ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್ 15ರ ಬಳಿಕ ಕಾಬೂಲ್‌ಗೆ ಬಂದಿಳಿದ ಮೊದಲ ವಿದೇಶಿ ವಾಣಿಜ್ಯ ವಿಮಾನ

|
Google Oneindia Kannada News

ಕಾಬೂಲ್, ಸೆಪ್ಟೆಂಬರ್ 13: ಅಫ್ಘಾನಿಸ್ತಾನವನ್ನು ತಾಲಿಬಾನ್ ಆಕ್ರಮಿಸಿಕೊಂಡ ಬಳಿಕ ಮೊದಲ ಬಾರಿಗೆ ಕಾಬೂಲ್‌ ಏರ್‌ಪೋರ್ಟ್‌ಗೆ ವಿದೇಶಿ ವಾಣಿಜ್ಯ ವಿಮಾನವೊಂದು ಬಂದಿಳಿದಿದೆ.

ಪಾಕಿಸ್ತಾನದ ಅಂತಾರಾಷ್ಟ್ರೀಯ ವಿಮಾನವು ಕೆಲವು ಪ್ರಯಾಣಿಕರನ್ನು ಹೊತ್ತು ಕಾಬೂಲ್ ಏರ್‌ಪೋರ್ಟ್‌ಗೆ ಸೋಮವಾರ ಬಂದಿಳಿದಿದೆ. ಆಗಸ್ಟ್ 15ರಂದು ಅಫ್ಘಾನಿಸ್ತಾನದ ಆಡಳಿತವನ್ನು ತಾಲಿಬಾನ್ ಪಡೆದ ಬಳಿಕ ಮೊದಲ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಕಾಬೂಲ್‌ಗೆ ತಲುಪಿದೆ.

ಕಾಬೂಲ್ ಏರ್‌ಪೋರ್ಟ್ ಬಾಂಬ್ ದಾಳಿ: ಮೃತರ ಸಂಖ್ಯೆ 103ಕ್ಕೆ ಏರಿಕೆಕಾಬೂಲ್ ಏರ್‌ಪೋರ್ಟ್ ಬಾಂಬ್ ದಾಳಿ: ಮೃತರ ಸಂಖ್ಯೆ 103ಕ್ಕೆ ಏರಿಕೆ

ವಿಮಾನದಲ್ಲಿ ಯಾರೂ ಇರಲಿಲ್ಲ, ಸುಮಾರು 10 ಮಂದಿಯಷ್ಟು ಸಿಬ್ಬಂದಿಯೇ ಇದ್ದರು ಎಂದು ಪತ್ರಕರ್ತರೊಬ್ಬರು ಹೇಳಿದ್ದಾರೆ.

First Foreign Commercial Flight Since Taliban Takeover Lands In Kabul

ವಾರಾಂತ್ಯದಲ್ಲಿ ವಿಮಾನಯಾನ ಸಂಸ್ಥೆಯು ನಿಯಮಿತ ವಾಣಿಜ್ಯ ಸೇವೆಗಳನ್ನು ಪುನರಾರಂಭಿಸಲು ಚಿಂತನೆ ನಡೆಸಿದೆ. ಆದರೆ ಎರಡು ರಾಜಧಾನಿಗಳ ನಡುವೆ ವಿಮಾನಗಳು ಎಷ್ಟು ಬಾರಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳುವುದು ಕಷ್ಟ.

ಕಾಬೂಲ್‌ನಲ್ಲಿ 120,000ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸುವಾಗ ಏರ್‌ಪೋರ್ಟ್ ಅಸ್ತವ್ಯಸ್ಥವಾಗಿತ್ತು. ಹಲವು ಬಾರಿ ದಾಳಿಯೂ ಸಂಭವಿಸಿತ್ತು.

ಕಳೆದ ತಿಂಗಳು ಕಾಬೂಲ್ ಅನ್ನು ತಾಲಿಬಾನಿಗಳು ವಶಪಡಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಮಾಧ್ಯಮದ ಮುಂದೆ ಕಾಣಿಸಿಕೊಂಡಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ವಿರೋಧಿಗಳ ಸರ್ಕಾರವಿದ್ದಾಗಲೂ ದೇಶದಲ್ಲೇ ಅಡಗಿದ್ದೆ ಎಂದು ಹೇಳಿಕೊಂಡಿದ್ದಾನೆ.

ವರ್ಷಗಳ ಕಾಲ ಮುಜಾಹಿದ್ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾನು ವಾಯುವ್ಯ ಪಾಕಿಸ್ತಾನದ ನೌಶೇರಾದಲ್ಲಿರುವ ಹಕ್ಕಾನಿಯಾ ಸೆಮಿನರಿಯಲ್ಲಿ ಅಧ್ಯಯನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಇದನ್ನು ಅಂತಾರಾಷ್ಟ್ರೀಯವಾಗಿ ತಾಲಿಬಾನ್ ವಿಶ್ವವಿದ್ಯಾಲಯ ಅಥವಾ 'ಜಿಹಾದ್ ವಿಶ್ವವಿದ್ಯಾಲಯ' ಕರೆಯಲಾಗಿದೆ.

ಅಮೆರಿಕಾ ಮತ್ತು ಅಫ್ಘಾನ್ ರಾಷ್ಟ್ರೀಯ ಪಡೆಗಳು ನಾನು ಸಕ್ರಿಯವಾಗಿಲ್ಲ ಎಂದು ಭಾವಿಸುತ್ತಿದ್ದರು ಎಂದು ಮುಜಾಹಿದ್ ಸಂದರ್ಶನವೊಂದರಲ್ಲಿ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆಗೆ ತಿಳಿಸಿದರು.

ನನ್ನನ್ನು ಸೆರೆಹಿಡಿಯುವ ಪ್ರಯತ್ನಗಳಲ್ಲಿ ಎಷ್ಟೋ ಬಾರಿ ನನ್ನ ಮೇಲೆ ದಾಳಿಗಳು ನಡೆದಿದ್ದು ಅವುಗಳಿಂದ ತಪ್ಪಿಸಿಕೊಂಡೆ. ನಾನು ನಿಜವಾಗಿಯೂ ಬದುಕಿಲ್ಲ ಎಂದು ಅವರು ಭಾವಿಸಿದ್ದರು ಎಂದು ಹೇಳಿದ್ದಾರೆ.

ಇನ್ನೂ ನಾನು ಕಾಬೂಲ್ ನಲ್ಲೇ ಉಳಿದುಕೊಂಡಿದ್ದು ಅಫ್ಘಾನಿಸ್ತಾನವನ್ನು ಮುಕ್ತವಾಗಿ ಚಲಿಸುವಲ್ಲಿ ಯಶಸ್ವಿಯಾಗಿದ್ದೇನೆ. ತಾಲಿಬಾನ್ ಚಟುವಟಿಕೆಗಳ ಪ್ರತಿಯೊಂದು ಮಾಹಿತಿಯನ್ನೂ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದ್ದಾರೆ.

ಕಾಬೂಲ್‌ ಏರ್‌ಪೋರ್ಟ್‌ನಲ್ಲಿ ಆಗಸ್ಟ್ 26ರಂದು ಸಂಭವಿಸಿದ ಸರಣಿ ಬಾಂ103 ಮಂದಿ ಮೃತಪಟ್ಟಿದ್ದರು. ಈ ಕುರಿತು ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟಗಳು ಕನಿಷ್ಠ 90 ಅಫ್ಘಾನ್ ನಾಗರಿಕರನ್ನು ಬಲಿ ತೆಗೆದುಕೊಂಡಿವೆ ಎಂದು ದಿ ವಾಲ್ ಸ್ಟ್ರೀಟ್ ಜರ್ನಲ್ ತಿಳಿಸಿದೆ.

ದಾಳಿ ನಂತರ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಐಎಸ್ ನ ಈ ದಾಳಿಗೆ ಜಯವಿಲ್ಲ. ಅಮೆರಿಕದ ಜನರನ್ನು ನಾವು ರಕ್ಷಿಸುತ್ತೇವೆ, ನಮ್ಮ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ದಾಳಿ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಲ್ಲಿ ಹೆಚ್ಚುವರಿ ಮಿಲಿಟರಿ ನಿಯೋಜನೆ ಕುರಿತಂತೆ ಪ್ರತಿಕ್ರಿಯಿಸಿದ ಜೋ ಬೈಡನ್, ಒಂದು ವೇಳೆ ಹೆಚ್ಚುವರಿ ಮಿಲಿಟರಿ ಪಡೆ ಅಗತ್ಯವಾದರೆ ಅದಕ್ಕೆ ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ.

ಪೆಂಟಗನ್ ಈ ಹಿಂದೆ 13 ಸೈನಿಕರ ಸಾವನ್ನು ದೃಢಪಡಿಸಿದೆ. ಕಾಬೂಲ್ ವಿಮಾನ ನಿಲ್ದಾಣ ಮತ್ತು ಅದರ ಹೊರವಲಯವನ್ನು ಗುರಿಯಾಗಿಸಿಕೊಂಡು ಗುರುವಾರ, ಕನಿಷ್ಠ ನಾಲ್ಕು ಸ್ಫೋಟಗಳು ನಡೆದವು. ಇಸ್ಲಾಮಿಕ್ ಸ್ಟೇಟ್-ಖೋರಾಸನ್ ಭಯೋತ್ಪಾದಕ ಗುಂಪು ಈ ದಾಳಿಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ.

ತಾಲಿಬಾನ್ ಹಿತದೃಷ್ಟಿಯಿಂದ ಉಗ್ರಗಾಮಿ ಸಂಘಟನೆ ಹೊಂದಾಣಿಕೆ ಮಾಡಿಕೊಂಡು ಸಂಚು ರೂಪಿಸಲು ಸಾಧ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೊ ಬೈಡನ್ ಹೇಳಿದ್ದಾರೆ.

ಕಾಬೂಲ್ ವಿಮಾನ ನಿಲ್ದಾಣ ಬಳಿ ಸಂಭವಿಸಿದ ಆತ್ಮಾಹುತಿ ದಾಳಿಯಲ್ಲಿ 13 ಮಂದಿ ಅಮೆರಿಕ ಸೈನಿಕರು ಹುತಾತ್ಮರಾಗಿದ್ದು 18 ಮಂದಿ ಗಾಯಗೊಂಡಿದ್ದಾರೆ. 90 ಕ್ಕೂ ಹೆಚ್ಚು ಅಫ್ಘನ್ ಪ್ರಜೆಗಳು ಮೃತಪಟ್ಟಿದ್ದಾರೆ. ಅಮೆರಿಕ ಸೈನಿಕರನ್ನು ಗುರಿಯಾಗಿಸಿಕೊಂಡು ಐಸಿಸ್ ಉಗ್ರರು ದಾಳಿ ನಡೆಸಿದ್ದಾರೆ.

English summary
A Pakistan International Airlines (PIA) plane carrying a handful of passengers touched down at Kabul airport Monday, the first international commercial flight to land since the Taliban retook power in Afghanistan on August 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X