ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಬೂಲ್‌ನಲ್ಲಿ ಮಸೀದಿ ಬಳಿ ಬಾಂಬ್‌ ಸ್ಪೋಟ: 'ನಾಗರಿಕರು ಸಾವನ್ನಪ್ಪಿದ್ದಾರೆ' ಎಂದ ತಾಲಿಬಾನ್‌

|
Google Oneindia Kannada News

ಕಾಬೂಲ್‌, ಅಕ್ಟೋಬರ್‌ 03: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಭಾನುವಾರ ಬಾಂಬ್‌ ಸ್ಪೋಟವಾಗಿದ್ದು, ಕೆಲವು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್‌ ವಕ್ತಾರುರು ಹೇಳಿದ್ದಾರೆ.

ಈದ್ಗಾ ಮಸೀದಿಯಲ್ಲಿ ಸೇರಿದ್ದವರನ್ನು ಗುರಿಯಾಗಿಸಿಕೊಂಡು ಈ ಬಾಂಬ್‌ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಝಬಿಯುಲ್ಲಾ ಮುಜಾಹಿದ್, "ಈ ಬಾಂಬ್‌ ದಾಳಿ ನಡೆದ ಸಂದರ್ಭದಲ್ಲಿ ಮಸೀದಿಯಲ್ಲಿ ಪ್ರಾರ್ಥನೆಯ ಸೇವೆಯೊಂದು ನಡೆಯುತ್ತಿತ್ತು," ಎಂದು ತಿಳಿಸಿದ್ದಾರೆ.

 ತಾಲಿಬಾನ್‌ ಪರ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿ! ತಾಲಿಬಾನ್‌ ಪರ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿ!

"ಪ್ರಾಥಮಿಕ ಮಾಹಿತಿ ಪ್ರಕಾರ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ," ಎಂದು ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯ್ಯದ್ ಖೋಸ್ತಿ ತಿಳಿಸಿದ್ದಾರೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆಯು ವರದಿ ಮಾಡಿದೆ. ಇನ್ನು ಸ್ಥಳಕ್ಕೆ ಆಂಬುಲೆನ್ಸ್‌ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದೆ.

Bomb targets mosque in Kabul, kills ‘number of civilians’, says Taliban

ಇನ್ನು ತಾಲಿಬಾನ್‌ ವಕ್ತಾರರು, "ಈವರೆಗೆ ಈ ಸ್ಪೋಟದ ಹೊಣೆಯನ್ನು ಯಾವುದೇ ಭಯೋತ್ಪಾದಕ ಸಂಘಟನೆಗಳು ಹೊತ್ತುಕೊಂಡಿಲ್ಲ. ಈಗ ಮಸೀದಿಯ ಸುತ್ತ ಜನರ ಸಂಚಾರವನ್ನು ನಿಷೇಧ ಮಾಡಲಾಗಿದೆ," ಎಂದು ಹೇಳಿದ್ದಾರೆ.

ತಾಲಿಬಾನ್‌ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದ ಬಳಿಕ ತಾಲಿಬಾನ್‌ ವಿರುದ್ಧ ಇಸ್ಲಾಮಿಕ್ ಸ್ಟೇಟ್ ಗುಂಪು ಉಗ್ರರ ದಾಳಿಗಳು ಹೆಚ್ಚಾಗಿದೆ ಎಂದು ವರದಿಯಾಗಿದೆ. ಈ ಎರಡು ಉಗ್ರವಾಗಿ ಸಂಘಟನೆಗಳ ನಡುವೆ ದಾಳಿಯು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇಸ್ಲಾಮಿಕ್ ಸ್ಟೇಟ್ ಗುಂಪು ತಾಲಿಬಾನ್‌ ತನ್ನ ವಿರೋಧಿ ಎಂದು ಹೇಳಿದೆ. ಈ ಹಿಂದೆ ಕೆಲವು ದಾಳಿಗಳ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪು ಹೊತ್ತುಕೊಂಡಿದೆ.

ಇನ್ನು ಭಾನುವಾರ ಮಧ್ಯಾಹ್ನ ಬಾಂಬ್​ಸ್ಫೋಟದಿಂದ ಸಾವುನೋವು ಸಂಭವಿಸಿದೆ ಎಂದು ತಾಲಿಬಾನ್ ಸರ್ಕಾರದ ಮಾಹಿತಿ ಮತ್ತು ಸಂಸ್ಕೃತಿ ಸಚಿವರೂ ಆಗಿರುವ ಮುಜಾಹಿದ್ ಉರ್ದುವಿನಲ್ಲಿ ಟ್ವೀಟ್‌ ಮಾಡಿದ್ದರು.

ಆಗಸ್ಟ್‌ ತಿಂಗಳಿನಲ್ಲಿ ಕಾಬೂಲ್‌ನ ಹಮೀದ್‌ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಸಂಭವಿಸಿದ್ದು, ಅಮೆರಿಕ ಭದ್ರತಾಪಡೆಗೆ ಸೇರಿದ 12 ಮದಿಯ ಜೊತೆಗೆ ಹತ್ತಾರು ಮಂದಿ ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ಐಸಿಸ್-ಕೆ ಹೊತ್ತುಕೊಂಡಿತ್ತು.

(ಒನ್‌ಇಂಡಿಯಾ ಸುದ್ದಿ)

English summary
Bomb targets mosque in Kabul, kills ‘number of civilians’, says Taliban.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X