Narendra Modi: ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಜೋ ಬೈಡನ್; ಮಹತ್ವದ ಚರ್ಚೆ
ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಡೆಲವೇರ್‌ನಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ವಿಶ್ವಸಂಸ್ಥೆಯಲ್ಲಿ ಉನ್ನತ ಮಟ್ಟದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಭೇಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾದ ಚಟುವಟಿಕೆಗಳು ಮತ್ತು ಉಕ್ರೇನ್ ಯುದ್ಧ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಫಿಲಡೆಲ್ಫಿಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರಿಗೆ ಅದ್ದೂರಿ ಸ್ವಾಗತ ಸಿಕ್ಕಿತು, ನೂರಾರು ಭಾರತೀಯರು ಪ್ರಧಾನಿಯನ್ನು ನೋಡಲು ಉತ್ಸುಕರಾಗಿ ನಿಂತಿದ್ದರು. ಭಾರತೀಯರ ಜೊತೆ ಮಾತುಕತೆ ನಡೆಸಿದ ಮೋದಿ, ಅಲ್ಲಿಂದ ಡೆಲವೇರ್‌ನಲ್ಲಿರುವ ಹೋಟೆಲ್‌ಗೆ ತೆರಳಿದರು.
ಡೆಲವೇರ್‌ನಲ್ಲಿ ಪ್ರಧಾನಿ ಮೋದಿ ತಂಗುವ ಹೋಟೆಲ್ ಡುಪಾಂಟ್‌ನಲ್ಲಿ ಸಂಗೀತ, ನೃತ್ಯ ಮತ್ತು ಶುಭಾಶಯಗಳೊಂದಿಗೆ ಸ್ವಾಗತಿಸಲಾಯಿತು. ಹೋಟೆಲ್‌ನಲ್ಲಿ ಕೂಡ ಪ್ರಧಾನಿ ಮೋದಿ ಭಾರತೀಯ ಸಮುದಾಯದ ಜೊತೆ ಸಂವಾದ ನಡೆಸಿದರು.
ಭಾರತೀಯ ಸಮುದಾಯದ ಜೊತೆ ಮಾತನಾಡಿದ ಅವರು, ಅಮೆರಿಕದಲ್ಲಿ ಭಾರತೀಯರ ಜೊತೆ ಚರ್ಚೆ ನಡೆಸುವುದು ಸಂತೋಷದಾಯಕ ವಿಚಾರ ಎಂದು ಹೇಳಿದರ. ಭಾನುವಾರ ಅನಿವಾಸಿ ಭಾರತೀಯರ ಜೊತೆ ಇರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಎದುರು ನೋಡುತ್ತಿರುವುದಾಗಿ ತಿಳಿಸಿದರು.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಭಾರತೀಯ ಸಮುದಾಯವು ಯುಎಸ್ಎಯಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿದೆ, ವಿವಿಧ ಕ್ಷೇತ್ರಗಳಲ್ಲಿ ಧನಾತ್ಮಕ ಪ್ರಭಾವ ಬೀರುತ್ತಿದೆ. ಅವರ ಜೊತೆ ಸಂವಹನ ನಡೆಸಲು ಯಾವಾಗಲೂ ಸಂತೋಷವಾಗುತ್ತದೆ. ಸೆಪ್ಟೆಂಬರ್ 22 ರ ಭಾನುವಾರದಂದು ಭಾರತದ ಕಾಲಮಾನ ರಾತ್ರಿ 9:30 ಕ್ಕೆ, ಇಲ್ಲಿನ ಭಾರತೀಯರನ್ನು ಉದ್ದೇಶಿಸಿ ಮಾತನಾಡುತ್ತೇನೆ." ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರು ಭೇಟಿಯ ಸಂದರ್ಭದಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಇತರ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರವನ್ನು ಬಲಪಡಿಸುವ ಮತ್ತು ಉಕ್ರೇನ್ ಮತ್ತು ಗಾಜಾ ಸಂಘರ್ಷಗಳಂತಹ ಜಾಗತಿಕ ಸವಾಲುಗಳನ್ನು ಎದುರಿಸುವತ್ತ ಗಮನಹರಿಸುತ್ತದೆ. ಕ್ವಾಡ್ ಶೃಂಗಸಭೆಯು ಅಧ್ಯಕ್ಷ ಜೋ ಬೈಡನ್‌ರ ತವರು ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ನಡೆಯಲಿದೆ.
ಶೃಂಗಸಭೆಯ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI), ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಸೆಮಿಕಂಡಕ್ಟರ್‌ಗಳಲ್ಲಿ ಪರಿಣತಿ ಹೊಂದಿರುವ ಪ್ರಮುಖ ಅಮೇರಿಕನ್ ಟೆಕ್ ಸಂಸ್ಥೆಗಳ ಸಿಇಒಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ನ್ಯೂಯಾರ್ಕ್‌ನ ಲಾಂಗ್ ಐಲ್ಯಾಂಡ್‌ನಲ್ಲಿ ಭಾರತೀಯ ಡಯಾಸ್ಪೊರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ ಮತ್ತು ಸಮೃದ್ಧಿ ಬೆಳೆಸುವ ಗುಂಪಿನ ಧ್ಯೇಯವನ್ನು ಮತ್ತಷ್ಟು ಹೆಚ್ಚಿಸಲು ಅಧ್ಯಕ್ಷ ಬಿಡೆನ್, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಸೇರಿದಂತೆ ಕ್ವಾಡ್‌ನ ನಾಯಕರ ಜೊತೆ ಚರ್ಚೆ ನಡೆಸಲು ಉತ್ಸುಕನಾಗಿದ್ದೇನೆ ಎಂದು ಭಾರತದಿಂದ ಹೊರಡುವ ಮುನ್ನ ಹೇಳಿದ್ದರು.












Click it and Unblock the Notifications