ಗಾಲ್ವಾನ್ ಗುದ್ದಾಟ: 3ನೇ ಹಂತದ ಕಮಾಂಡರ್ಸ್ ಸಭೆ ಮೇಲೆ ಕಣ್ಣು!

ನವದೆಹಲಿ, ಜೂನ್.29: ಭಾರತ-ಚೀನಾ ನಡುವಿನ ಲಡಾಖ್ ಪೂರ್ವದಲ್ಲಿರುವ ಗಾಲ್ವಾನ್ ಕಣಿವೆ ಸಂಘರ್ಷದ ಬಳಿಕ ಮೂರನೇ ಬಾರಿ ಉಭಯ ರಾಷ್ಟ್ರಗಳ ಲೆಫ್ಟಿನೆಂಟ್ ಜನರಲ್ ಹಂತದ ಸಭೆಯು ಮಂಗಳವಾರ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Recommended Video

      Bengaluru Corona Stats : ಇನ್ನೂ ಬೆಂಗಳೂರಲ್ಲಿ ಬದುಕೋದು ತುಂಬಾ ಕಷ್ಟ | Oneindia Kannada

      ಲಡಾಖ್ ಗಡಿರೇಖೆಗೆ ಹೊಂದಿಕೊಂಡಂತೆ ಇರುವ ಚೂಶೂಲ್ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಭಾರತ ಮತ್ತು ಚೀನಾದ ಹಿರಿಯ ಕಮಾಂಡರ್ ಹಂತದ ಸಭೆಯು ನಡೆಯಲಿದೆ. ಈ ವೇಳೆ ಹಿರಿಯ ಅಧಿಕಾರಿಗಳು ಗಡಿ ಪ್ರದೇಶಗಳಲ್ಲಿ ಸ್ಥಾಪಿತ ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಪ್ರಸ್ತುತ ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಲಿದ್ದಾರೆ.

      ಕಳೆದ ಜೂನ್.22ರಂದು ಮೊದಲ ಹಂತದ ಸಭೆ ನಡೆದಿದ್ದು, ವಿವಾದಿತ ಪ್ರದೇಶದಲ್ಲಿ ಇರಿಸಿದ್ದ ಹೆಚ್ಚುವರಿ ಸೇನಾಪಡೆಯನ್ನು ವಾಪಸ್ ಕರೆಸಿಕೊಳ್ಳುವುದಾಗಿ ಚೀನಾದ ಹಿರಿಯ ಸೇನಾ ಅಧಿಕಾರಿಗಳು ಮಾತು ಕೊಟ್ಟಿದ್ದರು. ಇದರ ಬೆನ್ನಲ್ಲೇ ಮಂಗಳವಾರ ನಡೆಯಲಿರುವ ಕಮಾಂಡರ್ ಹಂತದ ಸಭೆಯು ಸಾಕಷ್ಟು ಕುತೂಹಲ ಕೆರಳಿಸಿದೆ.

      ಚೀನಾ-ಭಾರತ ಕಮಾಂಡರ್ಸ್ ಮೀಟಿಂಗ್

      ಚೀನಾ-ಭಾರತ ಕಮಾಂಡರ್ಸ್ ಮೀಟಿಂಗ್

      ಲಡಾಖ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಚೀನಾದ ದಕ್ಷಿಣ ಕ್ಸಿನ್ ಜಿಯಾಂಗ್ ಜಿಲ್ಲೆಯ ಕಮಾಂಡರ್ ಆಗಿರುವ ಮೇಜರ್ ಜನರಲ್ ಲಿಯು ಲಿನ್ ಹಾಗೂ ಭಾರತದ ಕಾರ್ಪ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ನೇತೃತ್ವದ ನಿಯೋಗದ ನಡುವೆ ಶಾಂತಿ ಮಾತುಕತೆ ನಡೆಯಿತು. ಪೂರ್ವ ಲಡಾಖ್ ನ ಚುಶುಲ್ ಸೆಕ್ಟರ್ ನಲ್ಲಿರುವ ಮಾಲ್ಡೋ ಪ್ರದೇಶದ ಗಡಿ ಸುರಕ್ಷತಾ ಚರ್ಚೆಯ ಕೇಂದ್ರದಲ್ಲಿ ಉಭಯ ರಾಷ್ಟ್ರಗಳ ಮಿಲಿಟರಿ ಕಮಾಂಡರ್ಸ್ ಚರ್ಚೆ ನಡೆಸಲಿದ್ದಾರೆ.

      ಜೂನ್.06ರ ಶಾಂತಿಸಭೆ ಬೆನ್ನಲ್ಲೇ ಸಂಘರ್ಷ

      ಜೂನ್.06ರ ಶಾಂತಿಸಭೆ ಬೆನ್ನಲ್ಲೇ ಸಂಘರ್ಷ

      ಕಳೆದ ಜೂನ್.06ರಂದು ಲಡಾಖ್ ಗಡಿಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ಶಾಂತಿಸಭೆ ನಡೆಸಲಾಗಿತ್ತು. ಈ ಸಭೆಯು ವಿಫಲವಾದ ಬೆನ್ನಲ್ಲೇ ಜೂನ್.15 ಮತ್ತು 16ರ ರಾತ್ರಿ ಲಡಾಖ್ ಪೂರ್ವ ಗಡಿ ಪ್ರದೇಶದ ಗಾಲ್ವಾನ್ ಕಣಿವೆಯ ಬಳಿ ಭಾರತ-ಚೀನಾ ಯೋಧರ ನಡುವೆ ಸಂಘರ್ಷ ನಡೆಯಿತು. ರೌಡಿಗಳಂತೆ ವರ್ತಿಸಿದ ಚೀನಾ ಯೋಧರು ಮಾರಕಾಸ್ತ್ರಗಳಿಂದ ಭಾರತೀಯ ಯೋಧರ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಭಾರತದ 20 ಯೋಧರು ಹುತಾತ್ಮರಾಗಿದ್ದು, 70 ಯೋಧರು ಗಾಯಗೊಂಡಿದ್ದರು.

      ಭಾರತೀಯ ಯೋಧರಿಂದ ಚೀನಾ ವಿರುದ್ಧ ಪ್ರತೀಕಾರ

      ಭಾರತೀಯ ಯೋಧರಿಂದ ಚೀನಾ ವಿರುದ್ಧ ಪ್ರತೀಕಾರ

      ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರ ಸಾವಿಗೆ ಕಾರಣವಾದ ಚೀನಾದ ವಿರುದ್ಧ ಭಾರತೀಯ ಯೋಧರು ಪ್ರತೀಕಾರ ತೀರಿಸಿಕೊಂಡರು. ಭಾರತ ನಡೆಸಿದ ಪ್ರತಿದಾಳಿಯಲ್ಲಿ ಚೀನಾದ 40ಕ್ಕೂ ಹೆಚ್ಚು ಯೋಧರು ಹತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಚೀನಾ ಮಾತ್ರ ಸೈನಿಕರ ಸಾವು-ನೋವಿನ ಬಗ್ಗೆ ಯಾವುದೇ ಅಂಕಿ-ಅಂಶಗಳನ್ನು ನೀಡಿಲ್ಲ, ಜೊತೆಗೆ ಯಾವುದೇ ಮಾಹಿತಿಯನ್ನೂ ನೀಡಿರಲಿಲ್ಲ.

      ಲಡಾಖ್ ಗಡಿಯಲ್ಲಿ ವಿವಾದ ಹುಟ್ಟಿಕೊಳ್ಳಲು ಕಾರಣ

      ಲಡಾಖ್ ಗಡಿಯಲ್ಲಿ ವಿವಾದ ಹುಟ್ಟಿಕೊಳ್ಳಲು ಕಾರಣ

      ಭಾರತ ಮತ್ತು ಚೀನಾ ಗಡಿಯ ಪಂಗೊಂಗ್ ಸೋ, ಗಲ್ವಾನ್ ವ್ಯಾಲಿ ಪ್ರದೇಶದಲ್ಲಿ 2,500 ಯೋಧರು ಶಸ್ತ್ರಸಜ್ಜಿತರಾಗಿ ನಿಂತಿದ್ದಾರೆ. ಪಂಗೊಂಗ್ ಸೋ ಸುತ್ತಮುತ್ತಲು 180 ಕಿ.ಮೀ ವ್ಯಾಪ್ತಿಯಲ್ಲಿ ರಕ್ಷಣಾ ಮೂಲಸೌಕರ್ಯಗಳ ಕಾಮಗಾರಿ ಚಟುವಟಿಕೆ ನಡೆಸುತ್ತಿರುವುದು ಉಪಗ್ರಹ ಸೆರೆ ಹಿಡಿದ ಫೋಟೋಗಳಲ್ಲಿ ಸಾಬೀತಾಗಿದೆ. ಇದಕ್ಕೂ ಮೊದಲು ದರ್ಬಕ್-ಶಯೊಕ್ ನಿಂದ ದೌಲತ್ ಬೆಗ್ ಒಲ್ಡಿಯೆಗೆ ಗಾಲ್ವಾನ್ ವ್ಯಾಲಿಯಲ್ಲಿ ರಸ್ತೆ ನಿರ್ಮಿಸುವುದಕ್ಕೆ ಭಾರತವು ಮುಂದಾಗಿತ್ತು. ಪಂಗೊಂಗ್ ಸೋ ತುದಿಯಲ್ಲಿರುವ ಪ್ರದೇಶದಲ್ಲಿ ರಸ್ತೆ ಕಾಮಗಾರಿಗೆ ಚೀನಾ ವಿರೋಧಿಸಿತ್ತು. ಪಂಗೊಂಗ್ ಸೋ ಪ್ರದೇಶ ತೀರಾ ಮಹತ್ವವಾಗಿದ್ದು ಎಂದು ಭಾರತ ಕೂಡಾ ಪರಿಗಣಿಸಿತ್ತು. ಆದರೆ ಚೀನಾ ವಿರೋಧದ ಹಿನ್ನೆಲೆ ಗಡಿಯಲ್ಲಿ ಯಾವುದೇ ರೀತಿ ಸೇನೆ ನಿಯೋಜಿಸದಿರಲು ಭಾರತವು ತೀರ್ಮಾನಿಸಿತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+