Get Updates
Get notified of breaking news, exclusive insights, and must-see stories!

20 ವರ್ಷಗಳ ಉಗ್ರರ ಜೊತೆಗಿನ ಫೈಟ್ ಎಂಡ್..! ಅಫ್ಘಾನ್ ಬಿಟ್ಟು ಅಮೆರಿಕ ಎಸ್ಕೇಪ್..!

ಉಗ್ರರ ಕೈಗೆ ಸಿಲುಕಿ ಭೀಕರವಾಗಿ ನಲುಗಿದ ರಾಷ್ಟ್ರ ಯಾವುದಾದರೂ ಇದ್ದರೆ ಮೊದಲ ಸ್ಥಾನ ಪಡೆಯುವುದು ಅಫ್ಘಾನಿಸ್ತಾನ ಮಾತ್ರ. ಅಫ್ಘಾನಿಸ್ತಾನದಲ್ಲಿ ಯಾವುದೂ ಸರಿಯಿಲ್ಲ, ಪ್ರತಿಕ್ಷಣ ಭಯದ ನೆರಳಲ್ಲೇ ಬದುಕಬೇಕು. ಅದರಲ್ಲೂ ತಾಲಿಬಾನಿಗಳ ಅಟ್ಟಹಾಸ ಮಿತಿಮೀರಿದೆ ಹೋಗಿದೆ. ಪರಿಸ್ಥಿತಿ ಹೀಗಿರುವಾಗ ಅಮೆರಿಕ ತನ್ನ ಸೇನೆ ಹಿಂಪಡೆಯಲು ಮುಂದಾಗಿದೆ.

ಸೆಪ್ಟೆಂಬರ್ 11ಕ್ಕೂ ಮೊದಲು ತನ್ನ ಮಿಲಿಟರಿಯನ್ನ ವಾಪಸ್ ಕರೆಸಿಕೊಳ್ಳಲು ಬೈಡನ್ ಸರ್ಕಾರ ನಿರ್ಧರಿಸಿದೆ. ಈ ಮೊದಲು ಮೇ 1ರ ಗಡುವು ನೀಡಿತ್ತು ಅಮೆರಿಕ. ಈ ಹಿಂದಿನ ಟ್ರಂಪ್ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ ತಾಲಿಬಾನ್ ಜೊತೆ ಒಪ್ಪಂದ ಮಾಡಿಕೊಂಡು ಮೇ 1ರ ಒಳಗಾಗಿ ಸೇನೆ ವಾಪಸ್ ಕರೆಸಿಕೊಳ್ಳಲು ಸಿದ್ಧತೆಗಳು ಸಾಗಿದ್ದವು.

ಆದರೆ ದಿಢೀರ್ ಆ ಗಡುವನ್ನು ಮುಂದೂಡಿರುವ ಅಮೆರಿಕ ಸರ್ಕಾರ, ಸೆಪ್ಟೆಂಬರ್ 11ರ ಒಳಗಾಗಿ ಸೇನೆಯನ್ನ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದೆ. ಈ ಮೂಲಕ 20 ವರ್ಷಗಳ ಸುದೀರ್ಘ ಕದನ ಕೊನೆಯಾಗಲಿದೆ. ಅಮೆರಿಕದ ನಿರ್ಧಾರ ಜಾಗತಿಕ ಮಟ್ಟದಲ್ಲಿ ತಲ್ಲಣ ಎಬ್ಬಿಸಿದೆ.

ಅಫ್ಘಾನ್‌ ಜನರಿಗೆ ನೆಮ್ಮದಿಯೇ ಇಲ್ಲ

ಅಫ್ಘಾನ್‌ ಜನರಿಗೆ ನೆಮ್ಮದಿಯೇ ಇಲ್ಲ

ಬ್ರಿಟಿಷರಿಂದ ಅಫ್ಘಾನ್‌ 1919ರಲ್ಲೇ ಸ್ವಾತಂತ್ರ್ಯ ಪಡೆದಿದೆ. ಇದು ಭಾರತಕ್ಕಿಂತ ಮೊದಲಾದರೂ ಅಲ್ಲಿ ಶಾಂತಿ ನೆಲೆಸಿಲ್ಲ. ಸದ್ಯಕ್ಕೆ ಅಫ್ಘಾನ್‌ ಸ್ಥಿತಿ ಹೇಗಿದೆ ಎಂದರೆ, ಧೈರ್ಯವಾಗಿ ಹೊರಗೆ ಹೋಗಲೂ ಸಾಧ್ಯವಿಲ್ಲ. ಯಾವ ಕ್ಷಣದಲ್ಲಿ ಉಗ್ರಪಡೆ ಗುಂಡಿನ ಮಳೆಗರೆಯುತ್ತೋ, ಬಾಂಬ್ ಹಾಕುತ್ತೋ ಎಂಬ ಭಯ. ಅಫ್ಘಾನ್‌ನಲ್ಲಿ ದಿನಕ್ಕೆ ಒಂದಾದರೂ ಹಿಂಸೆ ನಡೆಸದಿದ್ದರೆ ತಾಲಿಬಾನ್ ಉಗ್ರರಿಗೆ ನಿದ್ದೆ ಬರೋದಿಲ್ಲ. ಈಗಾಗಲೇ ಲಕ್ಷಾಂತರ ಜನ ರಕ್ತ ಪಿಪಾಸುಗಳ ದಾಳಿಗೆ ಬಲಿಯಾಗಿದ್ದಾರೆ. ತಾಲಿಬಾನಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಅಶ್ರಫ್ ಘನಿ ಸರ್ಕಾರ ಪರದಾಡುತ್ತಿದೆ. ಕಂಡ ಕಂಡಲ್ಲಿ ಪಟಾಕಿಗಳಂತೆ ಉಗ್ರರು ಬಾಂಬ್ ಉಡಾಯಿಸುತ್ತಿದ್ದಾರೆ.

ಹೊಟ್ಟೆಗೆ ಅನ್ನವಿಲ್ಲ, ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲ

ಹೊಟ್ಟೆಗೆ ಅನ್ನವಿಲ್ಲ, ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲ

ಅಫ್ಘಾನಿಸ್ತಾನದ ಜನರು ಅದೇನು ಪಾಪ ಮಾಡಿದ್ದಾರೋ ಗೊತ್ತಿಲ್ಲ, ಅಲ್ಲಿ ಬದುಕಬೇಕು ಎಂದರೆ ನರಕದರ್ಶನ ಗ್ಯಾರಂಟಿ. ಹೆಜ್ಜೆ ಹೆಜ್ಜೆಗೂ ಆವರಿಸುವ ಭಯ. ಯಾವ ಸಮಯದಲ್ಲಿ ಏನಾಗುತ್ತೋ ಎಂಬ ಆತಂಕ. ನೆಮ್ಮದಿ, ಶಾಂತಿ ಎಂಬುದೇ ಅಫ್ಘಾನಿಸ್ತಾನದ ಜನರಿಗೆ ಮರೆತು ಹೋದಂತಿದೆ. ಇನ್ನು ಅಲ್ಲಿನ ಆರ್ಥಿಕ ಸ್ಥಿತಿ ಕೂಡ ತೀರಾ ಹದಗೆಟ್ಟು ಹೋಗಿದ್ದು, ಹೊಟ್ಟೆಗೆ ಅನ್ನವಿಲ್ಲದೆ ಕೋಟ್ಯಂತರ ಮಂದಿ ನರಳುತ್ತಿದ್ದಾರೆ. ಮಕ್ಕಳಿಗೆ ವಿದ್ಯಾಭ್ಯಾಸವೂ ಸಿಗದ ಪರಿಸ್ಥಿತಿ ಅಫ್ಘಾನಿಸ್ತಾನದಲ್ಲಿ ನಿರ್ಮಾಣವಾಗಿದೆ. ಹೀಗೆ ಅಫ್ಘಾನಿಸ್ತಾನದ ಪರಿಸ್ಥಿತಿ ಸುಧಾರಣೆ ನೆಪ ಮಾಡಿ ಬಂದು ಸೇರಿಕೊಂಡ ಯಾವುದೇ ದೇಶ ಕೂಡ ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲ ಸಕ್ಸಸ್ ಆಗಿಲ್ಲ. ಅದು ಬಿಡಿ ಪ್ರಾಮಾಣಿಕ ಪ್ರಯತ್ನಗಳನ್ನೂ ನಡೆಸುತ್ತಿಲ್ಲ ಎಂಬ ಆರೋಪವಿದೆ.

ಟ್ರಂಪ್ ಸಂಧಾನವೂ ವಿಫಲವಾಗಿತ್ತು..!

ಟ್ರಂಪ್ ಸಂಧಾನವೂ ವಿಫಲವಾಗಿತ್ತು..!

ತಾಲಿಬಾನಿ ನಾಯಕರ ಜೊತೆ ಹಿಂದೆ ಅಮೆರಿಕ ಅಧ್ಯಕ್ಷ ಟ್ರಂಪ್ ಚರ್ಚೆ ನಡೆಸಲು ಮುಂದಾಗಿದ್ದರು. ಅಲ್ಲದೆ ತಾಲಿಬಾನಿಗಳು ಒಳ್ಳೆಯವರು ಎಂದು ಟ್ರಂಪ್ ಹೇಳಿದ್ದರು. ಆದರೆ ಅಫ್ಘಾನ್‌ ಸರ್ಕಾರದ ಮಧ್ಯಸ್ಥಿಕೆ ಇಲ್ಲದೆ ನೇರವಾಗಿ ಉಗ್ರರ ಜೊತೆ ಮಾತುಕತೆ ನಡೆಸಿದ್ದಕ್ಕೆ ಅಮೆರಿಕದ ವಿರುದ್ಧ ಅಶ್ರಫ್ ಘನಿ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಇದೆಲ್ಲಾ ನಡೆದು ಕೆಲವೇ ದಿನಗಳು ಕಳೆಯುವ ಒಳಗಾಗಿ ಅಮೆರಿಕದ ಸೈನಿಕರನ್ನೇ ತಾಲಿಬಾನ್ ಉಗ್ರರು ಕೊಂದು ಹಾಕಿದ್ದರು. ಈ ದಾಳಿ ನಂತರ ಅಮೆರಿಕ ಹಾಗೂ ತಾಲಿಬಾನ್ ನಡುವಿನ ಮಾತುಕತೆಯೇ ಮುರಿದುಬಿದ್ದಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಸೇನೆ ಹಿಂಪಡೆಯಲು ಅಮೆರಿಕ ಒಪ್ಪಿಗೆ ಸೂಚಿಸಿತ್ತು.

ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿದ್ದರು..!

ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿದ್ದರು..!

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅದೆಷ್ಟು ಕ್ರೂರವಾಗಿ ವರ್ತಿಸುತ್ತಿದೆ ಎಂದರೆ, ಅಲ್ಲಿನ ಪ್ರಧಾನಿ, ಅಧ್ಯಕ್ಷರು, ಉಪಾಧ್ಯಕ್ಷರಿಗೇ ಸರಿಯಾದ ಭದ್ರತೆ ಸಿಗುತ್ತಿಲ್ಲ. ಕೆಲವು ತಿಂಗಳ ಹಿಂದೆ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನ ಪಾರ್ಲಿಮೆಂಟ್ ಮೇಲೆ ದಾಳಿಗೆ ಮುಂದಾಗಿದ್ದರು. ಅದೃಷ್ಟವಶಾತ್ ಸೂಸೈಡ್ ಬಾಂಬರ್ ಅಫ್ಘಾನ್ ಸಂಸತ್ ಭವನದಿಂದ ದೂರದಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ್ದ. ಇದರಿಂದ ಜನಪ್ರತಿನಿಧಿಗಳ ಜೀವ ಉಳಿದಿತ್ತು. ಆದರೆ ಅಂದಿನ ಸ್ಫೋಟದ ತೀವ್ರತೆಗೆ ಅಫ್ಘಾನಿಸ್ತಾನದ ಪಾರ್ಲಿಮೆಂಟ್ ಕಟ್ಟಡವೇ ನಡುಗಿ ಹೋಗಿತ್ತು. ಗೋಡೆಗಳು ಬಿರುಕುಬಿಡುವಷ್ಟು ತೀವ್ರತೆ ಆ ಸ್ಫೋಟಕ್ಕೆ ಇತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+