ತೈವಾನ್‌ನಲ್ಲಿ ಭೀಕರ ರೈಲು ಅಪಘಾತ: ಕನಿಷ್ಠ 36 ಮಂದಿ ದುರ್ಮರಣ
ತೈಪೇ, ಏಪ್ರಿಲ್ 2: ತೈವಾನ್‌ನಲ್ಲಿ ಸಂಭವಿಸಿದ ಭೀಕರ ರೈಲ್ವೆ ಅಪಘಾತದಲ್ಲಿ ಕನಿಷ್ಠ 36 ಮಂದಿ ಮೃತಪಟ್ಟಿರುವ ಕುರಿತು ವರದಿಯಾಗಿದೆ.
ಇದೇ ರೈಲು ಮಾರ್ಗದಲ್ಲೇ 2018ರಲ್ಲೂ ಹಳಿ ತಪ್ಪಿದ ದುರಂತ ಸಂಭವಿಸಿತ್ತು. ಈ ವೇಳೆ 18 ಮಂದಿ ಸಾವನ್ನಪ್ಪಿದ್ದರು. ಅಪಘಾತದ ತೀವ್ರತೆ ದೊಡ್ಡ ಪ್ರಮಾಣದ್ದು ಎಂದು ಹೇಳಲಾಗುತ್ತಿದ್ದು, ಖುದ್ದಾಗಿ ತೈವಾನ್ ಅಧ್ಯಕ್ಷರಾದ ತ್ಸೈ ಇಂಗ್-ವೆನ್ ಅವರು ಹುವಾಲಿಯನ್ ಆಸ್ಪತ್ರೆಗಳಿಗೆ ಬೃಹತ್ ಪ್ರಮಾಣದ ಚಿಕಿತ್ಸೆಗೆ ಸಿದ್ಧರಾಗಿ ಎಂದು ಸೂಚನೆ ನೀಡಿದ್ದಾರೆ.
72ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ಅಲ್ಲದೆ ದುರಂತದಲ್ಲಿ ಸಿಲುಕಿರುವವರ ರಕ್ಷಣೆಗೆ ಪ್ರಧಾನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದು ದುರಂತದ ಕುರಿತು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ತೈವಾನ್ ನ ಕರಾವಳಿ ನಗರ ಹುವಾಲಿಯನ್ ನ ಪೂರ್ವ ರೈಲ್ವೆ ಮಾರ್ಗದ ಸುರಂಗದಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ತೈವಾನ್ ಸರ್ಕಾರ ಮಾಹಿತಿ ನೀಡಿದೆ.
ಸ್ಥಳೀಯ ಕಾಲಮಾನದ ಪ್ರಕಾರ ಬೆಳಗ್ಗೆ 9.30ಕ್ಕೆ ಈ ದುರಂತ ಸಂಭವಿಸಿದ್ದು, ಸ್ಥಳದಲ್ಲೇ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ರೈಲಿನ ಸುಮಾರು 5ಕ್ಕೂ ಹೆಚ್ಚು ಬೋಗಿಗಳು ಜಖಂ ಆಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.












Click it and Unblock the Notifications