Breaking; ನೇಪಾಳ, ರನ್‌ವೇಯಲ್ಲಿ 68 ಪ್ರಯಾಣಿಕರಿದ್ದ ವಿಮಾನ ಪತನ
ನವ ದೆಹಲಿ, ಜನವರಿ 15; 72 ಪ್ರಯಾಣಿಕರ ಸಾಮರ್ಥ್ಯದ ವಿಮಾನ ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ.
ಭಾನುವಾರ 68 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಇದ್ದ Yeti ವಿಮಾನಯಾನ ಸಂಸ್ಥೆಗೆ ಸೇರಿದ್ದ ವಿಮಾನ ವಿಮಾನ ನಿಲ್ದಾಣದ ರನ್‌ವೇ ಸಮೀಪ ಪತನಗೊಂಡಿದೆ. ಪತನಗೊಂಡ ವಿಮಾನದಲ್ಲಿ ಐವರು ಭಾರತೀಯ ನಾಗರಿಕರು ಇದ್ದರು ಎಂಬ ಮಾಹಿತಿ ಸಿಕ್ಕಿದೆ.
ವಿಮಾನ ಪತನಗೊಂಡ ತಕ್ಷಣ ವಿಮಾನ ನಿಲ್ದಾಣ ಬಂದ್ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ವಿಮಾನ ಪತನಗೊಂಡ ಬಳಿಕ ಬೆಂಕಿ ಹೊತ್ತಿಕೊಂಡು ಸುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.

ಕಠ್ಮಂಡು ವಿಮಾನ ನಿಲ್ದಾಣದ ಯೇತಿ ಏರ್‌ಲೈನ್ಸ್ ವಕ್ತಾರ ಸುದರ್ಶನ್ ಬೃತಾವಾಲಾ ಈ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. 68 ಪ್ರಯಾಣಿಕರು, 4 ಸಿಬ್ಬಂದಿ ಇದ್ದ ಯೇತಿ ಏರ್‌ಲೈನ್ಸ್‌ಗೆ ಸೇರಿದ ವಿಮಾನ ಹಳೆಯ ವಿಮಾನ ನಿಲ್ದಾಣ, ಪೊಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನಗೊಂಡಿದೆ ಎಂದು ಹೇಳಿದ್ದಾರೆ.
ಯೇತಿ ಏರ್‌ಲೈನ್ಸ್‌ನ 9ಎನ್-ಎಎನ್‌ಸಿ ಎಟಿಆರ್-72 ವಿಮಾನ ಭಾನುವಾರ ಬೆಳಗ್ಗೆ 10.30ಕ್ಕೆ ಕಠ್ಮಂಡು ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿತ್ತು. ಪೊಖರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಸಂದರ್ಭದಲ್ಲಿ ಪತನಗೊಂಡಿದೆ.
ವಿಮಾನ ಪತನಗೊಂಡ ಮಾಹಿತಿ ಪಡೆದ ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ತುರ್ತು ಸಭೆಯನ್ನು ನಡೆಸಿದರು. ರಕ್ಷಣಾ ಕಾರ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಲು ಜನವರಿ 16ರಂದು ರಾಷ್ಟ್ರೀಯ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಇದುವರೆಗೂ 40ಕ್ಕೂ ಹೆಚ್ಚು ಶವಗಳನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಧಿಕಾರಿಗಳು ರಕ್ಷಣಾ ಕಾರ್ಯದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.












Click it and Unblock the Notifications