ಕೊರೊನಾವೈರಸ್ ಅಪಾಯದಲ್ಲಿ ಭಾರತವನ್ನೇ ಹಿಂದಿಕ್ಕಿದ ಬ್ರೆಜಿಲ್!

ನವದೆಹಲಿ, ಮಾರ್ಚ್ 15: ಜಗತ್ತಿನಲ್ಲೇ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಮೂರನೇ ಸ್ಥಾನಕ್ಕೆ ಕುಸಿದಿದೆ. ಕೊವಿಡ್-19 ಹಾವಳಿಗೆ ಅಮೆರಿಕಾದ ನಂತರ ಬ್ರೆಜಿಲ್ ರಾಷ್ಟ್ರವು ಹೈರಾಣಾಗಿದೆ.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾಗಿಂತಲೂ ಬ್ರೆಜಿಲ್ ನಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 1,111 ಜನರು ಪ್ರಾಣ ಬಿಟ್ಟಿದ್ದು, ಒಂದೇ ದಿನ 44,120 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಬ್ರೆಜಿಲ್ ನಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,14,83,370ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾದಿಂದ 2,78,327 ಜನರು ಪ್ರಾಣ ಬಿಟ್ಟಿದ್ದಾರೆ. 1,00,63,808 ಸೋಂಕಿತರು ಗುಣಮುಖರಾಗಿದ್ದು, 11,41,235 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

Brazil Reports Highest Coronavirus Cases, Jump To Second Place In Worlds List

ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿ-ಅಂಶ:

ವಿಶ್ವದಲ್ಲಿ ಒಂದೇ ದಿನ ಒಟ್ಟು 3,59,522 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,04,02,299ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 5606 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 26,64,781ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,69,46,442 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,07,91,076 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+