ನಾವು ಈ ವಿಚಾರದಲ್ಲಿ ಮೂಗು ತೂರಿಸಲ್ಲ ಎಂದ ಅಮೆರಿಕ: ಪಾಕ್‌ ಲೆಕ್ಕಾಚಾರ ತಲೆಕೆಳಗೆ!

ನಿರ್ಣಾಯಕ ಹಂತದಲ್ಲೇ ವಿಶ್ವದ ದೊಡ್ಡಣ್ಣ ಅಮೆರಿಕ ಭಾರತ vs ಪಾಕಿಸ್ತಾನದ ನಡುವಿನ ಸಂಘರ್ಷಕ್ಕೂ ತನಗೂ ಸಂಬಂಧವಿಲ್ಲ ಎಂದು ಜಾರಿಕೊಂಡಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ಹೆಚ್ಚಾಗುತ್ತಿದ್ದು. ಕಳೆದ ರಾತ್ರಿ ಭಾರೀ ದಾಳಿಗಳು ನಡೆದಿವೆ. ರಾತ್ರೋರಾತ್ರಿ ಭಾರತದ ಪ್ರಮುಖ ನಗರಗಳ ಮೇಲೆ ದಾಳಿ ಮಾಡಲು ಮುಂದಾಗಿತ್ತು. ಸಂಘರ್ಷ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಸೇರಿದಂತೆ ವಿವಿಧ ಪ್ರಮುಖ ದೇಶಗಳು ಮಧ್ಯ ಪ್ರವೇಶ ಮಾಡಲಿವೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಆ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಭಾರತವು ಸಹ ಈ ವಿಚಾರದಲ್ಲಿ ಯಾವುದೇ ದೇಶದ ಸಹಾಯವನ್ನು ಈ ಹಂತದಲ್ಲಿ ನಿರೀಕ್ಷೆ ಮಾಡಿಲ್ಲ. ಪಾಕ್‌ ನರಿ ಬುದ್ಧಿಗೆ ಭಾರತೀಯ ಸೇನೆಯು ತಿರುಗೇಟು ನೀಡುತ್ತಿದೆ. ಸಾಮಾನ್ಯವಾಗಿ ಈ ರೀತಿಯ ಸಂಕಷ್ಟದ ಪರಿಸ್ಥಿತಿಯಲ್ಲೂ ಸಾಮಾನ್ಯ ಜನರ ಮೇಲೆ ದಾಳಿಗಳನ್ನು ಮಾಡುವುದಿಲ್ಲ. ಆದರೆ ಪಾಕಿಸ್ತಾನ ಸೇನೆಯು ಭಾರತೀಯರನ್ನು ಗುರಿಯಾಗಿಸಿಕೊಂಡು ಶೆಲ್‌ ದಾಳಿಗಳನ್ನು ಮುಂದುವರಿಸಿದೆ.

ಇದೀಗ ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂರ್ಘಷಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಈ ಸಂದರ್ಭದಲ್ಲಿ ನಾವು ಮಧ್ಯ ಪ್ರವೇಶ ಮಾಡಲು ಸಾಧ್ಯವಿಲ್ಲ. ಅಲ್ಲದೇ ಯಾವುದೇ ದೇಶವನ್ನೂ ನಾವು ನಿರಾಯುಧರಾಗಿ ಅಥವಾ ಶಸ್ತ್ರಾಸ್ತ್ರಗಳನ್ನು ಬಳಸಬೇಡಿ ಎಂದು ಹೇಳಲು ಸಾಧ್ಯವಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸೆ (JD Vance) ಹೇಳಿದ್ದಾರೆ.

America says we won t interfere in India vs Pakistan Pakistan s calculations are upside down

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಎರಡನೇ ಬಾರಿ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ದೇಶಗಳ ನಡುವೆ ಯುದ್ಧ ಸನ್ನಿವೇಶ ಬರಬಾರದು. ಯುದ್ಧ ನಿಲ್ಲಬೇಕು ಎಂದಿದ್ದರು. ಇಸ್ರೇಲ್‌ - ಇರಾನ್‌ ಹಾಗೂ ಉಕ್ರೇನ್‌ ಹಾಗೂ ರಷ್ಯಾ ದೇಶಗಳ ನಡುವೆ ಯುದ್ಧಕ್ಕೆ ಬ್ರೇಕ್‌ ಹಾಕುವಲ್ಲಿ ಅವರು ಬಹುತೇಕ ಯಶಸ್ವಿಯಾಗಿದ್ದಾರೆ. ಆದರೆ, ಭಾರತ ಹಾಗೂ ಪಾಕ್‌ ನಡುವಿನ ಯುದ್ಧದ ವಿಚಾರದಲ್ಲಿ ಅಮೆರಿಕ ಮಧ್ಯಪ್ರವೇಶ ಮಾಡುವುದಕ್ಕೆ ನಿರಾಕರಿಸುತ್ತಿದೆ.

ಭಾರತ ಹಾಗೂ ಪಾಕ್‌ನ ನಡುವೆ ಪರಿಸ್ಥಿತಿ ತೀವ್ರ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿರುವಾಗಲೇ ನಮಗೂ ಇದಕ್ಕೂ ಸಂಬಂಧವಿಲ್ಲ. ಇದರಲ್ಲಿ ಭಾಗಿಯಾಗುವುದಿಲ್ಲ ಅಥವಾ ಈ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ ಎಂದು ಅಮೆರಿಕ ಹೇಳಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಈ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕೆ ಸಾಧ್ಯವಾಗದೆ ಇದ್ದರೂ. ಎರಡು ನ್ಲ್ಯೂಕ್ಲಿಯರ್ ಬಾಂಬ್ (ಪರಮಾಣು - ಅಣ್ವಸ್ತ್ರ) ಹೊಂದಿರುವ ದೇಶಗಳ ನಡುವಿನ ಪರಿಸ್ಥಿತಿಯನ್ನು ನಾವು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+