24 ಗಂಟೆಗಳಲ್ಲಿ ಕೊರೊನಾದಿಂದ ಅತಿಹೆಚ್ಚು ಜನ ಪ್ರಾಣ ಬಿಟ್ಟಿದ್ದೆಲ್ಲಿ?
ನವದೆಹಲಿ, ಮಾರ್ಚ್ 16: ಬ್ರೆಜಿಲ್ ನಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಹೆಚ್ಚಿದೆ. ಅಂತಾರಾಷ್ಟ್ರೀಯ ಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿರುವ ಬ್ರೆಜಿಲ್ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳನ್ನು ಹೊಂದಿರುವ ಎರಡನೇ ರಾಷ್ಟ್ರವಾಗಿದೆ.
ಕಳೆದ 24 ಗಂಟೆಗಳಲ್ಲೇ 42107 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1,15,25,477ಕ್ಕೆ ಏರಿಕೆಯಾಗಿದೆ.
ಬ್ರೆಜಿಲ್ ನಲ್ಲಿ ಒಂದೇ ದಿನ ಕೊವಿಡ್-19 ಸೋಂಕಿಗೆ 1275 ಜನರು ಪ್ರಾಣ ಬಿಟ್ಟಿದ್ದು, ಈವರೆಗೂ ಮಹಾಮಾರಿಗೆ 2,79,602 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೆ 1,01,11,954 ಸೋಂಕಿತರು ಗುಣಮುಖರಾಗಿದ್ದು, 11,33,921 ಸಕ್ರಿಯ ಪ್ರಕರಣಗಳಿವೆ.

ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿ-ಅಂಶ:
ವಿಶ್ವದಲ್ಲಿ ಒಂದೇ ದಿನ ಒಟ್ಟು 3,34,164 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,07,62,230ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 6516 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 26,71,721ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,74,04,509 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,06,86,000 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.












Click it and Unblock the Notifications