ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ: ಅಮಿತ್ ಶಾ ಭೇಟಿ ಬಳಿಕ ಬೊಮ್ಮಾಯಿ ಮುನ್ಸೂಚನೆ

|
Google Oneindia Kannada News

ನವದೆಹಲಿ, ಮೇ. 11: ರಾಜ್ಯದಲ್ಲಿ ಬೊಮ್ಮಾಯಿ ಸಂಪುಟ ಸರ್ಜರಿಗೆ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಸಂಜೆ ಮಾಡಿದ ಬಳಿಕ ಸಂಪುಟ ಪುನಾರಚನೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.

ಸಂಪುಟ ಪುನಾರಚನೆ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾಲೋಚನೆ ನಡೆಸಿದರು. ಆ ಬಳಿಕ ದೆಹಲಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ ಅವರು, ರಾಜಕೀಯದ ಬೆಳವಣಿಗೆ ಹಾಗೂ ಸಂಪುಟದ ಪುನಾರಚನೆ ಬಗ್ಗೆ ಚರ್ಚೆ ಯಾಗಿದೆ. ರಾಜ್ಯದ ರಾಜಕೀಯ ವಿದ್ಯಮಾನ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ, ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕುರಿತು ವರಿಷ್ಠರ ಜತೆ ಸಮಾಲೋಚನೆ ನಡೆಸಲಾಗಿದೆ. ಮುಂದಿನ ಸ್ಥಳೀಯ ಚುನಾವಣೆ ಗಮನದಲ್ಲಿಟ್ಟುಕೊಂಡು ಸಂಪುಟದ ಪುನಾರಚನೆ ಬಗ್ಗೆ ಎರಡು ಮೂರು ದಿನದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಂಪುಟದ ಪುನಾರಚನೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಇಂದು ಸಂಜೆ ಸುದೀರ್ಘ ಸಮಾಲೋಚನೆ ನೆಡಸಿದ ಬಳಿಕ ಸಂಪುಟ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಮುಂದಿನ ಎರಡು ಮೂರು ದಿನದಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಂಬರಲಿರುವ ರಾಜ್ಯ ಸಭೆ ಚುನಾವಣೆ ಬಗ್ಗೆಯೂ ಚರ್ಚೆ ಆಗಿದೆ ಎಂದು ಸಂಪುಟ ಪುನಾರಚನೆ ಆಗಲಿದೆ ಎಂಬ ಸುಳಿವು ನೀಡಿದ್ದಾರೆ.

BJP High Command Green Signal to Karnataka Cabinet Expansion

ತಕ್ಷಣಕ್ಕೆ ಸಂಪುಟ ಬದಲಾವಣೆ ಅಥವಾ ಪುನಾರಚನೆ ತೀರ್ಮಾನ ಇಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ, ರಾಜಕೀಯ ಪಕ್ಷದಲ್ಲಿ ಯಾವಾಗ ಏನು ಬೇಕಾದರೂ ಅಗಬಹುದು. ಒಟ್ಟಾರೆ ರಾಜಕೀಯ ಸ್ಥಿತಿಗತಿಗಳ ಮೇಲೆ ನಿರ್ಣಯ ಆಗುತ್ತವೆ. ಪ್ರಸ್ತಕ ರಾಜಕೀಯ ಸ್ಥಿತಿಗತಿಯ ಬಗ್ಗೆ ವರಿಷ್ಠರಿಗೆ ತಿಳಿಸಿದ್ದೇನೆ. ಮುಂದಿನ ಒಂದು ವಾರದದಲ್ಲಿ ಸಂಪುಟ ಪುನಾರಚನೆ ಮತ್ತು ಚುನಾವಣೆ ವಿಚಾರದಲ್ಲಿ ಮಹತ್ವದ ಬೆಳವಣಿಗೆ ಅಗಲಿವೆ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

BJP High Command Green Signal to Karnataka Cabinet Expansion

ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ಎಂಬುದು ಗುಜರಾತ್ ಮಾದರಿಯೋ ಅಥವಾ ಉತ್ತರ ಪ್ರದೇಶ ಮಾದರಿಯೋ ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಅದು ನಮ್ಮ ರಾಜಕೀಯ ಸ್ಥಿತಿ ಗತಿ ಮೇಲೆ ಆಗುತ್ತದೆ. ಇಲ್ಲಿನ ರಾಜಕೀಯ, ರಾಜಕಾರಣಿಗಳು, ರಾಜಕೀಯ ಸ್ಥಿತಿಗಳನ್ನು ಅವಲಂಬಿಸಿರುತ್ತದೆ ಎಂದಷ್ಟೇ ಮಾರ್ಮಿಕವಾಗಿ ನುಡಿದರು. ಬರುವ ಮೂರ್ನಾಲ್ಕು ದಿನದಲ್ಲಿ ಬೆಳವಣಿಗೆ ಆಗಲಿದೆ ಎಂದಷ್ಟೇ ತಿಳಿಸಿದರು.

BJP High Command Green Signal to Karnataka Cabinet Expansion

ಸಮಾಲೋಚನೆ ಸಭೆಯಲ್ಲಿ ಪ್ರಲ್ಹಾದ್ ಜೋಶಿ :

Recommended Video

Pollard ಹೊಡೆತ ತಿಂದ ಅಂಪೈರ್ ಸುಸ್ತ್,ರೋಹಿತ್ ಶರ್ಮಾ‌ ಶಾಕ್!! | Oneindia Kannada

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಜತೆಗಿದ್ದರು. ಇನ್ನು ಬೊಮ್ಮಾಯಿ ಅವರ ಸುದ್ದಿಗೋಷ್ಠಿ ವೇಳೆ ಸಚಿವ ಮುರುಗೇಶ್ ನಿರಾಣಿ ಕಾಣಿಸಿಕೊಂಡಿದ್ದರು. ನಿರಾಣಿ ಸಂಪುಟದಲ್ಲಿ ಕೈ ಬಿಡಲಾಗುತ್ತಿದೆ ಎಂಬ ವಿಚಾರದ ಬೆನ್ನಲ್ಲೇ ಬೊಮ್ಮಾಯಿ ಅವರ ಜತೆ ಗುರುತಿಸಿಕೊಂಡಿರುವುದು ನಾನಾ ಚರ್ಚೆಗೆ ನಾಂದಿ ಹಾಡಿದೆ.

English summary
BJP High Command Green Signal to Karnataka Cabinet Expansion. CM Basavarj Bommai to meet Amit Shah to discuss about the cabinet expansion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X