ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ, ಕನಿಷ್ಠ 40 ಮಂದಿ ಸಾವು
ಕಾಬೂಲ್, ಡಿಸೆಂಬರ್ 28: ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 40 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಗುರುವಾರ ಸಂಭವಿಸಿದೆ.
ಕಾಬುಲ್ ನ ಟೆಬಿಯಾನ್ ಸಾಮಾಜಿಕ-ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರದಲ್ಲಿ ಆತ್ಮಹತ್ಯಾ ದಾಳಿಕೋರನೋರ್ವ ತನ್ನನು ತಾನು ಸ್ಫೋಟಿಸಿಕೊಳ್ಳುವ ಮೂಲಕ 40 ಮಂದಿಯ ಸಾವಿಗೆ ಕಾರಣನಾಗಿದ್ದಾನೆ.

ಇನ್ನು ದಾಳಿ ಸಂಬಂಧ ಯಾವುದೇ ಉಗ್ರ ಸಂಘಟನೆ ಹೊಣೆ ಹೊತ್ತಿಲ್ಲ. ಸ್ಥಳೀಯ ತಾಲಿಬಾನ್ ಸಂಘಟನೆ ಕೂಡ ದಾಳಿಯನ್ನು ತಾನು ನಡೆಸಿಲ್ಲ ಎಂದು ಸ್ಪಷ್ಟಪಡಿಸಿದೆ.












Click it and Unblock the Notifications