ಅಫ್ಘಾನಿಸ್ತಾನದಲ್ಲಿ ಸುಮಾರು 80 ಶಾಲಾ ಬಾಲಕಿಯರಿಗೆ ವಿಷ ಪ್ರಾಶನ: ಆಸ್ಪತ್ರೆಗೆ ದಾಖಲು
ಕಾಬೂಲ್, ಜೂನ್. 05: ಉತ್ತರ ಅಫ್ಘಾನಿಸ್ತಾನದ ಪ್ರಾಥಮಿಕ ಶಾಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಸುಮಾರು 80 ಬಾಲಕಿಯರಿಗೆ ವಿಷ ಪ್ರಾಶನ ಮಾಡಿಸಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸ್ಥಳೀಯ ಶಿಕ್ಷಣ ಅಧಿಕಾರಿಯೊಬ್ಬರು ಜೂನ್ 4 ರಂದು ತಿಳಿಸಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಆಗಸ್ಟ್ 2021 ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಮತ್ತು ಅಫ್ಘಾನ್ ಮಹಿಳೆಯರು ಮತ್ತು ಬಾಲಕಿಯರ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಮೇಲೆ ನಿಯಂತ್ರಣ ಹೇರಲಾಗುತ್ತಿದೆ. ಈ ರೀತಿಯ ಶಿಸ್ತುಕ್ರಮವನ್ನು ಪ್ರಾರಂಭಿಸಿದ ನಂತರ ಶಾಲಾ ಬಾಲಕಿಯರ ಮೇಲೆ ಇದು ಮೊದಲ ಆಕ್ರಮಣ ಎನ್ನಲಾಗಿದೆ. ವಿಶ್ವವಿದ್ಯಾನಿಲಯ ಸೇರಿದಂತೆ ಆರನೇ ತರಗತಿಯ ನಂತರದ ಶಿಕ್ಷಣದಿಂದ ಹೆಣ್ಣುಮಕ್ಕಳನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಹೆಚ್ಚಿನ ಉದ್ಯೋಗಗಳು ಮತ್ತು ಸಾರ್ವಜನಿಕ ಸ್ಥಳಗಳಿಂದ ಮಹಿಳೆಯರನ್ನು ನಿರ್ಬಂಧಿಸಲಾಗಿದೆ.

ವಿಷಪ್ರಾಶನವನ್ನು ರೂಪಿಸಿದ ವ್ಯಕ್ತಿಗೆ ವೈಯಕ್ತಿಕ ದ್ವೇಷವಿತ್ತು ಎಂದು ಶಿಕ್ಷಣ ಅಧಿಕಾರಿ ಹೇಳಿದ್ದಾರೆ ಆದರೆ ವಿವರಿಸಲಿಲ್ಲ. ಶನಿವಾರ ಮತ್ತು ಭಾನುವಾರದಂದು ಸರ್-ಎ-ಪುಲ್ ಪ್ರಾಂತ್ಯದಲ್ಲಿ ಈ ಘಟನೆಗಳು ನಡೆದಿವೆ. ಸಂಚರಕ್ ಜಿಲ್ಲೆಯಲ್ಲಿ ಸುಮಾರು 80 ವಿದ್ಯಾರ್ಥಿನಿಯರು ವಿಷ ಸೇವಿಸಿದ್ದಾರೆ ಎಂದು ಪ್ರಾಂತೀಯ ಶಿಕ್ಷಣ ಇಲಾಖೆಯ ಮುಖ್ಯಸ್ಥ ಮೊಹಮ್ಮದ್ ರಹಮಾನಿ ಹೇಳಿದ್ದಾರೆ.
ನಸ್ವಾನ್-ಎ-ಕಬೋದ್ ಆಬ್ ಶಾಲೆಯಲ್ಲಿ 60 ವಿದ್ಯಾರ್ಥಿಗಳು ಮತ್ತು ನಸ್ವಾನ್-ಎ-ಫೈಜಾಬಾದ್ ಶಾಲೆಯಲ್ಲಿ 17 ವಿದ್ಯಾರ್ಥಿಗಳು ವಿಷ ಸೇವಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. "ಎರಡೂ ಪ್ರಾಥಮಿಕ ಶಾಲೆಗಳು ಪರಸ್ಪರ ಹತ್ತಿರದಲ್ಲಿವೆ. ಹೀಗಾಗಿ ಒಂದರ ನಂತರ ಒಂದನ್ನು ಗುರಿಯಾಗಿಸಿಕೊಂಡಿದ್ದಾರೆ" ಎಂದು ಅವರು ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದರು.
"ನಾವು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಮತ್ತು ಈಗ ಅವರೆಲ್ಲರೂ ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಇಲಾಖಾ ತನಿಖೆಯು ನಡೆಯುತ್ತಿದೆ ಮತ್ತು ಆಕ್ರಮಣಗಳನ್ನು ನಡೆಸಲು ಯಾರೋ ದ್ವೇಷದಿಂದ ಮೂರನೇ ವ್ಯಕ್ತಿಗೆ ಹಣ ನೀಡಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಗಳು ತಿಳಿಸುತ್ತಿವೆ ಎಂದು ಮೊಹಮ್ಮದ್ ರಹಮಾನಿ ಹೇಳಿದ್ದಾರೆ.

ಶಾಲಾ ಬಾಲಕಿಯರು ಹೇಗೆ ವಿಷ ಸೇವಿಸಿದ್ದಾರೆ ಅಥವಾ ಅವರ ಗಾಯಗಳ ಸ್ವರೂಪದ ಬಗ್ಗೆ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ. ಮೊಹಮ್ಮದ್ ರಹಮಾನಿ ಅವರ ವಯಸ್ಸನ್ನು ತಿಳಿಸಿಲ್ಲ. ಆದರೆ ಸಂತ್ರಸ್ತರು 1 ರಿಂದ 6 ನೇ ತರಗತಿಯಲ್ಲಿದ್ದಾರೆ ಎಂದು ಹೇಳಿದ್ದಾರೆ. ನೆರೆಯ ಇರಾನ್ ಕಳೆದ ನವೆಂಬರ್‌ನಿಂದ ಹೆಚ್ಚಾಗಿ ಬಾಲಕಿಯರ ಶಾಲೆಗಳಲ್ಲಿ ವಿಷದ ಅಲೆಯಿಂದ ತತ್ತರಿಸಿದೆ. ಈ ಘಟನೆಗಳಲ್ಲಿ ವಿಷಕಾರಿ ಹೊಗೆಯಿಂದ ಸಾವಿರಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಹೇಳಿದೆ. ಆದರೆ ಘಟನೆಗಳ ಹಿಂದೆ ಯಾರಿರಬಹುದು ಅಥವಾ ಯಾವುದಾದರೂ ರಾಸಾಯನಿಕಗಳನ್ನು ಬಳಸಲಾಗಿದೆ ಎಂಬುದರ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications