇಶದ ಉಳಿದ ಪ್ರದೇಶಗಳನ್ನು ವಶಪಡಿಸಿಕೊಂಡ ನಂತರ ಕಾಬೂಲ್‌ನಲ್ಲಿ ಅಸ್ತಿತ್ವ ಸ್ಥಾಪಿಸುವುದು ನಮ್ಮ ಉದ್ದೇಶವಾಗಿತ್ತು. ಆದರೆ ದುರದೃಷ್ಟವಶಾತ್, ಈ ಹಿಂದಿನ ಸರ್ಕಾರವು ಅಸಮರ್ಥವಾಗಿತ್ತು. ಅವರಿಗೆ ಭದ್ರತೆ ನೀಡಲು ಸಾಧ್ಯವಾಗಲಿಲ್ಲ. ನಾವು ಈಗ ಎಲ್ಲಾ ವಿದೇಶಿ ಸಂಸ್ಥೆಗಳಿಗೆ ಭದ್ರತೆ ಒದಗಿಸುತ್ತೇವೆ. ನಾವು ಅಫ್ಘಾನಿಸ್ತಾನದ ಒಳಗೆ ಅಥವಾ ಹೊರಗೆ ಯಾವುದೇ ಶತ್ರುಗಳನ್ನು ಹುಡುಕುವುದಿಲ್ಲ," ಎಂದಿದ್ದಾರೆ.

Afghanistan: Talibans first press conference in Kabul After Take control of Nation

"ಸೇಡು ತೀರಿಸಿಕೊಳ್ಳುವುದು ತಾಲಿಬಾನ್ ಉದ್ದೇಶವಲ್ಲ":

"ಅಫ್ಘಾನಿಸ್ತಾನವು ಈಗ ವಿಮೋಚನೆಗೊಂಡಿದೆ. ತಾಲಿಬಾನ್ ಯಾವುದೇ ರೀತಿಯಲ್ಲಿ ಸೇಡು ತೀರಿಸಿಕೊಳ್ಳಲು ಬಯಸುವುದಿಲ್ಲ" ಎಂದು ತಾಲಿಬಾನ್ ಸಂಘಟನೆಯ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.

ಮಾದಕ ಮುಕ್ತ ಅಫ್ಘಾನಿಸ್ತಾನ ನಿರ್ಮಾಣ:
ಹೆರಾಯಿನ್, ಮಾರ್ಫಿನ್, ಅಫೀಮು, ಹಶಿಶ್, ಗಸಗಸೆ ಮತ್ತು ಇನ್ನೂ ಹಲವು ಮಾದಕ ವಸ್ತುಗಳು ಇತ್ತೀಚಿನ ವರ್ಷಗಳಲ್ಲಿ ತಾಲಿಬಾನ್‌ಗಳಿಗೆ ಹೆಚ್ಚಿನ ಪ್ರಯೋಜನಕಾರಿಯಾಗಿವೆ. 2020ರ ಸಾಂಕ್ರಾಮಿಕ ವರ್ಷದಲ್ಲಿ ವಿಶ್ವಾದ್ಯಂತ ಉತ್ಪತ್ತಿಯಾಗುವ ಅಫೀಮು ಗಸಗಸೆಯಲ್ಲಿ ನಾಲ್ಕನೇ ಮೂರರಷ್ಟು ಭಾಗ ಅಫ್ಘಾನಿಸ್ತಾನದಿಂದಲೇ ಬಂದಿತ್ತು. ಅಂಥ ರಾಷ್ಟ್ರವನ್ನು ಇದೀಗ ಡ್ರಗ್ಸ್ ಹಾಗೂ ಮಾದಕ ವ್ಯಸನಿಗಳ ಮುಕ್ತಗೊಳಿಸುವುದಾಗಿ ತಾಲಿಬಾನ್ ಘೋಷಿಸಿದೆ.

ಮಹಿಳೆಯರ ಹಕ್ಕುಗಳ ರಕ್ಷಣೆಗೆ ತಾಲಿಬಾನ್ ಬದ್ಧತೆ:
"ಇಸ್ಲಾಮಿಕ್ ಕಾನೂನುಗಳ ವ್ಯಾಪ್ತಿಯಲ್ಲಿ ಮಹಿಳೆಯರ ಭದ್ರತೆ ಮತ್ತು ಸುರಕ್ಷತೆಗೆ ತಾಲಿಬಾನ್ ಸಂಘಟನೆಯು ಆದ್ಯತೆ ನೀಡುತ್ತದೆ. ಸಮಾಜದಲ್ಲಿ ಮಹಿಳೆಯರು ಕೂಡಾ ಸ್ವತಂತ್ರರಾಗಿ ಕಾರ್ಯ ಚಟುವಟಿಕೆಗಳಿಂದ ಇರಬೇಕು, ಆದರೆ ಅದು ಇಸ್ಲಾಮಿಕ್ ಪರಧಿಯನ್ನು ಮೀರುವಂತಿಲ್ಲ. ನಮ್ಮ ರಾಷ್ಟ್ರವು ಮುಸ್ಲೀಂ ರಾಷ್ಟ್ರವಾಗಿದೆ, ಅದು 20 ವರ್ಷಗಳ ಹಿಂದೆಯೇ ಆಗಿರಬಹುದು ಅಥವಾ ಇಂದೇ ಆಗಿರಬಹುದು. ಆದರೆ 20 ವರ್ಷಗಳ ಹಿಂದಿನ ಪರಿಸ್ಥಿತಿಗೂ ಇಂದಿನ ಸ್ಥಿತಿಗತಿಗೂ ತುಂಬಾ ವ್ಯತ್ಯಾಸವಿದೆ. ಸರ್ಕಾರ ರಚನೆ ಪ್ರಕ್ರಿಯೆ ಮುಗಿದ ನಂತರದಲ್ಲಿ ಕಾನೂನುಗಳ ಬಗ್ಗೆ ಮಾತನಾಡಲಾಗುವುದು," ಎಂದಿದ್ದಾರೆ.

2001ರಲ್ಲಿ ಹಿಡಿತ ಕಳೆದುಕೊಂಡಿದ್ದ ತಾಲಿಬಾನ್:

ಕಳೆದ 1996 ರಿಂದ 2001ರವರೆಗೂ ಅಫ್ಘಾನಿಸ್ತಾನದಲ್ಲಿ ಇದೇ ತಾಲಿಬಾನ್ ಉಗ್ರ ಸಂಘಟನೆಯ ಹಿಡಿತದಲ್ಲಿತ್ತು. 2001ರ ಸಪ್ಟೆಂಬರ್ 11ರಂದು ಯುನೈಟೆಡ್ ಸ್ಟೇಟ್ಸ್ ಮೇಲೆ ಅಲ್ ಖೈದಾ ಉಗ್ರರು ದಾಳಿ ನಡೆಸಿದ್ದರು. ಅಲ್ ಖೈದಾ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದ ಕಾರಣಕ್ಕಾಗಿ ತಾಲಿಬಾನ್ ಮೇಲೂ ಯುಎಸ್ ಸೇನಾಪಡೆಗಳು ಕಾರ್ಯಾಚರಣೆಗೆ ಇಳಿದವು. ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಅಫ್ಘಾನ್ ಮೇಲೆ ದಾಳಿ ನಡೆಸಿದ ಯುಎಸ್ ಸೇನೆಯು ಅಫ್ಘಾನಿಸ್ತಾನವನ್ನು 2001ರಲ್ಲಿ ತಾಲಿಬಾನ್ ಹಿಡಿತದಿಂದ ಬಿಡುಗಡೆಗೊಳಿಸಿತು. ಅದರ ಪರಿಣಾಮವಾಗಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ಕಳೆದುಕೊಂಡಿತು. ಯುಎಸ್ ಬೆಂಬಲಿತ ಸರ್ಕಾರವು ಅಸ್ತಿತ್ವಕ್ಕೆ ಬಂದಿತು.

English summary
Afghanistan: Taliban's first press conference in Kabul After Take control of Nation: Here Read Highlights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X