ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನಿಸ್ತಾನದ ಮಸೀದಿಯಲ್ಲಿ ಸ್ಫೋಟ: 3 ಸಾವು, 15 ಮಂದಿಗೆ ಗಾಯ

|
Google Oneindia Kannada News

ಕಾಬೂಲ್, ನವೆಂಬರ್ 12: ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ.

ತಾಲಿಬಾನ್ ಆಡಳಿತವಿರುವ ನಂಗರ್ ಹರ್ ಪ್ರಾಂತ್ಯದಲ್ಲಿ ಘಟನೆ ನಡೆದಿದೆ. ಶುಕ್ರವಾರದ ಪ್ರಾರ್ಥನೆ ಸಂದರ್ಭದಲ್ಲಿ ಸ್ಪಿನ್ ಘರ್ ಜಿಲ್ಲೆಯ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ.

 ತಾಲಿಬಾನ್ ಆಡಳಿತಕ್ಕೆ ಬೇಸತ್ತು, ಇರಾನಿನತ್ತ ವಲಸೆ ಹೊರಟ ಅಫ್ಘಾನ್ ನಿರಾಶ್ರಿತರು ತಾಲಿಬಾನ್ ಆಡಳಿತಕ್ಕೆ ಬೇಸತ್ತು, ಇರಾನಿನತ್ತ ವಲಸೆ ಹೊರಟ ಅಫ್ಘಾನ್ ನಿರಾಶ್ರಿತರು

ಕೆಲವರು ಸಾವೀಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಆಗಸ್ಟ್‌ನಲ್ಲಿ ತಾಲಿಬಾನಿಗಳು ಆಕ್ರಮಿಸಿಕೊಂಡ ಬಳಿಕ ಇಸ್ಲಾಮಿಕ್ ಸ್ಟೇಟ್ ಉಗ್ರರ ಚಟುವಟಿಕೆಯ ತಾಣವಾಗಿರುವ ಸ್ಪಿನ್ ಘರ್ ಜಿಲ್ಲೆಯಲ್ಲಿ ಈ ಸ್ಫೋಟ ಸಂಭವಿಸಿದೆ.

At Least 3 Killed In Blast At mosque In Afghanistans Nangarhar Province

ನವೆಂಬರ್ ತಿಂಗಳ ಆರಂಭದಲ್ಲಿ ಐಎಸ್‌ಐಎಸ್ ಉಗ್ರರು ಕಾಬೂಲ್ ಮಿಲಿಟರಿ ಆಸ್ಪತ್ರೆಯಲ್ಲಿ ನಡೆಸಿದ ಆತ್ಮಹತ್ಯಾ ದಾಳಿಯಲ್ಲಿ 19 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿದ್ದರು.

ಹಜಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಎರಡು ಮಸೀದಿಗಳಲ್ಲಿ ಈ ವರ್ಷ ಸಂಭವಿಸಿದ ಸ್ಫೋಟದಲ್ಲಿ 120 ಮಂದಿ ಸಾವಿಗೀಡಾಗಿದ್ದಾರೆ. 2015ರಲ್ಲಿ ಅಫ್ಘಾನ್‌ನ ನಂಗರ್‌ಹರ್‌ ಪ್ರದೇಶದಲ್ಲಿ ಅಸ್ತಿತ್ವ ಕಂಡುಕೊಂಡ ಇಸ್ಲಾಮಿಕ್ ಉಗ್ರಗಾಮಿ ಸಂಘಟನೆಯು, ಇತ್ತೀಚೆಗೆ ತಾಲಿಬಾನ್ ದೇಶವನ್ನು ವಶಕ್ಕೆ ಪಡೆದ ಬಳಿಕ ನಡೆದ ಸರಣಿ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು.

ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಅಕ್ಟೋಬರ್‌ನಲ್ಲಿ ಪ್ರಾರ್ಥನೆ ನಡೆಸುತ್ತಿದ್ದಾಗ ಸ್ಫೋಟ ಸಂಭವಿಸಿ 16 ಜನ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿದ್ದರು.

ವಾರದ ಪ್ರಾರ್ಥನೆಗಾಗಿ ಮಸೀದಿಗೆ ಆಗಮಿಸಿದವರನ್ನು ಗುರಿಯಾಗಿಸಿ ಮಸೀದಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ ಎಂದು ತಾಲಿಬಾನ್ ಸ್ಪಷ್ಟಪಡಿಸಿದೆ. ಮಸೀದಿಯಲ್ಲಿ ನೂರಕ್ಕೂ ಹೆಚ್ಚು ಜನ ಪ್ರಾರ್ಥನೆ ಸಲ್ಲಿಸುತ್ತಿದ್ದರು.

ಉಳಿದಂತೆ ಕೆಲ ಜನ ಪ್ರಾರ್ಥನೆಗೆ ಬರಲು ಸಿದ್ಧರಾಗುತ್ತಿದ್ದರು ಈ ವೇಳೆ ಬಾಂಬ್ ಸ್ಫೋಟಗೊಂಡಿದೆ. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು, ಸ್ಥಳದಲ್ಲಿ 15ಕ್ಕೂ ಹೆಚ್ಚು ಅಂಬುಲೆನ್ಸ್ ಗಳನ್ನು ನಿಯೋಜನೆ ಮಾಡಲಾಗಿತ್ತು.. ಮಸೀದಿಯಲ್ಲಿ ರಕ್ತದ ಮಡುವಿನಲ್ಲಿ ನೂರಾರು ಹೆಣಗಳ ರಾಶಿ ಕಂಡುಬರುತ್ತಿತ್ತು.

ದಾಳಿಯ ಬಗ್ಗೆ ಮಾತನಾಡಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್, ನಮ್ಮ ಶಿಯಾ ಪಂಗಡದ ದೇಶವಾಸಿಗಳ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಹಲವಾರು ಮಂದಿ ಸಾವನ್ನಪ್ಪಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದಿದ್ದರು.

ದಾಳಿಯ ಹೊಣೆಗಾರಿಕೆಯನ್ನು ಯಾವುದೇ ಸಂಘಟನೆ ಒಪ್ಪದೇ ಇದ್ದರೂ ತಾಲಿಬಾನ್ ವಿರೋಧಿ ಬಣವಾಗಿ ಗುರುತಿಸಿಕೊಂಡಿರುವ ಇಸ್ಲಾಮಿಕ್ ಸ್ಟೇಟ್ ದಾಳಿ ಮಾಡಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿತ್ತು.

English summary
At least three people were killed and 15 wounded Friday by a blast at a mosque in Afghanistan's restive Nangarhar province, a hospital official told AFP.12
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X