ಕಾರ್ ಬಾಂಬ್ ಸ್ಫೋಟ: ಸಿರಿಯಾದಲ್ಲಿ 75 ಕ್ಕೂ ಹೆಚ್ಚು ಜನರ ಮಾರಣಹೋಮ
ಬಯ್ರತ್(ಸಿರಿಯಾ), ನವೆಂಬರ್ 06: ಪೂರ್ವ ಸಿರಿಯಾದ ಬಯ್ರತ್ ಎಂಬಲ್ಲಿ ನವೆಂಬರ್ 5 ರಂದು ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ 75 ಕ್ಕೂ ಹೆಚ್ಚು ನಾಗರಿಕರು ಹತ್ಯೆಗೀಡಾಗಿದ್ದಾರೆ.
ನಿರಾಶ್ರಿತರ ಕೇಂದ್ರದಲ್ಲಿ ಈ ಭೀಕರ ಘಟನೆ ನಡೆದಿದ್ದು, ಸ್ಫೋಟಕ್ಕೆ ಕಾರಣ ಉಗ್ರ ಸಂಘಟನೆಯಾದ ಐಸಿಸ್ ಎಂದು ಕೆಲವು ಮಾಧ್ಯಮಗಳು ವರದಿ ಮಾಡುತ್ತಿವೆಯಾದರೂ, ಯಾವೊಂದು ಉಗ್ರ ಸಂಘಟನೆಯೂ ಘಟನೆಯ ಹೊಣೆಯನ್ನು ಇನ್ನೂ ಹೊತ್ತುಕೊಂಡಿಲ್ಲ. ಕೆಲವು ಮೂಲಗಳ ಪ್ರಕಾರ ಈ ಘಟನೆಯಲ್ಲಿ ನೂರಕ್ಕೂ ಹೆಚ್ಚು ಜನ ಸತ್ತು, ಸಾವಿರಾರು ಜನ ಗಾಯಗೊಂಡಿದ್ದಾರೆ. ಸಾವಿಗೀಡಾದವರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಘಟನೆಯಲ್ಲಿ ಸಾವಿಗೀಡಾದವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿದ್ದಾರೆ. ಸ್ಫೋಟಕ್ಕೆ ಕಾರಣ ಏನು, ಯಾರು ಎಂಬ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.












Click it and Unblock the Notifications