ಪ್ಯಾರಿಸ್‌ನ ಐಫೆಲ್ ಟವರ್‌ನಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ

ಪ್ಯಾರಿಸ್, ಸೆಪ್ಟೆಂಬರ್ 23: ಪ್ಯಾರಿಸ್‌ನಲ್ಲಿರುವ ಪ್ರಖ್ಯಾತ ಐಫೆಲ್ ಟವರ್‌ನಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕೂಡಲೇ ಅಲ್ಲಿದ್ದ ಜನರನ್ನು ಸ್ಥಳಾಂತರ ಮಾಡಲಾಗಿದೆ.

ಫ್ರಾನ್ಸ್​ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ಐಫೆಲ್​​ ಟವರ್​ ಇರುವ ಪ್ರದೇಶದಲ್ಲಿ ಜನರು ಬರದಂತೆ ತಡೆಯಲು ಬಿಗಿ ಬಂದೋಬಸ್ತ್​ ಏರ್ಪಡಿಸಲಾಗಿದೆ.

ಬುಧವಾರ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಐಫೆಲ್​ ಟವರ್​ ಬಳಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಹಾಕಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.ಸ್ಥಳದ ಸುತ್ತ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬಾಂಬ್​ ನಿಷ್ಕ್ರಿಯ ದಳ ಆಗಮಿಸಿದ್ದು, ಶೋಧ ಕಾರ್ಯಾಚಣೆ ನಡೆಸುತ್ತಿದೆ.

Bomb Threat In Paris, Police Evacuates Area Around Eiffel Tower

ಪ್ಯಾರಿಸ್​ ಲ್ಯಾಂಡ್​ ಮಾರ್ಕ್​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಮುಚ್ಚಲಾಗಿದ್ದು, ಜನರು ಆಗಮಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ.

ಬಾಂಬ್​ ಬೆದರಿಕೆ ಇದೇ ಮೊದಲೇನಲ್ಲ. ಈ ಹಿಂದೆಯು ಕರೆಗಳು ಬಂದಿದ್ದು, ಹುಸಿ ಕರೆಗಳಾಗಿವೆ. ಆದರೂ ಸುರಕ್ಷತಾ ದೃಷ್ಟಿಯಿಂದ ಕರೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.

ಬಾಂಬ್​ ಬೆದರಿಕೆ ಹಿನ್ನೆಲೆ ಮುಂದಿನ ಆದೇಶದವರೆಗೂ ಸದ್ಯ ಐಫೆಲ್​ ಟವರ್​ ವೀಕ್ಷಣೆಯನ್ನು ರದ್ದು ಮಾಡಲಾಗಿದೆ. ಸುತ್ತಲಿನ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕರೆ ಎಲ್ಲಿಂದ ಬಂತು ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+