ಬೀರತ್ ನಲ್ಲಿ ಭಾರೀ ಸ್ಫೋಟದಿಂದ 100ಕ್ಕೂ ಹೆಚ್ಚು ಮಂದಿಗೆ ಗಾಯ
ಲೆಬನಾನ್, ಆಗಸ್ಟ್.04: ಲೆಬನಾನ್ ರಾಜಧಾನಿ ಬೀರತ್ ನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಸ್ಫೋಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.
Recommended Video
ಬೀರತ್ ಬಂದರಿನಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದಾಗಿ ಸುತ್ತಮುತ್ತಲಿನ ಕಟ್ಟಡಗಳಿಗೆ ಹಾನಿಯಾಗಿದ್ದು, ಕಿಟಕಿ ಭಾಗಗಳಲ್ಲಿ ಕಿಟಕಿಗಳು ಚೂರುಚೂರಾಗಿವೆ. ರಾಜಧಾನಿಯ ಜನರಲ್ಲಿ ಆಂತಕವನ್ನು ಸೃಷ್ಟಿಸಿರುವ ಸ್ಫೋಟದ ಹಿಂದಿನ ಕಾರಣ ಏನು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಬೀರತ್ ನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವ ಹಮದ್ ಹಸನ್ ತಿಳಿಸಿದ್ದಾರೆ. ಬಂದರ್ ಸುತ್ತಲು ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಹೆಲಿಕಾಪ್ಟರ್ ಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸ್ಥಳೀಯ ಆಸ್ಪತ್ರೆಗೆ ಗಾಯಾಗಳು ಸ್ಥಳಾಂತರ:
ಇನ್ನು, ಬೀರತ್ ನಲ್ಲಿ ಸಂಭವಿಸಿದ ಸ್ಫೋಟದಿಂದ ಗಾಯಗೊಂಡ 100ಕ್ಕೂ ಹೆಚ್ಚು ಮಂದಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು ಎಂದು ಇಟಾಲಿಯನ್ ಹಡಗಿನ ಕ್ಯಾಪ್ಟನ್ ಓರಿಯಂಟ್ ಕ್ವೀನ್ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.












Click it and Unblock the Notifications