ಬ್ರೆಜಿಲ್: ಒಂದೇ ದಿನ ಕೊರೊನಾಗೆ 2659 ಮಂದಿ ಸಾವು

ಬ್ರಸಿಲಿಯಾ, ಮಾರ್ಚ್ 19: ಬ್ರೆಜಿಲ್ ನಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಮರಣಮೃದಂಗ ಬಾರಿಸುತ್ತಿದೆ. ಪ್ರತಿನಿತ್ಯ 80 ಸಾವಿರಕ್ಕೂ ಹೆಚ್ಚು ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿರಾರು ಮಂದಿ ಪ್ರಾಣ ಬಿಡುತ್ತಿರುವುದು ವರದಿಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ ಕೊರೊನಾವೈರಸ್ ಸೋಂಕಿನಿಂದ 2659 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರಿಂದ ಮಹಾಮಾರಿಗೆ ಇದುವರೆಗೂ ಬಲಿಯಾದವರ ಸಂಖ್ಯೆಯು 2,87,795ಕ್ಕೆ ಏರಿಕೆಯಾಗಿದೆ.

ಕೊರೊನಾ ಹಾವಳಿ: ಬ್ರೆಜಿಲ್ ಎಂದರೆ ಬೆಚ್ಚಿ ಬೀಳುವಂತಾ ಪರಿಸ್ಥಿತಿ!
ಒಂದೇ ದಿನ 87,169 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಬ್ರೆಜಿಲ್ ನಲ್ಲಿ ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 1,17,87,600ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೂ 1,03,39,432 ಸೋಂಕಿತರು ಗುಣಮುಖರಾಗಿದ್ದು, 11,60,373 ಸಕ್ರಿಯ ಪ್ರಕರಣಗಳು ಇರುವುದು ಪತ್ತೆಯಾಗಿದೆ.

Brazil Reports 2659 Coronavirus Death Cases In Last 24 Hours

Recommended Video

      ಸೌಮ್ಯಾ ರೆಡ್ಡಿ ಪೊಲೀಸರ ಜೊತೆ ಕಿರಿಕ್ | Oneindia Kannada

      ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿ-ಅಂಶ:
      ವಿಶ್ವದಲ್ಲಿ ಒಂದೇ ದಿನ ಒಟ್ಟು 5,40,431 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,23,52,446ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 10413 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 27,02,269ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,86,43,907 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,10,06,270 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+