ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 14 ಮಂದಿ ಬಲಿ
ಕರಾಚಿ, ಏ.12: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ 14 ಮಂದಿ ಬಲಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶುಕ್ರವಾರ ಬೆಳಗ್ಗೆ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. 14 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಮೃತರಲ್ಲಿ ಕನಿಷ್ಠ ಏಳು ಮಂದಿ ಕ್ವೆಟ್ಟಾದ ಹಜಾರಿಗಂಜ್ ಪ್ರದೇಶದ ನಿವಾಸಿಗಳಾಗಿದ್ದಾರೆ. ಇದು ಬಲೂಚಿಸ್ಥಾನದ ಪ್ರಾಂತೀಯ ರಾಜಧಾನಿಯಾಗಿದ್ದು ಇಲ್ಲಿ ಹಜಾರ ಸಮುದಾಯದವರು ವಾಸಿಸುತ್ತಿದ್ದಾರೆ.

ಬಾಂಬ್ ಸ್ಫೋಟದ ತೀವ್ರತೆಯಲ್ಲಿ ತರಕಾರಿ ಮಾರುಕಟ್ಟೆಯ ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೂ ಹಾನಿ ಉಂಟಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳಿಗೆ ವಿವಿಧ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications