Kamala Harris: ಕಮಲಾ ಹ್ಯಾರಿಸ್ ಶಕ್ತಿ ಹೆಚ್ಚಿಸಿದ ಅಮೆರಿಕ ಮಾಜಿ ಅಧ್ಯಕ್ಷ
ಅಮೆರಿಕದಲ್ಲಿ ಚುನಾವಣೆಗಳ ಕಾವು ದಿನೇ ದಿನೇ ಏರುತ್ತಿದೆ. ಈ ಚುನಾವಣೆಯಲ್ಲಿ ಗೆದ್ದು ಗದ್ದುಗೆ ಹಿಡಿಯಲು ಅಲ್ಲಿನ ಎರಡು ಪಕ್ಷಗಳು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿವೆ. ಈ ವರ್ಷ ನವೆಂಬರ್ 5 ರಂದು ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಈ ಚುನಾವಣೆಗಳಲ್ಲಿ 16 ಕೋಟಿ ನೋಂದಾಯಿತ ಮತದಾರರು ಅಮೆರಿಕದ 60ನೇ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ.
ಡೆಮಾಕ್ರಟಿಕ್ ಪಕ್ಷದ ಸಂಭವನೀಯ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರೀಸ್ ಅವರಿಗೆ ಎಲ್ಲಡೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಸದ್ಯ ಇವರ ಹ್ಯಾರೀಸ್ ಅವರ ಜನಪ್ರೀಯತೆ ನಿಜಕ್ಕೂ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೋನಾಲ್ಡ್ ಟ್ರಂಪ್‌ಗೆ ತಲೆ ನೋವಾಗಿದೆ. ಈ ಬೆನ್ನಲ್ಲೆ ಇತ್ತೀಚಿಗೆ ಕಮಲಾ ಹ್ಯಾರೀಸ್‌ಗೆ ಅಮೆರಿಕದ ಮಾಜಿ ಅಧ್ಯಕ್ಷ ಬೆಂಬಲವನ್ನು ಸೂಚಿಸಿದ್ದಾರೆ.

ಕರೆ ಮಾಡಿದ ಮಾಜಿ ಅಧ್ಯಕ್ಷ
ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಶುಕ್ರವಾರ ಅಧ್ಯಕ್ಷ ಸ್ಥಾನಕ್ಕೆ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ಗೆ ತಮ್ಮ ಬೆಂಬಲವನ್ನು ಘೋಷಿಸಿದರು. ಇವರಿಬ್ಬರೂ ಶುಕ್ರವಾರ (ಜುಲೈ 26) ಕಮಲಾ ಹ್ಯಾರಿಸ್‌ಗೆ ದೂರವಾಣಿ ಮೂಲಕ ಬೆಂಬಲ ನೀಡಿದರು.
It means so much to have your endorsements, @MichelleObama and @BarackObama.
— Kamala Harris (@KamalaHarris) July 26, 2024
Let’s get to work. pic.twitter.com/rAuTyIlCai
ಇದಕ್ಕೆ ಸಂಬಂಧಿಸಿದಂತೆ ಬರಾಕ್ ಒಬಾಮಾ ಅವರು ಸಮಾಜಿಕ ತಾಣದಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಇದರಲ್ಲಿ ಮಿಚೆಲ್ ಹ್ಯಾರಿಸ್ ಗೆ ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

ವಿಡಿಯೋ ವೈರಲ್
ಈ ವಿಡಿಯೋದಲ್ಲಿ ಒಬಾಮಾ ಮತ್ತು ಅವರ ಪತ್ನಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಜೊತೆ ಮಾತನಾಡುತ್ತಿರುವುದನ್ನು ಕಾಣಬಹುದು. ಫೋನ್ ಮಾಡುವ ಮೂಲಕ ನಮ್ಮ ಬೆಂಬಲ ನಿಮಗೆ ಇರುವುದಾಗಿ ದಂಪತಿಗಳು ತಿಳಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತೇವೆ ಎಂದು ಹೇಳಲು ಹೇಳಿದರು.
ಇದೇ ವೇಳೆ ಅಮೆರಿಕದ ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಕಮಲಾ ಹ್ಯಾರಿಸ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. "ನಿಮ್ಮ ಬಗ್ಗೆ ನನಗೆ ಹೆಮ್ಮೆ ಇದೆ. ನಿಜಕ್ಕೂ ಇದು ಐತಿಹಾಸಿಕ ಕ್ಷಣವಾಗಿದೆ" ಎಂದು ಹೇಳಿದ್ದಾರೆ. ಇದೇ ವೇಳೆ US ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾಜಿ ಅಧ್ಯಕ್ಷರ ಪ್ರೀತಿ ಹಾಗೂ ಸ್ನೇಹಕ್ಕಾಗಿ ಕೃತಜ್ಞತೆಗಳನ್ನು ತಿಳಿಸಿದ್ದಾರೆ. ನವೆಂಬರ್ 5 ರ ಚುನಾವಣೆಗೆ ಮೂರು ತಿಂಗಳಲ್ಲಿ ಅವರೊಂದಿಗೆ ಪ್ರಚಾರ ಮಾಡಲು ಉತ್ಸುಕತೆಯನ್ನು ವ್ಯಕ್ತಪಡಿಸಿದರು.
ಒಬಾಮಾ, ಹ್ಯಾರಿಸ್ ಅವರನ್ನು ಔಪಚಾರಿಕವಾಗಿ ಅನುಮೋದಿಸಿದ ಪಕ್ಷದ ವ್ಯಕ್ತಿಗಳಲ್ಲಿ ಒಬ್ಬರು. ವಾಸ್ತವವಾಗಿ, ಯುಎಸ್ ಅಧ್ಯಕ್ಷ ಜೋ ಬಿಡನ್ ಈ ಚುನಾವಣೆಯಿಂದ ದೂರ ಸರಿದಿದ್ದಾರೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇದಾದ ನಂತರ ಕಮಲಾ ಹ್ಯಾರಿಸ್ ಹೆಸರು ಕೇಳಿ ಬಂದಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications