ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುರೋಪ್‌ನಲ್ಲಿ ಅಸ್ಟ್ರಾಜೆನೆಕಾ ಕೊರೊನಾ ಲಸಿಕೆಯಿಂದ ಅಡ್ಡಪರಿಣಾಮ

|
Google Oneindia Kannada News

ಪ್ಯಾರಿಸ್,ಫೆಬ್ರವರಿ 19: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪಡೆದ ಯುರೋಪಿನ ಆರೋಗ್ಯ ಕಾರ್ಯಕರ್ತರು ಅಡ್ಡಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ತಲೆನೋವು, ಸುಸ್ತು,ಜ್ವರದಂತಹ ಅನೇಕ ಅಡ್ಡಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ. ಫೈಜರ್ ಹಾಗೂ ಮಾಡೆರ್ನಾ ಸಿದ್ಧಪಡಿಸಿರುವ ಈ ಲಸಿಕೆಯನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಯುರೋಪ್ ಸರ್ಕಾರ ಅನುಮತಿ ನೀಡಿತ್ತು. ಅದರಿಂದಲೂ ಸಾಕಷ್ಟು ಅಡ್ಡಪರಿಣಾಮಗಳು ಕಂಡುಬಂದಿತ್ತು.

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ತುರ್ತು ಬಳಕೆಗೆ WHO ಅನುಮತಿಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ತುರ್ತು ಬಳಕೆಗೆ WHO ಅನುಮತಿ

ಸ್ವೀಡನ್‌ನಲ್ಲಿ ಕೊರೊನಾ ಲಸಿಕೆ ವಿತರಣೆಯನ್ನು ತಡೆಹಿಡಿಯಲಾಗಿದೆ, ಜರ್ಮನಿಯಲ್ಲಿ ಆರೋಗ್ಯ ಕಾರ್ಯಕರ್ತರು ಕೂಡ ಲಸಿಕೆಯನ್ನು ಪಡೆಯಲು ಹಿಂಜರಿಯುತ್ತಿದ್ದಾರೆ. ಲಸಿಕೆ ಪಡೆಯುವ ಜನರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತದೆ. ಲಸಿಕೆಗಳ ಅಡ್ಡಪರಿಣಾಮಗಳ ಕುರಿತು ಗಂಭಿರ ದೂರುಗಳು ಇದುವರೆಗೂ ಬಂದಿಲ್ಲ.

AstraZeneca Vaccine Faces Resistance In Europe After Health Workers Suffer Side-Effects

ಫ್ರಾನ್ಸ್‌ನಲ್ಲಿ ಫೆಬ್ರವರಿ 6 ರಂದು ಅಸ್ಟ್ರಾಜೆನೆಕಾ ಲಸಿಕೆ ಬಳಕೆ ಆರಂಭಿಸಲಾಯಿತು.ಫ್ರಾನ್ಸ್ನ ಜನರು ಫೈಜರ್ ಲಸಿಕೆಗಿಂತ ಅಸ್ಟ್ರಾಜೆನೆಕಾ ಲಸಿಕೆ ಪಡೆದ ಬಳಿಕ ಸಾಕಷ್ಟು ಅಡ್ಡಪರಿಣಾಮಗಳನ್ನು ಅನಭವಿಸಿದ್ದಾರೆ.

ಕೊರೊನಾ ಲಸಿಕೆ ಪಡೆದು 12 ತಾಸಿನೊಳಗಾಗಿ ಜ್ವರ,ತಲೆ ನೋವು,ಮೈಕೈ ನೋಡವು ಸೇರಿದಂತೆ ಹಲವು ತೊಂದರೆಗಳನ್ನು ಅನುಭವಿಸಿದ್ದಾರೆ.ಅಸ್ಟ್ರಾಜೆನೆಕಾ ಕೊರೊನಾ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಗೆ ಸೂಚಿಸಿದೆ.

ಖ್ಯಾತ ಅಂತಾರಾಷ್ಟ್ರೀಯ ಔಷಧ ತಯಾರಿಕ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಜಂಟಿಯಾಗಿ ಈ ಲಸಿಕೆಯನ್ನು ತಯಾರಿಸಿದ್ದು, ಭಾರತದಲ್ಲಿ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ, ಕೊರಿಯಾದಲ್ಲಿ ಎಸ್‌ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ.

ಈ ಕುರಿತು ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ವರದಿ ಮಾಡಿದ್ದು, ಕೋವಿಡ್-19 ನಿಯಂತ್ರಣದ ನಿಟ್ಟಿನಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯನ್ನು ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ ಎನ್ನಲಾಗಿದೆ.

English summary
Health authorities in some European countries are facing resistance to AstraZeneca's COVID-19 vaccine after side-effects led hospital staff and other front-line workers to call in sick, putting extra strain on already-stretched services.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X