ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳೆ ಸಾವಿನ ಬಳಿಕ ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಬಳಕೆ ನಿಲ್ಲಿಸಿದ ಆಸ್ಟ್ರಿಯಾ

|
Google Oneindia Kannada News

ಕೊರೊನಾ ಲಸಿಕೆ ಪಡೆದ ಬಳಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಕಾರಣ ಆಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ಆಸ್ಟ್ರಿಯಾ ನಿಲ್ಲಿಸಿದೆ. 49 ವರ್ಷದ ಮಹಿಳೆ ಮೃತಪಟ್ಟಿದ್ದು, ಇನ್ನೊಬ್ಬರ ಸ್ಥಿತಿ ಕೂಡಾ ಚಿಂತಾಜನಕವಾಗಿದೆ ಹೀಗಾಗಿ ಅಸ್ಟ್ರಾಜೆನೆಕಾ ಲಸಿಕೆಯನ್ನು ಆಸ್ಟ್ರಿಯನ್ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ.

ತೀವ್ರವಾದ ರಕ್ತ ಹೆಪ್ಪುಗಟ್ಟುವಿಕೆ ಅಸ್ವಸ್ಥತೆಯ ಪರಿಣಾಮವಾಗಿ 49 ವರ್ಷದ ಮಹಿಳೆ ಸಾವನ್ನಪ್ಪಿದ್ದರೆ, 35 ವರ್ಷದ ಮಹಿಳೆ ಶ್ವಾಸಕೋಶದ ತೊಂದರೆ ಅನುಭವಿಸುತ್ತಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ.

ಭಾರತದಲ್ಲಿ 50 ದಿನಗಳಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡವರೆಷ್ಟು?ಭಾರತದಲ್ಲಿ 50 ದಿನಗಳಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡವರೆಷ್ಟು?

ಕೊರೊನಾ ಲಸಿಕೆಯಿಂದಲೇ ಇದು ಸಂಭವಿಸಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಲಸಿಕೆ ಕುರಿತು ತಿಳಿಸಿರುವ ಅಡ್ಡಪರಿಣಾಮಗಳಲ್ಲಿ ರಕ್ತಹೆಪ್ಪುಗಟ್ಟುವಿಕೆ ಇಲ್ಲ. ಆದರೆ ಸಂಭವನೀಯ ಯಾವುದೇ ಅಡ್ಡಪರಿಣಾಮಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ, ಈ ಕುರಿತು ತನಿಖೆ ನಡೆಯುತ್ತಿದೆ.

Austria Suspends AstraZeneca COVID-19 Vaccine Batch After Womans Death

ಮುನ್ನೆಚ್ಚರಿಕೆ ಕ್ರಮವಾಗಿ ಈಗ ಉಳಿದಿರುವ ಕೊರೊನಾ ಲಸಿಕೆಗಳನ್ನು ನೀಡಲಾಗುವುದಿಲ್ಲ. ಈ ಕುರಿತು ಅಸ್ಟ್ರಾಜೆನೆಕಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಆದರೆ ತನಿಖೆಗೆ ನಾವು ಸಹಕಾರ ನೀಡುತ್ತೇವೆ ಎಂದಷ್ಟೇ ಹೇಳಿದೆ.

ಎಲ್ಲಾ ಪ್ರಯೋಗಗಳು ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಸುರಕ್ಷಿತ ಹಾಗೂ ಪರಿಣಾಮಕಾರಿ ಎಂದೇ ಹೇಳಿವೆ. ಜನವರಿ 30 ರಂದು ಯುರೋಪ್‌ನಲ್ಲಿ ಈ ಲಸಿಕೆ ಬಳಕೆಗೆ ಅನುಮೋದನೆ ನೀಡಲಾಗಿದೆ. ಇದು ಪರಿಣಾಮಕಾರಿ ಹಾಗೂ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ. ಆದರೆ ಎಲ್ಲಿಯೂ ರಕ್ತ ಹೆಪ್ಪುಗಟ್ಟುವಿಕೆ ರೀತಿಯ ಅಡ್ಡಪರಿಣಾಮಗಳು ವರದಿಯಾಗಿಲ್ಲ.

English summary
Austrian authorities have suspended inoculations with a batch of AstraZeneca's COVID-19 vaccine as a precaution while investigating the death of one person and the illness of another after the shots, a health agency said on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X