ಬ್ರೆಜಿಲ್: ಒಂದೇ ದಿನ ಕೊರೊನಾ ಸೋಂಕಿಗೆ 3774 ಮಂದಿ ಬಲಿ!

ನವದೆಹಲಿ, ಏಪ್ರಿಲ್ 16: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಹೊಡೆತಕ್ಕೆ ಇಡೀ ಜಗತ್ತು ತತ್ತರಿಸಿ ಹೋಗಿದೆ. ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಜಗತ್ತಿನ 2ನೇ ರಾಷ್ಟ್ರವಾಗಿರುವ ಭಾರತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 2 ಲಕ್ಷದ ಗಡಿ ದಾಟಿದೆ.

ಕೊರೊನಾವೈರಸ್ ಹೊಸ ಪ್ರಕರಣಗಳ ಏರಿಕೆ ಮಧ್ಯೆ ಮಹಾಮಾರಿಗೆ ಬ್ರೆಜಿಲ್ ನಲ್ಲಿ ಅತಿಹೆಚ್ಚು ಸಾವಿನ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಜಗತ್ತಿನಲ್ಲೇ ಅತಿಹೆಚ್ಚು ಕೊವಿಡ್-19 ಸಾವಿನ ಪ್ರಕರಣಗಳು ಇದೊಂದೇ ರಾಷ್ಟ್ರದಲ್ಲಿ ವರದಿಯಾಗಿವೆ.

ಒಂದೇ ದಿನದಲ್ಲಿ ಕೊವಿಡ್-19 ಸೋಂಕಿನಿಂದ 3774 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 3,65,954ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 80529 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,37,58,093ಕ್ಕೆ ಏರಿಕೆಯಾಗಿದೆ. 1,22,36,295 ಸೋಂಕಿತರು ಗುಣಮುಖರಾಗಿದ್ದು, 11,55,844 ಸಕ್ರಿಯ ಪ್ರಕರಣಗಳು ವರದಿಯಾಗಿದೆ.

Brazil Reports 3774 Coronavirus Death Cases In Last 24 Hours

ಜಗತ್ತಿನಾದ್ಯಂತ ಕೊರೊನಾವೈರಸ್:

ವಿಶ್ವದಲ್ಲಿ ಒಂದೇ ದಿನ ಒಟ್ಟು 8,36,294 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,96,65,916ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 13839 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 29,98,843ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 11,87,52,504 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 1,79,14,569 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+