ಬ್ರೆಜಿಲ್: ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 3462 ಮಂದಿ ಸಾವು!

ನವದೆಹಲಿ, ಏಪ್ರಿಲ್ 15: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಹೊಡೆತಕ್ಕೆ ಇಡೀ ಜಗತ್ತು ತತ್ತರಿಸಿ ಹೋಗಿದೆ. ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಜಗತ್ತಿನ 2ನೇ ರಾಷ್ಟ್ರವಾಗಿರುವ ಭಾರತದಲ್ಲಿ ಇದೀಗ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ.

ಕೊರೊನಾವೈರಸ್ ಹೊಸ ಪ್ರಕರಣಗಳ ಮಧ್ಯೆ ಮಹಾಮಾರಿಗೆ ಅತಿಹೆಚ್ಚು ಸಾವಿನ ಪ್ರಕರಣಗಳು ಬ್ರೆಜಿಲ್ ರಾಷ್ಟ್ರದಲ್ಲಿ ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ಜಗತ್ತಿನಲ್ಲೇ ಅತಿಹೆಚ್ಚು ಕೊವಿಡ್-19 ಸಾವಿನ ಪ್ರಕರಣಗಳು ಇದೊಂದೇ ರಾಷ್ಟ್ರದಲ್ಲಿ ವರದಿಯಾಗಿವೆ.

ಒಂದೇ ದಿನದಲ್ಲಿ ಕೊವಿಡ್-19 ಸೋಂಕಿನಿಂದ 3462 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 3,62,180ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 75998 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,36,77,564ಕ್ಕೆ ಏರಿಕೆಯಾಗಿದೆ. 1,21,70,771 ಸೋಂಕಿತರು ಗುಣಮುಖರಾಗಿದ್ದು, 11,44,613 ಸಕ್ರಿಯ ಪ್ರಕರಣಗಳು ವರದಿಯಾಗಿದೆ.

Brazil Reports 3462 Coronavirus Death Cases In Last 24 Hours

ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿ-ಅಂಶ:

ವಿಶ್ವದಲ್ಲಿ ಒಂದೇ ದಿನ ಒಟ್ಟು 8,03,194 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,88,20,166ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 13513 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 29,84,901ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 11,16,05,220 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,42,30,045 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+