• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತಾಲಿಬಾನ್ ಉಗ್ರರಿಂದ ಅಫ್ಘಾನಿಸ್ತಾನದಲ್ಲಿ ದಾಳಿ: ಮೂವರು ಸಾವು

|

ಕಾಬುಲ್, ಅಕ್ಟೋಬರ್ 27: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದಲ್ಲಿ ದಾಳಿ ನಡೆಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ತಾಲಿಬಾನ್ ಉಗ್ರರು ಮಂಗಳವಾರ ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯದಲ್ಲಿರುವ ಪೊಲೀಸ್ ನೆಲೆಯ ಮೇಲೆ ದಾಳಿ ನಡೆಸಿದ ಪರಿಣಾಮ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ.

ವಿಷೇಷ ಪೊಲೀಸ್ ಪಡೆಯ ನೆಲೆಯ ಬಳಿ ಮಂಗಳವಾರ ಬೆಳಗಿನ ಜಾವ ಮದ್ದುಗುಂಡುಗಳನ್ನೊಳಗೊಂಡಿದ್ದ ವಾಹನವೊಂದು ಸ್ಫೋಟಗೊಂಡಿದೆ. ಪೊಲೀಸರು ನಾಲ್ವರು ದಾಳಿಕೋರರನ್ನು ಹತ್ಯೆ ಮಾಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ತಾರೀಕ್ ಆರನ್ ತಿಳಿಸಿದ್ದಾರೆ.

ಪಾಕಿಸ್ತಾನ: ಶಾಲೆಯಲ್ಲಿ ಬಾಂಬ್ ಸ್ಫೋಟ, 7 ಮಂದಿ ಸಾವು

ಇದುವರೆಗೂ ಮೂರು ಮೃತದೇಹಗಳು ಪತ್ತೆಯಾಗಿವೆ. ಮಿಲಿಟರಿ ಹಾಗೂ ನಾಗರಿಕರರು ಸೇರಿ ಅಂದಾಜು 30 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಪಾಕಿಸ್ತಾನದಲ್ಲಿ ಮಸೀದಿ ಸಮೀಪವಿರುವ ಶಾಲೆಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 7 ಮಂದಿ ಮಕ್ಕಳು ಮೃತಪಟ್ಟಿದ್ದಾರೆ.

 Attack Near Base In Eastern Afghanistan Kills 3

ವಾಯುವ್ಯ ಪಾಕಿಸ್ತಾನದ ನಗರ ಪೇಶಾವರದ ಹೊರವಲಯದಲ್ಲಿ ಮಂಗಳವಾರ ಬೆಳಗಿನ ಜಾವ ಬಾಂಬ್ ಸ್ಫೋಟ ಸಂಭವಿಸಿದೆ.ಏಳು ಮಂದಿ ಮಕ್ಕಳು ಮೃತಪಟ್ಟಿದ್ದು, 70 ಮಂದಿ ಗಾಯಗೊಂಡಿದ್ದಾರೆ.

ಜಮಿಯಾ ಝುಬೈರಿಯಾ ಮದ್ರಸಾದಲ್ಲಿ ಇಸ್ಲಾಂ ಬಗ್ಗೆ ಪಾದ್ರಿಯೊಬ್ಬರು ಮಕ್ಕಳಿಗೆ ಉಪನ್ಯಾಸ ನೀಡುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ವಖರ್ ಅಜಿಮ್ ಹೇಳಿದ್ದು, ಯಾರೋ ಮದ್ರಸಾದಲ್ಲಿ ಬ್ಯಾಗ್ ನ್ನು ಬಿಟ್ಟು ಹೋದ ಸ್ವಲ್ಪ ಹೊತ್ತಿನಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ ಎಂದರು.

ಖ್ವೆಟ್ಟಾದ ನೈರುತ್ಯ ಸಿಟಿಯಲ್ಲಿ ಬಾಂಬ್ ದಾಳಿ ನಡೆದು ಮೂವರು ಮೃತಪಟ್ಟ ನಂತರ ಈ ದಾಳಿ ನಡೆದಿದೆ.ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆಸ್ಪತ್ರೆಗಳ ಅಧಿಕಾರಿಗಳು ತಿಳಿಸಿದ್ದಾರೆ.

English summary
At least three people were killed Tuesday when Taliban militants launched a coordinated attack against a police base in eastern Khost province, Afghan officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X