Get Updates
Get notified of breaking news, exclusive insights, and must-see stories!

Air India Flight: ಅಹಮದಬಾದ್‌ ದುರಂತದ ಬೆನ್ನಲ್ಲೇ ಮತ್ತೊಂದು ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

Air India Flight: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ AI-171 ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ (ಜೂನ್‌ 12) ಪತನ ಆಗಿತ್ತು. ಇದು ಇಡೀ ದೇಶವನ್ನೇ ಬೆಚ್ಚಿಬಿಳಿಸಿದ ಅತೀ ದೊಡ್ಡ ದುರಂತವಾಗಿದೆ. ಇದರ ಬೆನ್ನಲ್ಲೇ ಇದೀಗ ಇಂದು (ಜೂನ್‌ 13) ಮತ್ತೊಂದು ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಷ ಮಾಡಿದ ಘಟನೆ ಥಾಯ್ಲೆಂಡ್‌ನಲ್ಲಿ ನಡೆದಿದೆ. ಹಾಗಾದ್ರೆ ಇದಕ್ಕೆ ಕಾರಣ ಏನೆಂದು ಇಲ್ಲಿ ತಿಳಿಯಿರಿ.

ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಆದ್ದರಿಂದ ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತಿಳಿಸಿದ್ದಾರೆ.

Air India Flight Makes Emergency Landing After Ahmedabad plane crash Know reason

AI 379 ಏರ್ ಇಂಡಿಯಾ ವಿಮಾನ ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಆದ್ದರಿಂದ ತಕ್ಷಣವೇ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ. ಈ ವೇಳೆ ಇದರಲ್ಲಿ 156 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ರಂದು ತಿಳಿದುಬಂದಿದೆ.
ಅಹಮದಾಬಾದ್‌ ವಿಮಾನ ಭೀಕರ ದುರಂತ ಮಾಸಿಲ್ಲ. ಈ ಸಮಯದಲ್ಲೇ ವಿಮಾನಕ್ಕೆ ಬೆದರಿಕೆ ಕರೆ ಬಂದಿದೆ.

ಗುಜ್‌ರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಗುರುವಾರ ಏರ್ ಇಂಡಿಯಾ ವಿಮಾನ ಪತನ ಆಗಿತ್ತು. ಈ ದುರಂತದ ಬೆನ್ನಲ್ಲೇ ಏರ್​​ ಇಂಡಿಯಾ ವಿಮಾನಕ್ಕೆ ಬಾಂಬ್​​​ ಬೆದರಿಕೆ ಬಂದಿದ್ದು, ಇದೀಗ ಈ ವಿಚಾರ ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಇನ್ನು ಬಾಂಬ್​​ ಬೆದರಿಕೆ ಬಳಿಕ ಏರ್​​ ಇಂಡಿಯಾ ವಿಮಾನ ಸಿಬ್ಬಂದಿ ವಿಮಾನ AI 379ನಿಂದ ಪ್ರಯಾಣಿಕರನ್ನು ಹೊರಕ್ಕೆ ಕರದುಕೊಂಡು ಬಂದಿದ್ದಾರೆ ಎಂದು ಥೈಲ್ಯಾಂಡ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ, ಪ್ರಾಥಮಿಕ ಶೋಧಕಾರ್ಯಚರಣೆ ಬಳಿಕ ಆ ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆ ಆಗಿಲ್ಲ. ವಿಮಾನದಲ್ಲಿ 156 ಪ್ರಯಾಣಿಕರಿದ್ದು, ಈ ವೇಳೆ ಯಾರು ಭಯಪಡಬೇಡಿ, ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಪ್ರಯಾಣಿಕರಿಗೂ ತಿಳಿಸಿ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ.

ಈ ಏರ್ ಇಂಡಿಯಾ ವಿಮಾನವು ಶುಕ್ರವಾರ ಬೆಳಗ್ಗೆ 9:30ಕ್ಕೆ ಫುಕೆಟ್ ವಿಮಾನ ನಿಲ್ದಾಣದಿಂದ ಭಾರತದ ನವದೆಹಲಿ ಕಡೆಗೆ ಹೊರಟ್ಟಿತ್ತು. ಅಂಡಮಾನ್ ಸಮುದ್ರದ ಸುತ್ತಲೂ ವಿಶಾಲವಾದ ಲೂಪ್ ಮಾಡಿ ಥಾಯ್ ದ್ವೀಪದಲ್ಲಿ ಮತ್ತೆ ಇಳಿಯಿತು ಎಂದು ಫ್ಲೈಟ್ ಟ್ರ್ಯಾಕರ್ ಫ್ಲೈಟ್‌ರಾಡರ್ 24 ತಿಳಿಸಿದೆ. ಬಾಂಬ್ ಬೆದರಿಕೆಯ ಕುರಿತು ಎಒಟಿ ಇನ್ನೂ ಯಾವುದೇ ವಿವರಗಳನ್ನು ನೀಡಿಲ್ಲ ಎಂದು ತಿಳಿಸಿದೆ.

ಸಾಮಾನ್ಯವಾಗಿ ಒಂದು ಯಾವುದಾದರೂ ವಿಮಾನ ದುರಂತ ಸಂಭವಿಸಿತೆಂದರೆ, ಬೇರೆ ವಿಮಾನದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರಿಗೂ ಜೀವಭಯ ಇದ್ದೇ ಇರುತ್ತದೆ. ಇಂತಹ ಸಮಯದಲ್ಲೇ ಬೆದರಿಕೆಯಂತಹ ಸಂದೇಶ ಬಂದರೆ ಇನ್ನೂ ಭಯ ಹೆಚ್ಚಾಗಿಬಿಡುತ್ತದೆ. ಆದರೆ, ಇಂತಹ ಸಮಯಗಳಲ್ಲಿ ವಿಮಾನ ಸಿಬ್ಬಂದಿ ಪ್ರಯಾಣಿಕರಿಗೆ ಅಭಯ ನೀಡುವ ಕೆಲಸವನ್ನು ಮಾಡುತ್ತಾರೆ. ಇಂತಹದ್ದೇ ಘಟನೆ ಥೈಲ್ಯಾಂಡ್‌ನಲ್ಲಿ ಇಂದು ನಡೆದಿದೆ.

ಈಗಾಗಲೇ ಭಾರತದ ಅಹಮದಬಾದ್‌ನಲ್ಲಿ ಸಂಭವಿಸಿದ ವಿಮಾನ ಪತನ ದುರಂತ ವಿಶ್ವಮಟ್ಟದಲ್ಲಿ ಸುದ್ದಿಯಾಯಿತು. ಅಷ್ಟರ ಮಟ್ಟಿಗೆ ಈ ವರ್ಷದಲ್ಲಿ ನಡೆದ ಅತೀ ದೊಡ್ಡ ದುರಂತಗಳಲ್ಲಿ ಒಂದಾಗಿದೆ. ಇದರಿಂದ ಇನ್ನಿತರ ವಿಮಾನ ಪ್ರಯಾಣಿಕರಿಗೂ ಭಯ ಆಗುವುದು ಸಹಜ. ಆದರೆ ಈ ವೇಳೆ ವಿಮಾನ ಸಿಬ್ಬಂಧಿಯ ಅಭಯ ನೀಡುವ ಕೆಲಸವನ್ನು ಮೆಚ್ಚಲೇಬೇಕು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+