ಬಾಂಗ್ಲಾದೇಶದಲ್ಲಿ ಏಪ್ರಿಲ್ 5 ರಿಂದ ಒಂದು ವಾರ ಲಾಕ್‌ಡೌನ್
ಢಾಕಾ, ಏಪ್ರಿಲ್ 3: ಬಾಂಗ್ಲಾದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 5 ರಿಂದ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿ ಮಾಡಲು ಸರ್ಕಾರ ಮುಂದಾಗಿದೆ.
ಇನ್ನು ಬಾಂಗ್ಲಾದೇಶದಲ್ಲಿ ಕಳೆದ 7 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶುಕ್ರವಾರ ಬಾಂಗ್ಲಾದೇಶದಲ್ಲಿ 6,830 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ಆ ಮೂಲಕ ಒಟ್ಟಾರೆ ಸೋಂಕಿತರು ಸಂಖ್ಯೆ 6,24,594ಕ್ಕೆ ಏರಿಕೆಯಾಗಿದೆ. ಇದು ಈ ವರೆಗಿನ ಗರಿಷ್ಠ ಸಂಖ್ಯೆಯಾಗಿದ್ದು, ಹೊಸ ಸೋಂಕಿತರ ಪ್ರಮಾಣದಲ್ಲಿ ಏಕಾಏಕಿ ಶೇ.23.28ರಷ್ಟು ಏರಿಕೆಯಾಗಿದೆ.

ಈ ಬಗ್ಗೆ ಬಾಂಗ್ಲಾದೇಶ ಮಾಧ್ಯಮಗಳು ವರದಿ ಮಾಡಿವೆ, ಇದೇ ಸೋಮವಾರ ಅಂದರೆ ಏಪ್ರಿಲ್ 5 ರಿಂದಲೇ 7 ದಿನಗಳ ಲಾಕ್ ಡೌನ್ ಹೇರಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕೇವಲ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಹಾಗೆಯೇ ಶುಕ್ರವಾರ ಒಂದೇ ದಿನ 50 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಬಾಂಗ್ಲಾದೇಶದಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 9,155ಕ್ಕೆ ಏರಿಕೆಯಾಗಿದೆ ಎಂದು ಬಾಂಗ್ಲಾದೇಶ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಲಾಕ್ ಡೌನ್ ಬಗ್ಗೆ ಬಾಂಗ್ಲಾದೇಶ ಸಾರಿಗೆ ಸಚಿವ ಒಬೇದುಲ್ ಖಾದರ್ ಅವರು ಘೋಷಣೆ ಮಾಡಿದ್ದಾರೆ ಎಂದು ಬಾಂಗ್ಲಾದೇಶ ಮಾಧ್ಯಮಗಳು ವರದಿ ಮಾಡಿವೆ.












Click it and Unblock the Notifications