ಗಡಿ ಸಾರ್ವಭೌಮತ್ವ ಉಳಿಸಿಕೊಳ್ಳಲು ಭಾರತ ಎಂದಿಗೂ ಬದ್ಧ

ನವದೆಹಲಿ, ಅಕ್ಟೋಬರ್ 06: ಇಂಡೋ-ಪೆಸಿಫಿಕ್ ನಾಲ್ಕು ರಾಷ್ಟ್ರಗಳ ಸಭೆಯಲ್ಲಿ ಗಡಿ ವಿಚಾರ ಪ್ರಸ್ತಾಪಿಸಿದ್ದು, ಗಡಿಯಲ್ಲಿ ಸಾರ್ವಭೌಮತ್ವವನ್ನು ರಕ್ಷಿಸಲು ಎಂದಿಗೂ ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜಯಶಂಕರ್ ತಿಳಿಸಿದ್ದಾರೆ.

ಇಂಡೋ-ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ ಚೀನಾದ ಆರ್ಭಟಕ್ಕೆ ಅಂಕುಶ ಹಾಕಿ ಅಲ್ಲಿ ಮುಕ್ತ ವಾತಾವರಣ ನಿರ್ಮಿಸುವ ಸಲುವಾಗಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳು ಒಂದಾಗಿ ಕಾರ್ಯಯೋಜನೆ ರೂಪಿಸುತ್ತಿವೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ, ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರೈಸ್ ಪಾಯ್ನೆ ಹಾಗೂ ಜಪಾನ್ ನೂತನ ಪ್ರಧಾನಿ ಯೋಶಿಹಿದೆ ಸುಗಾ ಅವರು ಇಂದು ಟೋಕಿಯೋದಲ್ಲಿ ಭೇಟಿಯಾಗಿ ಈ ವಿಚಾರದ ಬಗ್ಗೆ ಮಹತ್ವದ ಚರ್ಚೆ ಮಾಡಿದರು ಎಂದು ಜಪಾನ್ ತಿಳಿಸಿದೆ.

At The Pacific Nations Meeting, India Talks About sovereignty

ಇಲ್ಲಿ ಮುಕ್ತವಾಗಿರುವ ಹಾಗೂ ನಿಯಮಾಧಾರಿತ ಅಂತಾರಾಷ್ಟ್ರೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಈ ನಾಲ್ಕು ದೇಶಗಳು ಪರಸ್ಪರ ಸಮ್ಮತಿಸಿವೆ.

ಕಾನೂನಿಗೆ ಬದ್ಧವಾಗಿರುವ, ಪಾರದರ್ಶಕವಾಗಿರುವ, ಅಂತಾರಾಷ್ಟ್ರೀಯ ಸಾಗರದಲ್ಲಿ ಮುಕ್ತವಾಗಿ ಸಂಚರಿಸುವ, ಶಾಂತಿಯುತವಾಗಿ ವಿವಾದ ಬಗೆಹರಿಸುವಂತಹ ನಿಯಮ ಆಧಾರಿತ ಅಂತಾರಾಷ್ಟ್ರೀಯ ವ್ಯವಸ್ಥೆ ರೂಪಿಸುವುದಕ್ಕೆ ಭಾರತ ಸದಾ ಬದ್ಧವಾಗಿರಲಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾವನ್ನು ನಿಗ್ರಹಿಸಲು ಭಾರತ ಮತ್ತು ಅಮೆರಿಕ ಜಂಟಿಯಾಗಿ ಪ್ರಯತ್ನ ಮುಂದುವರೆಸಬೇಕು ಒಟ್ಟಿಗೆ ಕೆಲಸ ಮಾಡಬೇಕಾದ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು.

Recommended Video

      Political Popcorn with Lavanya : Satish Jarkiholi, ರಾಗಿ ಮುದ್ದೆ ಗು ಸೈ ಜೋಳದ ರೊಟ್ಟಿಗೆ ಜೈ | part 02

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+