ಕೊರೊನಾ ಹಾವಳಿ: ಬ್ರೆಜಿಲ್ ಎಂದರೆ ಬೆಚ್ಚಿ ಬೀಳುವಂತಾ ಪರಿಸ್ಥಿತಿ!
ನವದೆಹಲಿ, ಫೆಬ್ರವರಿ 18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸಕ್ಕೆ ಬ್ರೆಜಿಲ್ ರಾಷ್ಟ್ರವು ಅಕ್ಷರಶಃ ನಲುಗಿದೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾಗಿಂತಲೂ ಬ್ರೆಜಿಲ್ ನಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣ ಮತ್ತು ಸಾವಿನ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲೇ 90830 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1,17,00,431ಕ್ಕೆ ಏರಿಕೆಯಾಗಿದೆ.
ಬ್ರೆಜಿಲ್ ನಲ್ಲಿ ಒಂದೇ ದಿನ ಕೊವಿಡ್-19 ಸೋಂಕಿಗೆ 2736 ಜನರು ಪ್ರಾಣ ಬಿಟ್ಟಿದ್ದು, ಈವರೆಗೂ ಮಹಾಮಾರಿಗೆ 2,85,136 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೆ 1,02,87,057 ಸೋಂಕಿತರು ಗುಣಮುಖರಾಗಿದ್ದು, 11,28,238 ಸಕ್ರಿಯ ಪ್ರಕರಣಗಳಿವೆ.

ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿ-ಅಂಶ:
ವಿಶ್ವದಲ್ಲಿ ಒಂದೇ ದಿನ ಒಟ್ಟು 5,27,664 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,18,02,787ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 9647 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 26,91,747ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,81,98,310 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,09,12,730 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.












Click it and Unblock the Notifications