ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೀನಾ v/s ಅಮೆರಿಕ ನಡುವೆ ಭೀಕರ ಯುದ್ಧಕ್ಕೆ ಸಿದ್ಧವಾಯ್ತಾ ವೇದಿಕೆ?

|
Google Oneindia Kannada News

ಅದೊಂದು ಜಾಗಕ್ಕಾಗಿ ಚೀನಾ ಹಾಗೂ ಅಮೆರಿಕ ಜಿದ್ದಿಗೆ ಬಿದ್ದಿವೆ. ಅದೊಂದು ಜಾಗಕ್ಕಾಗಿ ರಕ್ತದೋಕುಳಿಗೂ ಸಿದ್ಧ ಎಂಬ ಸಂದೇಶ ರವಾನಿಸುತ್ತಿವೆ. ಪರಿಸ್ಥಿತಿ ಹೀಗಿರುವಾಗಲೇ ಚೀನಾ ತನ್ನ ಹಠ ಮುಂದುವರಿಸಿ, ವಿವಾದಿತ ಜಾಗದಲ್ಲೇ ಚೀನಾ ದೊಡ್ಡದಾದ ಗುಂಡಿ ತೋಡಿದೆ. ಯೆಸ್, ದಕ್ಷಿಣ ಚೀನಾ ಸಮುದ್ರ ಪ್ರದೇಶ ಮತ್ತೆ ಬೂದಿ ಮುಚ್ಚಿದ ಕೆಂಡವಾಗಿದೆ.

ಚೀನಾ ವಿಜ್ಞಾನಿಗಳು ತಯಾರಿಸಿರುವ 'ಸೀ ಬುಲ್-II' ಬಳಸಿಕೊಂಡು ಸದ್ಯ ದಕ್ಷಿಣ ಚೀನಾ ಸಮುದ್ರದಲ್ಲಿ ಸಂಶೋಧನೆ ನಡೆಸುತ್ತಿದೆಯಂತೆ ಚೀನಾ. 2,060 ಮೀಟರ್ ಅಂದ್ರೆ 6,760 ಅಡಿಯಷ್ಟು ಆಳದಲ್ಲಿ 231 ಮೀಟರ್ ರಂಧ್ರ ಕೊರೆದಿದ್ದಾರೆ ಎನ್ನಲಾಗಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಊಹೆಗೂ ಮಿರಿದ ಪ್ರಮಾಣದಲ್ಲಿ ನೈಸರ್ಗಿಕ ಸಂಪತ್ತು ಅಡಗಿದೆ.

ಅಮೆರಿಕ ಯುದ್ಧನೌಕೆಯನ್ನು ಓಡಿಸಿದ ಚೀನಾ: ಜೋ ಬೈಡನ್‌ಗೆ ಮೊದಲ ಬಿಸಿ ಅಮೆರಿಕ ಯುದ್ಧನೌಕೆಯನ್ನು ಓಡಿಸಿದ ಚೀನಾ: ಜೋ ಬೈಡನ್‌ಗೆ ಮೊದಲ ಬಿಸಿ

ಅದ್ರಲ್ಲೂ ನೈಸರ್ಗಿಕ ಅನಿಲದ ಮೇಲೆ ಕಣ್ಣಿಟ್ಟು ಈ ಸಂಶೋಧನೆ ನಡೆಸಲಾಗುತ್ತಿದೆ ಎಂದು ಚೀನಾ ವಿರೋಧಿಗಳು ಆರೋಪಿಸುತ್ತಿದ್ದಾರೆ. ಆದರೆ ದಕ್ಷಿಣ ಚೀನಾ ಸಮುದ್ರದಲ್ಲಿನ ಯಾವ ಭಾಗದಲ್ಲಿ ಈ ಪ್ರಯೋಗ ನಡೆದಿದೆ ಎಂಬುದು ಈವರೆಗೂ ಸ್ಪಷ್ಟವಾಗಿಲ್ಲ. ಇದೇ ಜಾಗಕ್ಕಾಗಿ ಚೀನಾ ಜೊತೆ ಮಲೇಷ್ಯಾ, ಫಿಲಿಪೈನ್ಸ್, ತೈವಾನ್, ವಿಯೆಟ್ನಾಂ ಮತ್ತಿತರ ರಾಷ್ಟ್ರಗಳು ತಿಕ್ಕಾಟ ನಡೆಸುತ್ತಾ ಬಂದಿವೆ.

ಅಮೆರಿಕ ಸೇನೆಗೆ ಬಿಗ್ ಶಾಕ್..!

ಅಮೆರಿಕ ಸೇನೆಗೆ ಬಿಗ್ ಶಾಕ್..!

ದಕ್ಷಿಣ ಚೀನಾ ಸಮುದ್ರದಲ್ಲಿ ಇತ್ತೀಚೆಗೆ ಅಮೆರಿಕದ ನೌಕಾಪಡೆ ಗಸ್ತು ತಿರುವುದನ್ನು ಹೆಚ್ಚಿಸಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಚೀನಾ ದಕ್ಷಿಣ ಚೀನಾ ಸಮುದ್ರದಲ್ಲಿ ಬೃಹತ್ ರಂಧ್ರ ಕೊರೆದು ಅಧ್ಯಯನ ನಡೆಸುವ ಮೂಲಕ ಅಮೆರಿಕದ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸುತ್ತಿದೆ. ಮತ್ತೊಂದ್ಕಡೆ ಅಮೆರಿಕ ಪರಿಸ್ಥಿತಿಯನ್ನ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಅಂತಲೂ ತಜ್ಞರು ಆರೋಪಿಸುತ್ತಿದ್ದಾರೆ. ಆದ್ರೆ ಚೀನಾ ಮಾತ್ರ ಅಮೆರಿಕದ ಬೆದರಿಕೆ ಅಥವಾ ಎಚ್ಚರಿಕೆಗೆ ಬಗ್ಗದೆ ದಕ್ಷಿಣ ಚೀನಾ ಸಮುದ್ರ ನಮ್ಮದು ಎನ್ನುತ್ತಿದೆ. ಇದು ಆತಂಕವನ್ನ ಮತ್ತಷ್ಟು ಹೆಚ್ಚುಮಾಡಿದೆ.

ಟ್ರಿಲಿಯನ್ ಡಾಲರ್ ಜಾಗಕ್ಕೆ ವಾರ್..?

ಟ್ರಿಲಿಯನ್ ಡಾಲರ್ ಜಾಗಕ್ಕೆ ವಾರ್..?

ದಕ್ಷಿಣ ಚೀನಾ ಸಮುದ್ರದಲ್ಲಿ ಹಿಡಿತ ಸಾಧಿಸುವ ಚೀನಾ ಪ್ರಯತ್ನ ಇಂದು, ನಿನ್ನೆಯದಲ್ಲ. ಸುಮಾರು 3-4 ದಶಕಗಳಿಂದಲೂ ಈ ಜಾಗಕ್ಕಾಗಿ ರಕ್ತ ರಹಿತ ಬಡಿದಾಟ ನಡೆಯುತ್ತಲೇ ಇದೆ. ಅಮೆರಿಕ ಚೀನಾ ವಿರುದ್ಧ ಈ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಕತ್ತಿ ಮಸೆಯುತ್ತಲೇ ಇದೆ. ಇಷ್ಟಕ್ಕೆಲ್ಲಾ ಕಾರಣವಾಗಿರುವುದು ದಕ್ಷಿಣ ಚೀನಾ ಸಮುದ್ರದಲ್ಲಿ ಅವಿತಿರುವ ಸಂಪತ್ತು. ಸುಮಾರು 3.5 ಮಿಲಿಯನ್ ಸ್ಕ್ವೇರ್ ಕಿಲೋ ಮೀಟರ್ ಅಂದರೆ ಭಾರತ ಹೊಂದಿರುವ ಭೂಭಾಗಕ್ಕಿಂತಲೂ ದೊಡ್ಡದಾದ ಪ್ರದೇಶ ದಕ್ಷಿಣ ಚೀನಾ ಜಲಗಡಿಗೆ ಇದೆ. ಭಾರಿ ಪ್ರಮಾಣದ ನೈಸರ್ಗಿತ ಸಂಪನ್ಮೂಲ ಹಾಗೂ ವ್ಯವಹಾರ ನಡೆಸುವ ಜಾಗ ಇದಾಗಿದೆ.

400 ಯುದ್ಧ ನೌಕೆಗಳ ಟಾರ್ಗೆಟ್..!

400 ಯುದ್ಧ ನೌಕೆಗಳ ಟಾರ್ಗೆಟ್..!

ಚೀನಾ ಸರ್ಕಾರ ನೌಕಾ ಬಲ ಹೆಚ್ಚಿಸಲು ಮತ್ತಷ್ಟು ಆದ್ಯತೆ ನೀಡುತ್ತಿದ್ದು, ಮುಂದಿನ 4 ವರ್ಷಗಳ ಅವಧಿಯಲ್ಲಿ ಈಗಿರುವ 360 ಯುದ್ಧ ನೌಕೆಗಳನ್ನು 400ಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಇದು ತನ್ನ ಜಲ ಗಡಿಯಲ್ಲಿನ ಭದ್ರತೆ ಹಾಗೂ ಶತ್ರು ಪಡೆಗಳಿಗೆ ದೊಡ್ಡ ಸಂದೇಶವಾಗಲಿದೆ ಎಂಬುದು ಚೀನಾ ಲೆಕ್ಕಾಚಾರ. ಈಗಾಗಲೇ ಭೂ ಸೇನೆ ಹಾಗೂ ವಾಯು ಸೇನೆಗಳಲ್ಲೂ ಬಲ ಪ್ರದರ್ಶನ ಮಾಡಿರುವ ಚೀನಿ ಸೇನೆ, ಸಮದ್ರದ ಮೇಲೂ ಹಿಡಿತ ಸಾಧಿಸುವ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾ ಪ್ರತಿಪಾದಿಸುವ ಹಕ್ಕು ಸ್ವಾಮ್ಯ ಇದರಿಂದ ಮತ್ತಷ್ಟು ಗಟ್ಟಿಯಾಗಲಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಿಯರ ಪ್ರಾಬಲ್ಯವನ್ನು ತಗ್ಗಿಸಲು ಅಮೆರಿಕ ನೇತೃತ್ವದಲ್ಲಿ 'ಕ್ವಾಡ್' ಒಕ್ಕೂಟ ಪ್ರಯತ್ನಿಸುತ್ತಿದೆ.

ಎಷ್ಟಿದೆ ಗೊತ್ತಾ ಸಂಪತ್ತಿನ ಪ್ರಮಾಣ..?

ಎಷ್ಟಿದೆ ಗೊತ್ತಾ ಸಂಪತ್ತಿನ ಪ್ರಮಾಣ..?

ಅಮೆರಿಕದ ಸರ್ಕಾರಿ ಸಂಸ್ಥೆ ನೀಡಿರುವ ಮಾಹಿತಿಯಂತೆ ದಕ್ಷಿಣ ಚೀನಾ ಸಮುದ್ರದಲ್ಲಿ 190 ಟ್ರಿಲಿಯನ್ ಕ್ಯೂಬಿಕ್ ಅಡಿ ನೈಸರ್ಗಿಕ ಅನಿಲ ಅಡಗಿದೆ. ಇಷ್ಟು ಗ್ಯಾಸ್ ಸಿಕ್ಕರೆ ಹತ್ತಾರು ವರ್ಷ ಚೀನಾ ಯಾರ ಬಳಿಯೂ ನ್ಯಾಚ್ಯುರಲ್ ಗ್ಯಾಸ್‌ಗೆ ಕೈಚಾಚುವ ಅವಶ್ಯಕತೆ ಇರೋದಿಲ್ಲ. ಹಾಗೇ 11 ಬಿಲಿಯನ್ ಬ್ಯಾರೆಲ್‌ ಪೆಟ್ರೋಲ್, ಡೀಸೆಲ್ ಸಂಯುಕ್ತ ಇಲ್ಲಿ ಅಡಗಿದೆ. ಇಷ್ಟೇ ಆಗಿದ್ದರೆ ಚೀನಾ ಅಷ್ಟೊಂದು ತಲೆಕೆಡಿಸಿಕೊಳ್ಳುವ ಸಾಧ್ಯತೆ ಕಡಿಮೆ ಇರುತ್ತಿತ್ತೇನೋ. ಆದರೆ ಇದೆಲ್ಲವನ್ನೂ ಮೀರಿಸುವ ಖಜಾನೆ ದಕ್ಷಿಣ ಚೀನಾ ಸಮುದ್ರದಲ್ಲಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಅಮೂಲ್ಯ ಅದಿರುಗಳಿವೆ. ಚಿನ್ನ ಸೇರಿದಂತೆ ಟಿನ್, ಕ್ರೋಮೈಟ್, ಮ್ಯಾಗ್ನಟೈಟ್, ಜಿರ್ಕಾನ್ ಮತ್ತಿತರ ಅದಿರುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಇಷ್ಟು ಪ್ರಮಾಣದ ಸಂಪತ್ತನ್ನು ಬಿಟ್ಟುಕೊಡಲು ಚೀನಾ ಬಿಲ್‌ಕುಲ್ ಸಿದ್ಧವಿಲ್ಲ.

5.3 ಟ್ರಿಲಿಯನ್ ಡಾಲರ್ ವಹಿವಾಟು..!

5.3 ಟ್ರಿಲಿಯನ್ ಡಾಲರ್ ವಹಿವಾಟು..!

ಆಶ್ಚರ್ಯವಾದರೂ ಇದು ನಂಬಲೇಬೇಕಾದ ವಿಚಾರ. ದಕ್ಷಿಣ ಚೀನಾ ಸಮುದ್ರ ತೈಲ ಹಾಗೂ ಅದಿರುಗಳನ್ನು ಮಾತ್ರ ಹೊಂದಿಲ್ಲ. ಸಂಪದ್ಭರಿತ ವ್ಯಾಪಾರವನ್ನೂ ನಡೆಸುತ್ತಾ ಬಂದಿದೆ. ಸೌತ್ ಚೀನಾ ಸಮುದ್ರ ಮಾರ್ಗವಾಗಿ ಪ್ರತಿವರ್ಷವೂ ಸುಮಾರು 5.3 ಟ್ರಿಲಿಯನ್ ಮೊತ್ತದ ವ್ಯಾಪಾರ, ವಹಿವಾಟು ನಡೆಯುತ್ತಿದೆ. ಇದು ಜಗತ್ತಿನಲ್ಲಿ ಜಲ ಮಾರ್ಗದ ಮೂಲಕ ನಡೆಯುವ ವ್ಯಾಪಾರದ 3ನೇ ಒಂದು ಭಾಗವಾಗಿದೆ. ಭಾರತವು ಕೂಡ ಪ್ರತಿವರ್ಷ 200 ಬಿಲಿಯನ್ ಡಾಲರ್ ಮೊತ್ತದ ವಹಿವಾಟನ್ನ ದಕ್ಷಿಣಚೀನಾ ಸಮುದ್ರ ಮಾರ್ಗದ ಮೂಲಕ ನಡೆಸುತ್ತದೆ. ಅಮೆರಿಕ, ಜಪಾನ್, ಚೀನಾ, ಕೊರಿಯಾ, ಆಸ್ಟ್ರೇಲಿಯಾ ಹೀಗೆ ಹತ್ತಾರು ದೇಶಗಳು ಇದೇ ಮಾರ್ಗ ಬಳಸಿ ವ್ಯಾಪಾರ ನಡೆಸುತ್ತಿವೆ. ಇದೇ ಕಾರಣಕ್ಕೆ ದಕ್ಷಿಣ ಚೀನಾ ಸಮುದ್ರ ಸಂಘರ್ಷದ ತಾಣವಾಗಿ ಮಾರ್ಪಟ್ಟಿದೆ.

English summary
Allegedly China drills in disputed South China Sea as US naval patrol grows.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X