ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀರತ್ ನಲ್ಲಿ ಭಾರೀ ಸ್ಫೋಟದಿಂದ 100ಕ್ಕೂ ಹೆಚ್ಚು ಮಂದಿಗೆ ಗಾಯ

|
Google Oneindia Kannada News

ಲೆಬನಾನ್, ಆಗಸ್ಟ್.04: ಲೆಬನಾನ್ ರಾಜಧಾನಿ ಬೀರತ್ ನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಸ್ಫೋಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.

Recommended Video

ರಸಗೊಬ್ಬರ ಮತ್ತು ಬಾಂಬ್ ಬಳಕೆಯಲ್ಲಿ ಬಳಸುವ ಅಮೋನಿಯಂ ನೈಟ್ರೇಟ್ ಸ್ಪೋ | Oneindia Kannada

ಬೀರತ್ ಬಂದರಿನಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದಾಗಿ ಸುತ್ತಮುತ್ತಲಿನ ಕಟ್ಟಡಗಳಿಗೆ ಹಾನಿಯಾಗಿದ್ದು, ಕಿಟಕಿ ಭಾಗಗಳಲ್ಲಿ ಕಿಟಕಿಗಳು ಚೂರುಚೂರಾಗಿವೆ. ರಾಜಧಾನಿಯ ಜನರಲ್ಲಿ ಆಂತಕವನ್ನು ಸೃಷ್ಟಿಸಿರುವ ಸ್ಫೋಟದ ಹಿಂದಿನ ಕಾರಣ ಏನು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

ಬೀರತ್ ನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವ ಹಮದ್ ಹಸನ್ ತಿಳಿಸಿದ್ದಾರೆ. ಬಂದರ್ ಸುತ್ತಲು ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಹೆಲಿಕಾಪ್ಟರ್ ಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

Beirut Huge Explosion: More Than Hundred Peoples Wounded

ಸ್ಥಳೀಯ ಆಸ್ಪತ್ರೆಗೆ ಗಾಯಾಗಳು ಸ್ಥಳಾಂತರ:

ಇನ್ನು, ಬೀರತ್ ನಲ್ಲಿ ಸಂಭವಿಸಿದ ಸ್ಫೋಟದಿಂದ ಗಾಯಗೊಂಡ 100ಕ್ಕೂ ಹೆಚ್ಚು ಮಂದಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು ಎಂದು ಇಟಾಲಿಯನ್ ಹಡಗಿನ ಕ್ಯಾಪ್ಟನ್ ಓರಿಯಂಟ್ ಕ್ವೀನ್ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

English summary
Beirut Huge Explosion: More Than Hundred Peoples Wounded, Shifted To Hospitals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X