ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಂಗ್ಲಾದೇಶದಲ್ಲಿ ಏಪ್ರಿಲ್ 5 ರಿಂದ ಒಂದು ವಾರ ಲಾಕ್‌ಡೌನ್

|
Google Oneindia Kannada News

ಢಾಕಾ, ಏಪ್ರಿಲ್ 3: ಬಾಂಗ್ಲಾದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 5 ರಿಂದ ಒಂದು ವಾರಗಳ ಕಾಲ ಲಾಕ್‌ಡೌನ್ ಜಾರಿ ಮಾಡಲು ಸರ್ಕಾರ ಮುಂದಾಗಿದೆ.

ಇನ್ನು ಬಾಂಗ್ಲಾದೇಶದಲ್ಲಿ ಕಳೆದ 7 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶುಕ್ರವಾರ ಬಾಂಗ್ಲಾದೇಶದಲ್ಲಿ 6,830 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಆರು ತಿಂಗಳಲ್ಲಿಯೇ ಗರಿಷ್ಠ ದೈನಂದಿನ ಕೋವಿಡ್ ಪ್ರಕರಣ ದಾಖಲು ದೇಶದಲ್ಲಿ ಆರು ತಿಂಗಳಲ್ಲಿಯೇ ಗರಿಷ್ಠ ದೈನಂದಿನ ಕೋವಿಡ್ ಪ್ರಕರಣ ದಾಖಲು

ಆ ಮೂಲಕ ಒಟ್ಟಾರೆ ಸೋಂಕಿತರು ಸಂಖ್ಯೆ 6,24,594ಕ್ಕೆ ಏರಿಕೆಯಾಗಿದೆ. ಇದು ಈ ವರೆಗಿನ ಗರಿಷ್ಠ ಸಂಖ್ಯೆಯಾಗಿದ್ದು, ಹೊಸ ಸೋಂಕಿತರ ಪ್ರಮಾಣದಲ್ಲಿ ಏಕಾಏಕಿ ಶೇ.23.28ರಷ್ಟು ಏರಿಕೆಯಾಗಿದೆ.

Bangladesh Imposes 7-Day Total Lockdown From April 5

ಈ ಬಗ್ಗೆ ಬಾಂಗ್ಲಾದೇಶ ಮಾಧ್ಯಮಗಳು ವರದಿ ಮಾಡಿವೆ, ಇದೇ ಸೋಮವಾರ ಅಂದರೆ ಏಪ್ರಿಲ್ 5 ರಿಂದಲೇ 7 ದಿನಗಳ ಲಾಕ್ ಡೌನ್ ಹೇರಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕೇವಲ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಹಾಗೆಯೇ ಶುಕ್ರವಾರ ಒಂದೇ ದಿನ 50 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಬಾಂಗ್ಲಾದೇಶದಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 9,155ಕ್ಕೆ ಏರಿಕೆಯಾಗಿದೆ ಎಂದು ಬಾಂಗ್ಲಾದೇಶ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಲಾಕ್ ಡೌನ್ ಬಗ್ಗೆ ಬಾಂಗ್ಲಾದೇಶ ಸಾರಿಗೆ ಸಚಿವ ಒಬೇದುಲ್ ಖಾದರ್ ಅವರು ಘೋಷಣೆ ಮಾಡಿದ್ದಾರೆ ಎಂದು ಬಾಂಗ್ಲಾದೇಶ ಮಾಧ್ಯಮಗಳು ವರದಿ ಮಾಡಿವೆ.

English summary
In an effort to prevent the spread of coronavirus in the country, the Bangladesh government on Saturday imposed seven-day total lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X