ಬ್ರೆಜಿಲ್: 24 ಗಂಟೆಗಳಲ್ಲಿ ಅತಿಹೆಚ್ಚು ಕೊವಿಡ್-19 ಸಾವಿನ ಪ್ರಕರಣ ದಾಖಲು
ನವದೆಹಲಿ, ಏಪ್ರಿಲ್ 12: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಹೊಡೆತಕ್ಕೆ ಇಡೀ ಜಗತ್ತು ತತ್ತರಿಸಿ ಹೋಗಿದೆ. ಅಮೆರಿಕಾದಲ್ಲಿ ಪರಿಸ್ಥಿತಿ ಮೊದಲಿಗಿಂತ ಕೊಂಚ ಸುಧಾರಿಸಿಕೊಂಡಿದ್ದರೆ ಭಾರತದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ.
ಬ್ರೆಜಿಲ್ ರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಜೊತೆಗೆ ಸಾವಿನ ಸಂಖ್ಯೆ ಮಿತಿಮೀರಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಗತ್ತಿನಲ್ಲೇ ಅತಿಹೆಚ್ಚು ಕೊವಿಡ್-19 ಸಾವಿನ ಪ್ರಕರಣಗಳು ಪತ್ತೆಯಾಗಿವೆ.
ಒಂದೇ ದಿನದಲ್ಲಿ ಕೊವಿಡ್-19 ಸೋಂಕಿನಿಂದ 1824 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 3,53,293ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 37537 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,34,82,543ಕ್ಕೆ ಏರಿಕೆಯಾಗಿದೆ. 1,18,80,803 ಸೋಂಕಿತರು ಗುಣಮುಖರಾಗಿದ್ದು, 12,48,447 ಸಕ್ರಿಯ ಪ್ರಕರಣಗಳು ವರದಿಯಾಗಿದೆ.

ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿ-ಅಂಶ:
ವಿಶ್ವದಲ್ಲಿ ಒಂದೇ ದಿನ ಒಟ್ಟು 6,19,919 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,66,15,916ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 7705 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 29,48,856ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 10,98,41,859 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,38,25,201 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.












Click it and Unblock the Notifications